
ಬೆಂಗಳೂರು(ಅ.04): ರಾಜ್ಯದ ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳ ಪೈಕಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ‘ಆರೆಂಜ್ ಅಲರ್ಟ್’(Orange Alert) ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಇನ್ನಿತರ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ‘ಯೆಲ್ಲೋ ಅಲರ್ಟ್’(Yellow Alert) ಘೋಷಿಸಲಾಗಿದೆ.
ಸೋಮವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ(Rain) ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಹೀನ್ ಚಂಡಮಾರುತ ಮತ್ತು ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ.
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗಿನ ವಿರಾಜಪೇಟೆ, ಪೊನ್ನಂಪೇಟೆ, ಮೈಸೂರಿನ ಸರಗೂರು ತಲಾ 6 ಸೆಂಮೀ, ದಕ್ಷಿಣ ಕನ್ನಡದ ಮಾಣಿ, ಕೊಡಗಿನ ಸುಂಟಿಕೊಪ್ಪ, ಕುಶಾಲನಗರ, ಚಾಮರಾಜನಗರದ ಬಂಡೀಪುರದಲ್ಲಿ ತಲಾ 5 ಸೆಂಮೀ ಮಳೆಯಾಗಿದೆ.
ಶಹೀನ್ ಅಬ್ಬರ... ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಭಾರೀ ಮಳೆ ಅಲರ್ಟ್
ಭಾರೀ ಮಳೆಗೆ ಬೆಂಗ್ಳೂರು ತತ್ತರ
ಬೆಂಗಳೂರು(Bengaluru) ನಗರದಲ್ಲಿ ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಗೆ(Rain) ಕೆಲವೆಡೆ ಮರ ಮತ್ತು ಮರದ ಕೊಂಬೆಗಳು ಮುರಿದು ಬಿದ್ದಿವೆ. ನಗರದ ಪ್ರಮುಖ ರಸ್ತೆಗಳು, ಅಂಡರ್ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು.
ಮಧ್ಯಾಹ್ನದ ಬಳಿಕ ಅಲ್ಲಲ್ಲಿ ತುಂತುರು ರೂಪದಲ್ಲಿ ಪ್ರಾರಂಭಗೊಂಡ ಮಳೆ ರಾತ್ರಿ ಆಗುತ್ತಿದ್ದಂತೆ ನಗರದೆಲ್ಲೆಡೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಸುರಿದು ಆವಾಂತರ ಸೃಷ್ಟಿಸಿತು. ಮಿಂಚು ಮತ್ತು ಗಾಳಿ ಸಹಿತ ಸುರಿದ ಭಾರಿ ಮಳೆಗೆ ನಗರದ ಫ್ರೆಜರ್ ಟೌನ್, ಮಲ್ಲೇಶ್ವರಂನಲ್ಲಿ ತಲಾ ಒಂದು ಮರವೊಂದು ಬಿದ್ದಿದ್ದು, ಲಿಂಗರಾಜಪುರಂನ ಕೆಎಸ್‌ಎಫ್‌ಸಿ ಬಡಾವಣೆ ಸೇರಿದಂತೆ ಕೆಲವೆಡೆ ಮರದ ಕೊಂಬೆಗಳು ಮುರಿದು ಬಿದ್ದ ಬಗ್ಗೆ ವರದಿಯಾಗಿದೆ. ಯಾವುದೇ ಅನಾಹುತ ಘಟಿಸಿಲ್ಲ. ದೂರಿನ ಮೇರೆಗೆ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಸಿಬ್ಬಂದಿ ಬಿದ್ದ ಮರ ಮತ್ತು ಕೊಂಬೆಯನ್ನು ತೆರವುಗೊಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ