ಮೇ. 10 ರಿಂದ ಮಳೆ ಪ್ರಮಾಣ ಇನ್ನಷ್ಟು ಜಿಲ್ಲೆಗಳಿಗೆ ವ್ಯಾಪಿಸಲಿದ್ದು, ಮೇ13 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆಯ ನೀಡಿದ ಹವಾಮಾನ ಇಲಾಖೆ
ಬೆಂಗಳೂರು(ಮೇ.09): ಮುಂದಿನ 24 ಗಂಟೆಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆ ಸೇರಿದಂತೆ ರಾಜ್ಯದ 18 ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯಲ್ಲೋ ಅಲರ್ಟ್' ಎಚ್ಚರಿಕೆ ನೀಡಿದೆ.
ಸುಳಿಗಾಳಿ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರ ರಾಜ್ಯಾದ್ಯಂತ ಉತ್ತಮ ಮಳೆ ನಿರೀಕ್ಷಿಸಲಾಗಿದೆ.
ಇಂದಿನಿಂದ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ..
ಮುಂದಿನ 24 ಗಂಟೆಯಲ್ಲಿ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಮೇ. 10 ರಿಂದ ಮಳೆ ಪ್ರಮಾಣ ಇನ್ನಷ್ಟು ಜಿಲ್ಲೆಗಳಿಗೆ ವ್ಯಾಪಿಸಲಿದ್ದು, ಮೇ13 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆಯ ನೀಡಲಾಗಿದೆ.