
ಬೆಂಗಳೂರು (ಮೇ.04): ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 2ನಲ್ಲಿ ಮಳೆ ನೀರು ಸೋರಿಕೆ ಉಂಟಾಗಿದ್ದು, ಜನರು ಪರದಾಡಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಮೇಲ್ಚಾವಣಿ ಸೋರಿಕೆ ಉಂಟಾಗಿದ್ದು, ಕಳೆದ 2 ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಉದ್ಘಾಟನೆ ಮಾಡಿದ್ರು.
ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಮಳೆ ನೀರು ಸೋರಿಕೆಯಾಗಿದ್ದು, ಕೇವಲ 30 ನಿಮಿಷಗಳ ಕಾಲ ಸುರಿದ ಮಳೆಗೆ ಟರ್ಮಿನಲ್-2 ರಲ್ಲಿ ನೀರು ತುಂಬಿಕೊಂಡಿದೆ. ಹವಾಮಾನ ವರದಿಗಳು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ 25 ಮಿಮೀ ಮಳೆಯನ್ನು ದಾಖಲಿಸಿದರೆ, ವಿಮಾನ ನಿಲ್ದಾಣವು ರಾತ್ರಿ 7 ರಿಂದ 10 ರವರೆಗೆ ಕನಿಷ್ಠ 9.8 ಮಿಮೀ ಮಳೆಯನ್ನು ದಾಖಲಿಸಿದೆ. ಇನ್ನು ಹೊಸ ಟರ್ಮಿನಲ್‌ನ ಕರ್ಬ್‌ಸೈಡ್‌ನಲ್ಲಿ ಸೋರಿಕೆಯಾಗಿರುವುದನ್ನು ವಿಮಾನ ನಿಲ್ದಾಣದ ನಿರ್ವಾಹಕರಾದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ಖಚಿತಪಡಿಸಿದೆ.
ಸೋಲಿಲ್ಲದ ಸರದಾರ ಸಿ.ಟಿ.ರವಿಗೆ ಕಮಲದ ಗರಡಿಯಲ್ಲಿ ಪಳಗಿದ ತಮ್ಮಯ್ಯ ಟಕ್ಕರ್
ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಚ್’ ನೀಡಲಾಗಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಮಂಗಳವಾರ ತುಮಕೂರಿನಲ್ಲಿ 11 ಸೆಂ.ಮೀ. ಮಳೆಯಾದ ವರದಿಯಾಗಿದೆ. ಉಳಿದಂತೆ ಪಾವಗಡದಲ್ಲಿ 9, ಚನ್ನಪಟ್ಟಣ 7, ರಾಮನಗರ, ಚಾಮರಾಜನಗರ ಜಿಲ್ಲೆ ಹರದನಹಳ್ಳಿ ಕೆವಿಕೆಯಲ್ಲಿ ತಲಾ 5, ವಿಜಯಪುರದ ನಾಲತವಾಡ, ತುಮಕೂರಿನ ಕುಣಿಗಲ್‌ನಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.
ಶಾಸಕ ಎಸ್.ಆರ್.ವಿಶ್ವನಾಥ್ ಒಬ್ಬ ರೌಡಿ: ಎಚ್.ಡಿ.ಕುಮಾರಸ್ವಾಮಿ
ಉಷ್ಣಾಂಶದಲ್ಲಿ ಏರಿಳಿತ: ರಾಜ್ಯಾದ್ಯಂತ ಮಳೆಯಾಗುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಇಳಿಕೆ ಉಂಟಾಗಿದೆ. ಮೇ ತಿಂಗಳಲ್ಲಿ ಅತಿ ಹೆಚ್ಚು ಬಿಸಿಲು ಇರುವ ರಾಯಚೂರಿನಲ್ಲಿ ಸಾಮಾನ್ಯವಾಗಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಇರುತ್ತಿತ್ತು. ಆದರೆ ಮಂಗಳವಾರ ಉಷ್ಣಾಂಶ 31.9 ರಷ್ಟುದಾಖಲಾಗಿದೆ. ಬೀದರ್, ಕಲಬುರಗಿ, ಬಳ್ಳಾರಿ, ಚಿಂತಾಮಣಿ, ಮುಂತಾದ ಜಿಲ್ಲೆಗಳಲ್ಲಿ ಉಷ್ಣಾಂಶ ಕಡಿಮೆಯಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಮೈಸೂರು, ಮಡಿಕೇರಿ ಹಾಗೂ ಹಾಸನದಲ್ಲಿ ಮಾತ್ರ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದ ಉಷ್ಣಾಂಶ ದಾಖಲಾದ ವರದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ