7 ಜಿಲ್ಲೆಗಳಿಗೆ ಮಳೆ ಎಲ್ಲೋ ಅಲರ್ಟ್| ಕರಾವಳಿಯ 3, ಮಲೆನಾಡಿನ 4 ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು(ಜೂ.08): ಮುಂದಿನ 24 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆ ಮತ್ತು ಮಲೆನಾಡು ಭಾಗದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಏಳು ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ‘ಎಲ್ಲೋ ಅಲರ್ಟ್’ಎಚ್ಚರಿಕೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮವಾಗಿ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳು ಚುರುಕುಗೊಂಡಿವೆ. ಹೀಗಾಗಿ, ಸೋಮವಾರ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ 65ರಿಂದ 115 ಮಿ.ಮೀ.ವರೆಗೆ ಮಳೆಯಾಗುವ ಲಕ್ಷಣ ಇರುವುದರಿಂದ ಈ ಜಿಲ್ಲೆಗಳಿಗೆ ‘ಎಲ್ಲೋ ಅಲರ್ಟ್’ ಮುನ್ಸೂಚನೆ ನೀಡಲಾಗಿದೆ.
undefined
ರಾಜ್ಯಕ್ಕೆ ಮುಂಗಾರು ಪ್ರವೇಶ, ಮೊದಲ ದಿನವೇ 4 ಜಿಲ್ಲೆಗಳಲ್ಲಿ ಮಳೆ
ಜೂ.9ರಿಂದ ಹೆಚ್ಚಾಗಲಿದೆ ಮಳೆ: ಅರಬ್ಬಿ ಸಮುದ್ರದಲ್ಲಿ ಮಳೆಯ ಮಾರುತಗಳು ಇನ್ನಷ್ಟುಚುರುಕಾಗಿರುವ ಪರಿಣಾಮ ಕರಾವಳಿ, ಮಲೆನಾಡು ಭಾಗದಲ್ಲಿ ಜೂನ್ 9ರಿಂದ ಜೂನ್ 12ರ ವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಭಾನುವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಶನಿವಾರ ಉತ್ತರ ಕನ್ನಡದ ಕಾರವಾರ ಮತ್ತು ಕೊಡಗಿನ ಭಾಗಮಂಡಲದಲ್ಲಿ ಅತಿ ಹೆಚ್ಚು 6 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಉತ್ತರ ಕನ್ನಡದ ಅಂಕೋಲ ಮತ್ತು ಶಿವಮೊಗ್ಗದ ಆಗುಂಬೆಯಲ್ಲಿ ತಲಾ 5, ಉತ್ತರ ಕನ್ನಡದ ಕದ್ರಾ, ರಾಮನಗರದ ಚನ್ನಪಟ್ಟಣದ ಹಾಗೂ ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.