ದ.ಕ ಜಿಲ್ಲೆ ಭಾರೀ ಮಳೆ ಸಾಧ್ಯತೆ: ತಹಶೀಲ್ದಾರ್‌ಗಳಿಗೆ ಶಾಲೆಗಳಿಗೆ ರಜೆ ಘೋಷಿಸುವ ಅಧಿಕಾರ: ಡಿಸಿ ಆದೇಶ

By Govindaraj S  |  First Published Jul 3, 2023, 11:59 PM IST

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಆಯಾ ತಾಲೂಕಿನ ತಹಶೀಲ್ದಾರ್‌ಗಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.


ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು

ಮಂಗಳೂರು (ಜು.03): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಆಯಾ ತಾಲೂಕಿನ ತಹಶೀಲ್ದಾರ್‌ಗಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Tap to resize

Latest Videos

ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶಿಲ್ದಾರ್ ಗಳು ರಜೆ ಘೋಷಿಸಲು ಸೂಚನೆ ನೀಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ-ಕಾಲೇಜು ಆಡಳಿತದಿಂದ ಮಾಹಿತಿ ಪಡೆದು ತಹಶಿಲ್ದಾರ್ ಗಳಿಗೆ ಸಲ್ಲಿಸಬೇಕು. ಸದ್ರಿ ವರದಿ ಪರಿಶೀಲಿಸಿ ತಹಶಿಲ್ದಾರ್ ಗಳು ರಜೆ ಘೋಷಣೆ ಮಾಡಬೇಕು.‌ ಪ್ರತೀ ದಿನ ಬೆಳಿಗ್ಗೆ 6 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ತಹಶಿಲ್ದಾರ್ ಗಳು ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ. ಮಳೆ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡಲು ತಹಶಿಲ್ದಾರ್‌ಗಳಿಗೆ ಸೂಚನೆ ನೀಡಲಾಗಿದ್ದು, ದ‌‌.ಕ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಆಸ್ಪತ್ರೆ ನಿರ್ವಹಣೆಯಲ್ಲಿ ಆಡಳಿತ ಮಂಡಳಿ ವಿಫಲ: ಸಚಿವ ಚಲುವರಾಯಸ್ವಾಮಿ ಅಸಮಾಧಾನ

ರಜೆ ಘೋಷಣೆ ಸಂಬಂಧ ಜಿಲ್ಲಾಧಿಕಾರಿ ಸೂಚನೆಗಳು
1) ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ನೀಡಿರುವ ಹವಾಮಾನ ಮುನ್ಸೂಚನೆಯನ್ನು ಪರಿಶೀಲನೆ ನಡೆಸುವುದು. ಹವಾಮಾನ ಮುನ್ಸೂಚನೆಯಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮಳೆ ಪರಿಸ್ಥಿತಿ ಮತ್ತು ಇತರೆ ಪರಿಸ್ಥಿತಿಯನ್ನು ಅವಲೋಕಿಸಿ ರಜೆಯನ್ನು ಘೋಷಣೆ ಮಾಡಲಾಗುವುದು.

2) ಅರೆಂಜ್ ಮತ್ತು ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ಇರುವಂತಹ ಸಂದರ್ಭ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ತಾಲೂಕುವಾರು ತಹಶೀಲ್ದಾರರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಪ್ರತಿದಿನ ಬೆಳಿಗ್ಗೆ 06.00 ಗಂಟೆಗೆ ವೀಡಿಯೋ ಸಂವಾದ ನಡೆಸಿ ಸ್ಥಳೀಯ ಹವಾಮಾನ ಪರಿಸ್ಥಿತಿಗನುಗುಣವಾಗಿ ಅಗತ್ಯತೆ ಕಂಡು ಬಂದಲ್ಲಿ ರಜೆ ಘೋಷಣೆಯ ಕುರಿತಂತೆ ಮಾಹಿತಿ ಪಡೆದು ಜಿಲ್ಲಾಮಟ್ಟದ ಸಮಿತಿಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದು. 

3) ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಸ್ತುವಾರಿ ವಹಿಸಿಕೊಂಡು ತೆಗೆದುಕೊಂಡ ಕ್ರಮದ ಬಗ್ಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಇವರಿಗೆ ಮಾಹಿತಿ ನೀಡುವುದು.

ರಾಜಕಾರಣದಲ್ಲಿ ಸೇವಾ ಮನೋಭಾವನೆ ಕಣ್ಮರೆ: ಸಂತೋಷ್‌ ಹೆಗ್ಡೆ ಆತಂಕ

4) ರಜೆ ಘೋಷಣೆಯ ಮಾಹಿತಿಯನ್ನು ತಕ್ಷಣವೇ ವಿದ್ಯಾರ್ಥಿಗಳ ಪೋಷಕರಿಗೆ ತಿಳಿಸುವ ವ್ಯವಸ್ಥೆಯನ್ನು CRP ಮತ್ತು BRP ಹಾಗೂ ಶಾಲಾ ಕಾಲೇಜುಗಳ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು ಮಾಡುವುದು, ಇದರ ಸಂಪೂರ್ಣ ಮೇಲ್ತುಸುವಾರಿಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಡಿಕೊಳ್ಳುವುದು.

click me!