ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಆರೆಂಜ್‌ ಅಲರ್ಟ್‌

By Kannadaprabha News  |  First Published Jun 27, 2023, 6:48 AM IST

ಜೂನ್‌ 10ರಂದು ರಾಜ್ಯಕ್ಕೆ ಮುಂಗಾರು ಮಳೆಯ ಪ್ರವೇಶವಾಗಿತ್ತು. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ರೂಪುಗೊಂಡ ಪರಿಣಾಮ ಮುಂಗಾರು ದುರ್ಬಲಗೊಂಡಿತ್ತು. ಹೀಗಾಗಿ, ಮುಂಗಾರು ರಾಜ್ಯ ವ್ಯಾಪಿಸುವಲ್ಲಿಯೂ ವಿಳಂಬವಾಗಿತ್ತು. ಜೂನ್‌ 24ರಂದು ಬೀದರ್‌ಗೆ ಪ್ರವೇಶಿಸುವ ಮೂಲಕ ಇಡೀ ರಾಜ್ಯವನ್ನು ವ್ಯಾಪಿಸಿದೆ.

ಬೆಂಗಳೂರು(ಜೂ.27):  ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್‌ ಅಲರ್ಟ್‌’ ನೀಡಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜು.27ರಿಂದ ಐದು ದಿನಗಳ ಕಾಲ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮುಂದಿನ ಐದು ದಿನ ಉತ್ತಮ ಮಳೆಯಾಗುವ ಸಂಭವವಿದ್ದು, ಜುಲೈ 1ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 14 ಸೆಂ.ಮೀ., ಮಂಕಿ 13, ಕಾರ್ಕಳ, ಗೇರುಸೊಪ್ಪ, ಅಂಕೋಲದಲ್ಲಿ ತಲಾ 7, ಉಡುಪಿ 6, ಕುಮಟಾ, ಕಾರವಾರ, ಗೋಕರ್ಣ, ಬೇಲಿಕೇರಿ, ಮುಲ್ಕಿ, ಮಂಗಳೂರು, ಪಣಂಬೂರು, ಕೋಟಾದಲ್ಲಿ ತಲಾ 5 ಸೆಂ.ಮೀ ಮಳೆಯಾದ ವರದಿಯಾಗಿದೆ.

Tap to resize

Latest Videos

undefined

ರಾಜ್ಯದಲ್ಲಿ ನಾಲ್ಕೈದು ದಿನ ಭಾರಿ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯ ವ್ಯಾಪಿಸಿದ ಮುಂಗಾರು:

click me!