ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ : 2 ದಿನ 13 ಜಿಲ್ಲೆಗಳಿಗೆ ಎಚ್ಚರಿಕೆ

Kannadaprabha News   | Asianet News
Published : Nov 15, 2021, 10:47 AM IST
ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ : 2 ದಿನ 13 ಜಿಲ್ಲೆಗಳಿಗೆ ಎಚ್ಚರಿಕೆ

ಸಾರಾಂಶ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗಿದೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನವೆಂಬರ್‌ 15 ಮತ್ತು 16ರಂದು ಸಹ ಭಾರಿ ಮಳೆ

 ಬೆಂಗಳೂರು (ನ.15):  ರಾಜ್ಯದ ಕರಾವಳಿ ಮತ್ತು ಮಲೆನಾಡು (Malnad) ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗಿದೆ (Heavy rain). ಕರಾವಳಿ (Costal) ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನವೆಂಬರ್‌ 15 ಮತ್ತು 16ರಂದು ಸಹ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ, ಟ್ರಫ್‌ ಮತ್ತು ಬಂಗಾಳ ಕೊಲ್ಲಿಯಲ್ಲಿ (Bea of Bengal) ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆ ಅಬ್ಬರಿಸಿದೆ. ಒಳನಾಡಿನ ಕೆಲ ಜಿಲ್ಲೆಗಳಿಗೆ ಸೀಮಿತವಾಗಿದ್ದ ‘ಯೆಲ್ಲೋ ಅಲರ್ಟ್‌’ (yellow alert) ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಿಗೆ ನೀಡಲಾಗಿದ್ದ ಭಾರಿ ಮಳೆಯ ಯೆಲ್ಲೋ ಅಲರ್ಟ್‌ ಅನ್ನು ‘ಅತಿ ಭಾರಿ ಮಳೆಯ ಆರೆಂಜ್‌ ಅಲರ್ಟ್‌’ (Orange Alert) ಆಗಿ ಪರಿವರ್ತಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ (Dakshina kannada), ಉಡುಪಿ (Udupi) ಮತ್ತು ಉತ್ತರ ಕನ್ನಡ (Uttara kannada) ಜಿಲ್ಲೆ ಹಾಗು ಮಲೆನಾಡಿನ ಕೊಡಗು (Kodagu) ಜಿಲ್ಲೆಗೆ ಸೋಮವಾರ (ನ.15) ‘ಆರೆಂಜ್‌ ಅಲರ್ಟ್‌’ ನೀಡಲಾಗಿದೆ. ಮಂಗಳವಾರ (ನ.16)ಮಳೆ ಪ್ರಮಾಣ ತುಸು ಕಡಿಮೆ ಆಗುವ ಸಾಧ್ಯತೆಯಿದ್ದು ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಬೆಂಗಳೂರು (Bengaluru) ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು (Tumakuru), ರಾಮನಗರ (Ramanagara), ಹಾಸನ, ಚಿಕ್ಕಮಗಳೂರು, ಶಿವಮೊಗ್ಗ (Shivamogga), ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮಂಗಳವಾರದವರೆಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ.

ಕೆಲ ಕಡೆ ಜಿಟಿಜಿಟಿ ಮಳೆ, ಸಾಧಾರಣ ಮಳೆಯಾದರೆ ಇನ್ನೂ ಕೆಲವೆಡೆ ಭಾರಿ ಮಳೆ ಆಗುತ್ತಿದೆ. ಮಳೆ ಚೆನ್ನಾಗಿ ಆಗುತ್ತಿರುವುದು ಮತ್ತು ಶೀತಗಾಳಿಯಿಂದ ರಾಜ್ಯದ ತಾಪಮಾನದಲ್ಲಿ ಇಳಿಕೆ ದಾಖಲಾಗಿದ್ದು ಚಳಿ ಜಾಸ್ತಿ ಆಗಿದೆ. 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಮಂಡ್ಯದ (mandya) ಪಾಂಡವಪುರ 19 ಸೆಂ.ಮೀ, ಧರ್ಮಸ್ಥಳ 14 ಸೆಂ.ಮೀ, ಮಂಡ್ಯದ ಶ್ರೀರಂಗಪಟ್ಟಣ 9 ಸೆಂ.ಮೀ, ದಕ್ಷಿಣ ಕನ್ನಡದ ಬೆಳ್ತಂಗಡಿ 6 ಸೆಂ.ಮೀ, ಹಾಸನದ ಹೊಳೆನರಸೀಪುರ ಮತ್ತು ಮೈಸೂರು ತಲಾ 5 ಸೆಂ.ಮೀ ಮಳೆ ದಾಖಲಾಗಿದೆ.

ಮಳೆ: ನಗರದಲ್ಲಿ ಇಂದು, ನಾಳೆ ಯಲ್ಲೋ ಅಲರ್ಟ್‌ :  ಬೆಂಗಳೂರು ನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆ ಆಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಲ ಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿ, ವಾಯುಭಾರ ಕುಸಿತ ಬೆಂಗಳೂರಿನ ಹವೆಯ ಮೇಲೂ ಪರಿಣಾಮ ಬೀರುತ್ತಿದೆ.

ಕಳೆದ ನಾಲ್ಕೈದು ದಿನಗಳಿಂದ ಜಿಟಿಜಿಟಿ ಮಳೆ, ಶೀತಗಾಳಿ, ಚಳಿ ಮತ್ತು ಮೋಡ (Cloudy weather) ಕವಿದ ವಾತಾವರಣವನ್ನೇ ಹೆಚ್ಚು ಕಂಡಿದ್ದ ನಗರದಲ್ಲಿ ಭಾನುವಾರ ಮಳೆಯ ಅಬ್ಬರ, ಮೈಕೊರೆಯುವ ಚಳಿ ಇರಲಿಲ್ಲ. ಬೆಳಗ್ಗೆ ಮೋಡವಿದ್ದರೂ ನಂತರ ಸೂರ್ಯನ ದರ್ಶನವಾಯಿತು. ಹೀಗಾಗಿ ಚಳಿಯ ವಾತಾವರಣ ಕಡಿಮೆಯಿತ್ತು.

ಜಿಟಿ ಜಿಟಿ ಮಳೆಯ ಇರದಿದ್ದರೂ ನಗರದ ಬಹುತೇಕ ಎಲ್ಲೆಡೆ ತುಂತುರು, ಹನಿ ಹನಿ ಮಳೆಯಾಗಿದೆ. ನಗರದಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಕ್ರಮವಾಗಿ 25 ರಿಂದ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್