ಶೃಂಗೇರಿ ತಾಲೂಕಿನಾದ್ಯಂತ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಉತ್ತಮ ಮಳೆಯಾಗಿದ್ದು, ತುಂಗಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದೇ ವೇಳೆ, ಕೊಪ್ಪಳ ಜಿಲ್ಲೆಯಲ್ಲಿ ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಸೋಮವಾರ ಒಂದೇ ದಿನ 1 ಟಿಎಂಸಿಗಿಂತ ಅಧಿಕ ನೀರು ಹರಿದು ಬಂದಿದೆ.
ಬೆಂಗಳೂರು(ಜು.02): ರಾಜ್ಯದ ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಮುಂಗಾರು ಚುರುಕಾಗಿದೆ. ಭಾಗಮಂಡಲ ಸೇರಿ ಕೊಡಗಿನಾದ್ಯಂತ ಸೋಮವಾರ ಮಳೆ ಸುರಿಯಿತು.
ಇದೇ ವೇಳೆ, ಕಾರ್ಕಳ, ಹೆಬ್ರಿ ಸೇರಿ ಉಡುಪಿ ಜಿಲ್ಲೆಯ ಹಲವೆಡೆ, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಸಂಜೆ ವೇಳೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ.
ಮಂಡ್ಯ: ಭಾರೀ ಮಳೆಗೆ ಕೆಆರ್‌ಎಸ್ ಡ್ಯಾಂನಲ್ಲಿ ಒಂದೇ ದಿನ 3 ಅಡಿ ನೀರು ಏರಿಕೆ
ಶೃಂಗೇರಿ ತಾಲೂಕಿನಾದ್ಯಂತ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಉತ್ತಮ ಮಳೆಯಾಗಿದ್ದು, ತುಂಗಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದೇ ವೇಳೆ, ಕೊಪ್ಪಳ ಜಿಲ್ಲೆಯಲ್ಲಿ ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಸೋಮವಾರ ಒಂದೇ ದಿನ 1 ಟಿಎಂಸಿಗಿಂತ ಅಧಿಕ ನೀರು ಹರಿದು ಬಂದಿದೆ. ಇದು ಪ್ರಸಕ್ತ ಮುಂಗಾರು ಋತುವಿನಲ್ಲಿ ತುಂಗಭದ್ರಾ ಜಲಾಶಯಕ್ಕೆ ಹರಿದು ಬಂದ ಅತ್ಯಧಿಕ ಪ್ರಮಾಣದ ಒಳಹರಿವಾಗಿದೆ.