ಮುಂಗಾರು ಚುರುಕು: ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

By Kannadaprabha NewsFirst Published Jun 29, 2023, 7:01 AM IST
Highlights

ಕೇರಳದ ಕರಾವಳಿಯಿಂದ ಮಹಾರಾಷ್ಟ್ರದ ಕರಾವಳಿವರೆಗೆ ಗಾಳಿಯ ಒತ್ತಡ ಕಡಿಮೆಯಾದ ವಾತಾವರಣ ರೂಪಗೊಂಡಿರುವುದರಿಂದ ಮುಂದಿನ ಐದು ದಿನ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಯಲ್ಲಿ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 115 ಮಿ.ಮೀನಿಂದ 204 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು(ಜೂ.29): ಮುಂಗಾರು ಪುನಃ ಚುರುಕುಗೊಂಡಿರುವುದರಿಂದ ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಕೇರಳದ ಕರಾವಳಿಯಿಂದ ಮಹಾರಾಷ್ಟ್ರದ ಕರಾವಳಿವರೆಗೆ ಗಾಳಿಯ ಒತ್ತಡ ಕಡಿಮೆಯಾದ ವಾತಾವರಣ ರೂಪಗೊಂಡಿರುವುದರಿಂದ ಮುಂದಿನ ಐದು ದಿನ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಯಲ್ಲಿ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 115 ಮಿ.ಮೀನಿಂದ 204 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ.

Uttara Kannada: ಐಆರ್‌ಬಿಯಿಂದ ಅವೈಜ್ಞಾನಿಕ ರಸ್ತೆ ಕಾಮಗಾರಿ: ಮಳೆಗಾಲದಲ್ಲಿ ಕಾಣ್ತಿದೆ ಅಲ್ಲಲ್ಲಿ ಗುಡ್ಡ ಕುಸಿತ!

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮುಂದಿನ 24 ಗಂಟೆಯಲ್ಲಿ 65 ಮಿ.ಮೀ ನಿಂದ 114 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಜೂ.30 ರಿಂದ ಜುಲೈ 3ವರೆಗೆ ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಉತ್ತಮ ಮಳೆ ಆಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

click me!