
ಬೆಂಗಳೂರು(ಜು.31): ರಾಜ್ಯಾದ್ಯಂತ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಮುಂದಿನ 48 ಗಂಟೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ 20 ಸೆಂ.ಮೀಗೂ ಅಧಿಕ ಮಳೆಯಾಗುವ ಲಕ್ಷಣ ಇರುವುದರಿಂದ ಈ ಎಲ್ಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ, ಹಾಸನ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’, ಮೈಸೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 4 ವರೆಗೆ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ, ಚಿಕ್ಕಮಗಳೂರಿನ ಕಳಸ ಹಾಗೂ ಕೊಡಗಿನ ಭಾಗಮಂಡಲದಲ್ಲಿ ಅತಿ ಹೆಚ್ಚು ತಲಾ 25 ಸೆಂ.ಮೀ ಮಳೆಯಾಗಿದೆ.
ಚಿಕ್ಕಮಗಳೂರು: ಭಾರೀ ಮಳೆ ಮಧ್ಯೆ ಕಾಡಾನೆಗಳ ಕಾಟ, ಕಂಗಾಲಾದ ಮಲೆನಾಡಿಗರು..!
ಕೊಟ್ಟಿಗೆಹಾರ ಹಾಗೂ ಆಗುಂಬೆಯಲ್ಲಿ ತಲಾ 21, ಕಮ್ಮರಡಿ 19, ಧರ್ಮಸ್ಥಳ 17, ಕೊಪ್ಪ 15, ಪೊನ್ನಂಪೇಟೆ 15, ಕ್ಯಾಸಲ್ ರಾಕ್ 14, ಮೂರ್ನಾಡುವಿನಲ್ಲಿ 13 , ಸುಳ್ಯ, ಮಾಣಿಯಲ್ಲಿ ತಲಾ 11, ಮಂಗಳೂರು, ಜೋಯಿಡಾ, ಬೆಳ್ತಂಗಡಿ ಹಾಗೂ ಜಯಪುರದಲ್ಲಿ ತಲಾ 10 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಭಾರೀ ಮಳೆ
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ