ಭಾರೀ ಮಳೆಯಿಂದಾಗಿ ಹೊಸೂರು ಬೆಂಗಳೂರು ಮುಖ್ಯರಸ್ತೆಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುಮಾರು ಅರ್ಧ ಕಿಲೋಮೀಟರ್ ರಸ್ತೆಯಲ್ಲಿ ನೀರು ನಿಂತಿದೆ. ಪ್ರತಿ ಬಾರಿ ಮಳೆ ಬಂದಾಗಲೂ ವೀರಸಂದ್ರ ಮುಳುಗಡೆಯಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕತೆಯಿಂದ ರಸ್ತೆಯಲ್ಲಿ ನೀರು ನಿಲ್ಲುತ್ತಿದೆ. ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ಜನರು ಪರದಾಟ ನಡೆಸುತ್ತಿದ್ದಾರೆ.
ಬೆಂಗಳೂರು(ಅ.05): ನಗರದಲ್ಲಿ ಇಂದು(ಶನಿವಾರ) ಸುರಿದ ಭಾರೀ ಮಳೆಯಿಂದಾಗಿ ಎಲೆಕ್ಟ್ರಾನಿಕ್ಸ್ ಸಿಟಿ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿದೆ. ಹೌದು, ವರುಣನ ಅಬ್ಬರಕ್ಕೆ ಐಟಿಬಿಟಿ ಮಂದಿ ಅಕ್ಷರಶಃ ತತ್ತರಿಸಿದ್ದಾರೆ.
ಭಾರೀ ಮಳೆಯಿಂದಾಗಿ ಹೊಸೂರು ಬೆಂಗಳೂರು ಮುಖ್ಯರಸ್ತೆಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುಮಾರು ಅರ್ಧ ಕಿಲೋಮೀಟರ್ ರಸ್ತೆಯಲ್ಲಿ ನೀರು ನಿಂತಿದೆ. ಪ್ರತಿ ಬಾರಿ ಮಳೆ ಬಂದಾಗಲೂ ವೀರಸಂದ್ರ ಮುಳುಗಡೆಯಾಗುತ್ತದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕತೆಯಿಂದ ರಸ್ತೆಯಲ್ಲಿ ನೀರು ನಿಲ್ಲುತ್ತಿದೆ. ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ಜನರು ಪರದಾಟ ನಡೆಸುತ್ತಿದ್ದಾರೆ.
undefined
ಮುಂಗಾರು ಅಂತ್ಯ: 15% ಹೆಚ್ಚು ಮಳೆ, 99% ಬಿತ್ತನೆ! ವಾಡಿಕೆಯ 85 ಸೆಂ.ಮೀ. ಬದಲು ಈ ಬಾರಿ 97 ಸೆಂ.ಮೀ. ಮಳೆ
ಹೆದ್ದಾರಿಯ ನೀರಿನಲ್ಲಿ ಕಾರುಗಳು ಮುಳುಗಿವೆ. ಎಲೆಕ್ಟ್ರಾನಿಕ್ ಸಿಟಿಯಿಂದ ಹೆಬ್ಬಗೋಡಿಗೆ ಮಧ್ಯೆ ಬರುವ ವೀರಸಂದ್ರದಲ್ಲಿ ಹಲವು ವರ್ಷಗಳಿಂದ ಇದೇ ಪರಿಸ್ಥಿತಿ ಇದ್ದರೂ ಹೆದ್ದಾರಿ ಪ್ರಾದಿಕಾರ ಮಾತ್ರ ಡೋಂಟ್ ಕೇರ್ ಎನ್ನುತ್ತಿದೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ.
ನಗರದ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 9 ರವರೆಗೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 5 ರಿಂದ 9 ರವರಿಗೆ ವ್ಯಾಪಕ ಮಳೆಯಾಗಲಿದೆ.
ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ರಾಮನಗರ, ಮಂಡ್ಯ, ಕೋಲಾರ, ತುಮಕೂರು, ಬಳ್ಳಾರಿ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಅಕ್ಟೋಬರ್ 5 ರಿಂದ 8 ರವರೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.