
ಬೆಂಗಳೂರು(ಆ.26): ರಾಜ್ಯದ ಮಲೆನಾಡು ಮತ್ತು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಲಿದೆ. ಉಳಿದಂತೆ ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಕರಾವಳಿ ಜಿಲ್ಲೆಗೆ ಮಳೆಯ ಯಾವುದೇ ಎಚ್ಚರಿಕೆ ಇರದಿದ್ದರೂ ಸಮುದ್ರ ಭಾಗದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.
ಮಳೆ ಹಾನಿ ಕಾಮಗಾರಿಗೆ ತುರ್ತು ಅನುದಾನ: ಸಚಿವ ಗೋವಿಂದ ಕಾರಜೋಳ
ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿತ್ತು. ಕರಾವಳಿಯ ಬಹುತೇಕ ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಕ್ಯಾಸಲ್ ರಾಕ್‌ನಲ್ಲಿ 7 ಸೆಂ. ಮೀ, ಸುಳ್ಯ, ಶಿರಾಲಿ, ಟಿ. ನರಸೀಪುರ, ತಿಪಟೂರು, ಶ್ರವಣಬೆಳಗೊಳ, ಮಂಡ್ಯ, ಹೆಸರಘಟ್ಟದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ