
ಬೆಂಗಳೂರು(ಸೆ.12): ರಾಜ್ಯದ ಪಶ್ಚಿಮಘಟ್ಟ, ಕರಾವಳಿ ಮತ್ತು ಕಲ್ಯಾಣ ಕರ್ನಾಟಕದ ಕೆಲಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಳಗಾವಿಯಿಂದ ವರದಿಯಾಗಿದೆ.
ಬೆಳಗಾವಿ, ಕಲಬುರಗಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದ್ದರೆ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮತ್ತು ತುಂತುರು ಮಳೆಯಾಗಿದೆ.
ಬೆಳಗಾವಿ ಜಿಲ್ಲೆ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರದಲ್ಲೂ ನಿರಂತರ ಮಳೆಯಾಗುತ್ತಿರುವುದರಿಂದ ಬೆಳಗಾವಿಯ ಕೆಳ ಹಂತದ ಐದು ಸೇತುವೆಗಳು ಜಲಾವೃತವಾಗಿದ್ದು, ಸಂಚಾರ ನಿಷೇಧಿಸಲಾಗಿದೆ. ಏತನ್ಮಧ್ಯೆ ಸವದತ್ತಿ ತಾಲೂಕಿನ ಹೂಲಿಕಟ್ಟಿಗ್ರಾಮದಲ್ಲಿ ಮನೆಗೋಡೆ ಕುಸಿದು ಗಂಗವ್ವ ರಾಮಣ್ಣ ಮೂಲಿಮನಿ(55) ಎಂಬ ಮಹಿಳೆ ಮೃತಪಟ್ಟಿದ್ದಾರೆ.
Bengaluru Rain: ಮುಳುಗಿದ ಐಟಿ ಸಿಟಿ; ಹೋಟೆಲ್ ರೂಮಿಗೆ 40 ಸಾವಿರ ಬಾಡಿಗೆ..!
ಕಲಬುರಗಿ ಜಿಲ್ಲೆಯ ಹಲವೆಡೆ ಭಾರೀ ಮಳೆ ಮುಂದುವರಿದಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹೆಸರು, ತೊಗರಿ ಹೊಲಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿವೆ. ಇನ್ನು ಮಹಾರಾಷ್ಟ್ರದ ಉಜನಿ, ಶೀನಾ, ವೀರ್ ಜಲಾಶಯಗಳಿಂದ ನೀರು ಭೀಮಾ ನದಿಗೆ 1.24 ಲಕ್ಷ ಕ್ಯುಸೆಕ್ ನೀರು ಹರಿಬಿಟ್ಟಿರುವ ಪರಿಣಾಮ ನದಿಮಟ್ಟಹೆಚ್ಚಳಗೊಂಡಿದೆ. ಪರಿಣಾಮ ಮಣೂರ ಗ್ರಾಮದ ನದಿ ಯಲ್ಲಮ್ಮ ದೇವಸ್ಥಾನ ಜಲಾವೃತವಾಗಿದೆ. ಘತ್ತರಗಿ ಮತ್ತು ದೇವಲ ಗಾಣಗಾಪುರಗಳಲ್ಲೂ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳು ಮುಳುಗಡೆಯಾಗಿದ್ದು ಅಫಜಲ್ಪುರ ತಾಲೂಕಿನಿಂದ ಸಿಂದಗಿ, ಜೇವರ್ಗಿ ತಾಲೂಕಿನ ಸಂಪರ್ಕ ಕಡಿತಗೊಂಡಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಸಿದ್ದಾಪುರ ಸೇರಿದಂತೆ ಕೆಲವೆಡೆ ಭಾನುವಾರ ಭಾರಿ ಮಳೆ ಬಿದ್ದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ