
ಬೆಂಗಳೂರು/ಹುಬ್ಬಳ್ಳಿ/ಬೆಳಗಾವಿ(ಮೇ.12): ರಾಜ್ಯದಲ್ಲಿ ಕೃತ್ತಿಕಾ ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿ, ಹುಬ್ಬಳ್ಳಿ, ಕೊಪ್ಪಳ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು, ಬಿರುಗಾಳಿಯಿಂದ ಕೂಡಿದ ಮಳೆಯಿಂದ ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಬೇಕಾಯಿತು. ಸಿಡಿಲು ಬಡಿದು ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹಿರೇಮೂಕರ್ತಿನಾಳ (18) 200 ಬಡಿದು ಮೃತನಾದ ದುರ್ದೈವಿ, ಹೊಲದ ಕೆಲಸಕ್ಕೆ ತೆರಳಿದ್ದಾಗ ಭಾರೀ ಮಳೆ- ಗಾಳಿಯಿಂದ ಮರದಡಿ ಆಶ್ರಯ ಪಡೆದಾಗ ಸಿಡಿಲು ಬಡಿದಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಇಚ್ಚಂಪಾಡಿಯಲ್ಲಿ ಸಿಡಿಲು ಬಡಿದು ಉತ್ತರ ಪ್ರದೇಶದ ಕಾರ್ಮಿಕ ಶ್ರೀಕಿಕುನ್ (56) ಎಂಬು ವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗುಂಡ್ಯ ಹೊಳೆಯಲ್ಲಿ ಮರಳುಗಾರಿಕೆ
ಮಾಡ್ತಿದ್ದಾಗ ಸಿಡಿಲು ಬಡಿದಿದೆ.
ರಾಜ್ಯದಲ್ಲಿ ಬಿಸಿಗಾಳಿ ಜೊತೆಗೆ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ!
ಬೆಳಗಾವಿಯಲ್ಲಿ ಶನಿವಾರ ಸಂಜೆ ಸುಮಾರು 1 ಗಂಟೆ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತು. ಬೈಲಹೊಂಗಲ ತಾಲೂಕಿನ ಸಂಪಗಾಂವಿಯಲ್ಲಿ ಬಿರುಗಾಳಿಗೆ ವಿದ್ಯುತ್ ಕಂಬಗಳು ಧರೆಗೆ ಉರುಳಿದು, 22 ಗ್ರಾಮಗಳಿಗೆ ಕತ್ತಲು ಆವರಿಸಿದೆ.
ಕೆಲ ದಿನ ಭಾರಿ ಮಳೆ ಸಾಧ್ಯತೆ
ಬೆಂಗಳೂರು: ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ವ್ಯಾಪಿಸುತ್ತಿದ್ದು, ಮೇ.13 ಹಾಗೂ ಮೇ. 14ರಂದು ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಡ್ಯದಲ್ಲಿ ಬಿರುಗಾಳಿ ಸಹಿತ ಮಳೆ ಮರ ಬಿದ್ದು ಯುವಕ ಸಾವು
ಸುಳಿಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಕಳೆದ ಎರಡು ತಿಂಗಳಿನಿಂದ ಬಿಸಿಲಿನಿಂದ ತತ್ತರಿಸಿ ಹೋಗಿದ್ದ ಉತ್ತರ ಕರ್ನಾಟಕ ಸೇರಿದಂತೆ ಇಡೀ ರಾಜ್ಯ ಮುಂದಿನ ಒಂದು ವಾರ ತೀವ್ರ ಮಳೆ ಕಾಣಲಿದೆ. ಮೇ 13 ಹಾಗೂ 14 ರಂದು ಉತ್ತರ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ. ಮೇ 13 ರಂದು ಕಲಬುರಗಿ, ರಾಯಚೂರುಹಾಗೂಯಾದಗಿರಿ ಜಿಲ್ಲೆಯಲ್ಲಿ ಮೇ14ರಂದುಹಾವೇರಿ, ಗದಗ, ಧಾರಾವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಮೇ 11 ಎಂದು ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಮೇ 13-14ಕ್ಕೆ ಶಿವಮೊಗ್ಗ, ಕೊಡಗು, ಮೇ 15ಕ್ಕೆ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಧಾರವಾಡದಲ್ಲಿ ಮಳೆಗೆ ಕಾಮಗಾರಿಗಾಗಿ ಕಟ್ಟಲಾಗಿದ್ದ ಮರದ ತುಂಡೊಂದು ಬಿದ್ದು, ಖಾಸಗಿ ಬನ್ನೊಂದು ಜಖಂ ಗೊಂಡಿದೆ. ಇದೇ ವೇಳೆ ಚಾಮರಾಜನಗರ ಜಿಲ್ಲೆಯ ಹಲ ಬೆಡೆ ಮಳೆಗೆ ಬಾಳೆ ಗಿಡಗಳು ನೆಲಕಚ್ಚಿದ್ದು, ಲಕ್ಷಾಂತರ ರೂ.ನಷ್ಟವಾಗಿದೆ. ಗದಗ, ಹಾವೇರಿ, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆಯೂ ಮಳೆಯಾದ ವರದಿಯಾಗಿದೆ. ಕರಾವಳಿ ಜಿಲ್ಲೆಯಲ್ಲಿ ಮೇ 11ರಿಂದ ಐದು ದಿನ ಉತ್ತಮ ಮಳೆಯಾಗಲಿದೆ. ಮೇ 13ಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ