ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ

By Suvarna NewsFirst Published Jun 10, 2020, 12:31 PM IST
Highlights

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು(ಜೂ.10): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ಕರ್ನಾಟಕದಲ್ಲಿ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ 11 ರಂದು ಕರವಾಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶ, ಮೊದಲ ದಿನವೇ 4 ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ 12 ಹಾಗೂ 13 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ  ಒಳನಾಡಿನ ಬೆಳಗಾವಿ, ಬೀದರ್,ಧಾರವಾಡ, ಹಾವೇರಿ,‌ಕಲಬುರಗಿ,, ಯಾದಗಿರಿ, ಅರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ,ಕೊಡಗು, ಹಾಗೂ ಶಿವಮೊಗ್ಗದಲ್ಲಿ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ‌‌ ಸಮಯದಲ್ಲಿ 64. ಮಿ.ಮೀನಿಂದ 115.5 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಎಸ್ ಆರ್ ಪಾಟೀಲ್ ತಿಳಿಸಿದ್ದಾರೆ.

click me!