
ಧಾರವಾಡ (ಜೂ.11): ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯ ಆರಂಭವಾಗಿದ್ದು, ನವಲಗುಂದ ತಾಲೂಕಿನಲ್ಲಿ ಗುಡುಗು ಸಹಿತ ತೀವ್ರ ಮಳೆ ಸುರಿಯುತ್ತಿದೆ. ಈ ಭಾರೀ ಮಳೆಯಿಂದ ಧಾರವಾಡ-ವಿಜಯಪುರ ರಾಜ್ಯ ಹೆದ್ದಾರಿ ಒಂದು ಘಂಟೆಗೂ ಹೆಚ್ಚು ಕಾಲ ಬಂದ್ ಆಗಿದೆ.
ಮನೆಗಳಿಗೆ ನುಗ್ಗಿದ ಮಳೆನೀರು:
ನವಲಗುಂದ ತಾಲೂಕಿನ ಯಮನೂರು, ಅರೆ ಕುರಹಟ್ಟಿ, ಮತ್ತು ಹಣಸಿ ಗ್ರಾಮಗಳ ಕೆಲವು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮನೆಗಳಿಂದ ನೀರನ್ನು ಹೊರತೆಗೆಯಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಏಕಾಎಕಿ ಸುರಿದ ಮಳೆಯಿಂದ ಜನರು ನಲುಗಿದ್ದಾರೆ.
ಜಿಲ್ಲಾಡಳಿತವು ಬೆಣ್ಣಿ ಹಳ್ಳ ಮತ್ತು ತುಪರಿ ಹಳ್ಳ ಗ್ರಾಮಗಳಿಗೆ ಅಲರ್ಟ್ ಘೋಷಿಸಿ, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗ್ರಾಮಗಳಿಗೆ ನೀರು ನುಗ್ಗಿದ್ದು, ಸ್ಥಳೀಯರು ಕಷ್ಟದಲ್ಲಿದ್ದಾರೆ.
ಇದನ್ನೂ ಓದಿ: Karnataka Rains: ಉಡುಪಿ ಜಿಲ್ಲೆಗೆ ನಾಳೆ ರೆಡ್ ಅಲರ್ಟ್; ಶಾಲೆಗಳಿಗೆ ರಜೆ ಘೋಷಣೆ!
ರೆಡ್ ಅಲರ್ಟ್ ಘೋಷಣೆ: ನಾಳೆ ಧಾರವಾಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಳೆರಾಯನ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಜನರು ಎಚ್ಚರಿಕೆಯಿಂದ ಇರಲು ಕೋರಲಾಗಿದೆ. ಅಪ್ಡೇಟ್‌ಗಾಗಿ ಸಂಪರ್ಕದಲ್ಲಿರಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ