ರಾಜ್ಯದಲ್ಲಿ ಭರ್ಜರಿ ಮಳೆ: ಕಳಸ-ಕುದುರೆಮುಖ-ಮಂಗಳೂರು ಹೆದ್ದಾರಿಯಲ್ಲಿ ಬಿರುಕು

By Sathish Kumar KH  |  First Published Jul 6, 2023, 4:42 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಕಳಸ-ಕುದುರೆಮುಖ-ಮಂಗಳೂರು ಸಂಪರ್ಕಿಸುವ ರಸ್ತೆಯಲ್ಲಿ ಬಿರುಕು ಕಂಡುಬಂದಿದೆ.


ಚಿಕ್ಕಮಗಳೂರು (ಜು.06): ರಾಜ್ಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಆಗುತ್ತಿದ್ದು, ಕಾಫಿನಾಡು ಚಿಕ್ಕಮಗಳೂರಿನಲ್ಲಿಯೂ ಮೆಯ ಆರ್ಭಟ ಆರಂಭವಾಗಿದೆ. ನಿರಂತರ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾದು ಹೋಗುವ ಕಳಸ-ಕುದುರೆಮುಖ-ಮಂಗಳೂರು ಸಂಪರ್ಕಿಸುವ ಹೆದ್ದಾರಿಯಲ್ಲಿ ಬಿರುಕು ಕಂಡುಬಂದಿದ್ದು, ಗುಡ್ಡ ಕುಸಿತದ ಆತಂಕ ಎದುರಾಗಿದೆ. 

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಇದರಿಂದಾಗಿ ಕಳಸ-ಕುದುರೆಮುಖ ರಸ್ತೆಯಲ್ಲಿ ಬಿರುಕು ಕಂಡುಬಂದಿದೆ. ಕಳಸದಿಂದ 1 ಕಿ.ಮೀ. ದೂರದಲ್ಲಿ ರಸ್ತೆ ಬಿರುಕು ಕಾಣಿಸಿಕೊಂಡಿದ್ದು, ಈಗ ವಾಹನ ಸವಾರರಿಗೆ ಆತಂಕ ಎದುರಾಗಿದೆ. ಕಳೆದ ವರ್ಷ ರಸ್ತೆ ಕುಸಿತ ಕಂಡಿದ್ದ ಸ್ಥಳದಲ್ಲಿಯೇ ಈ ವರ್ಷವೂ ಕೂಡ ರಸ್ತೆ ಬಿರುಕು ಕಾಣಿಸಿಕೊಂಡಿದೆ. ಇನ್ನು ರಸ್ತೆ ಕುಸಿಯದಂತೆ ಗೋಡೆ (ವಾಲ್) ನಿರ್ಮಾಣ ಮಾಡಲಾಗಿತ್ತು. ಆದರೆ, ಈಗ ಕಾಮಗಾರಿ ನಡೆದ ಸ್ಥಳದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಗೋಡೆ ಸಮೇತವೇ ಕುಸಿಯುವ ಆತಂಕ ಎದುರಾಗಿದೆ.

Latest Videos

undefined

ಕಾಫಿನಾಡಲ್ಲಿ ಭರ್ಜರಿ ಮಳೆ, ತುಂಗಾ-ಭದ್ರಾ- ಹೇಮಾವತಿ ನದಿಗಳಿಗೆ ಜೀವಕಳೆ

ತಡೆಗೋಡೆ ನಿರ್ಮಿಸಿದ ಜಾಗದಲ್ಲಿಯೇ ಮತ್ತೆ ಬಿರುಕು: ಇನ್ನು ರಸ್ತೆಯ ಪಕ್ಕದಲ್ಲಿ ಮಣ್ಣು ಕುಸಿಯದಂತೆ ನಿರ್ಮಿಸಿದ ಗೋಡೆಯೇ ಈಗ ಕುಸಿಯುತ್ತಿದೆ. ಒಂದು ವೇಳೆ ತಡೆಗೋಡೆ ಕುಸಿತ ಉಂಟಾದಲ್ಲಿ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ಇನ್ನು ರಸ್ತೆ ಬಿರುಕಿನಿಂದ ವಾಹನ ಸವಾರರಲ್ಲಿ ಆತಂಕ ಎದುರಾಗಿದೆ. ಕಳಸ- ಕುದುರೆಮುಖ- ಮಂಗಳೂರು ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಆದರೆ, ರಸ್ತ ಕುಸಿತವಾದಲ್ಲಿ ಅನಿವಾರ್ಯವಾಗಿ ರಸ್ತೆಯ ಸಂಚಾರವನ್ನು ಬಂದ್‌ ಮಾಡಲಾಗುತ್ತದೆ. ಮತ್ತೊಂದೆಡೆ ಮಳೆ ಮುಂದುವರೆದು, ರಸ್ತೆ ಕುಸಿತ ಉಂಟಾದಲ್ಲಿ ವಾಹನ ಸಂಚಾರಕ್ಕೆ ದೊಡ್ಡ ಮಟ್ಟದಲ್ಲಿ ಸಮಸ್ಯೆ ಎದುರಾಗಕಿದೆ. 

ತುಂಗಾ-ಭದ್ರಾ-ಹೇಮಾವತಿ ನದಿಗೆ ಜೀವಕಳೆ:  ಚಿಕ್ಕಮಗಳೂರು (ಜು.05): ಕರುನಾಡಿಗೆ ನೀರುಣಿಸುತ್ತಿದ್ದ ಸಪ್ತ ನದಿಗಳ ನಾಡು ಕಾಫಿನಾಡಲ್ಲಿ ಮಳೆ ಬಾರದ ಕಾರಣ ನದಿಗಳ ಒಡಲು ಬರಿದಾಗಿತ್ತು. ಮಲೆನಾಡು ಸೇರಿದಂತೆ ಇಡೀ ರಾಜ್ಯವೇ ಮಳೆಗಾಗಿ ಮುಗಿಲಿನತ್ತ ಮುಖ ಮಾಡಿತ್ತು. ಆದರೆ, ಕಾಫಿನಾಡಲ್ಲಿ ದಿನದಿಂದ ದಿನಕ್ಕೆ ಮಳೆರಾಯ ಚರುಕು ಪಡೆದುಕೊಳ್ಳುತ್ತಿದ್ದು ನದಿಗಳ ಒಡಲು ಕ್ರಮೇಣ ಭರ್ತಿಯಾಗುತ್ತಿದೆ. ಕಾಫಿನಾಡ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ರಾಜ್ಯದ ಉದ್ದಗಲಕ್ಕೂ ಹರಿಯೋ ತುಂಗಾ-ಭದ್ರಾ-ಹೇಮಾವತಿ ನದಿ ಒಡಲಲ್ಲಿ ನೀರಿನ ಹರಿವಿನ ಪ್ರಮಾಣ ಕೂಡ ಹೆಚ್ಚುತ್ತಿದೆ. 

ಕಾಡಾನೆಯ ಭರ್ಜರಿ ಸೇಡು, ಮನೆಮುಂದೆ ನಿಲ್ಲಿಸಿದ ಕಾರು ಜಖಂಗೊಳಿಸಿ ಪರಾರಿ

ಮಲೆನಾಡ ಭಾಗದಲ್ಲಿ ಮಳೆಯ ಅಬ್ಬರ: ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆಡುತ್ತಿದ್ದ. ಆದ್ರೆ, ಮಳೆ ತವರು ಮಲೆನಾಡಲ್ಲಿ ನಿನ್ನೆಯಿಂದ ಮಲೆನಾಡಲ್ಲಿ ಮಳೆರಾಯ ಚುರುಕು ಪಡೆದುಕೊಂಡಿದ್ದು ನಾಡಿಗೆ ನೀರಿನ ಸೌಲಭ್ಯ ಕಲ್ಪಿಸುವ ತುಂಗಾಭದ್ರ ಹಾಗೂ ಹೇಮಾವತಿ ಒಡಲಲ್ಲಿ ನಾಲ್ಕೈದು ಅಡಿಯಷ್ಟು ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹಾಸನದ ಗೊರೂರು ಡ್ಯಾಂ ತಲುಪಿ, ಅಲ್ಲಿಂದ ಕೆ.ಆರ್.ಎಸ್. ಮೂಲಕ ಬೆಂಗಳೂರು ತಲುಪುವ ಹೇಮಾವತಿ ನದಿಯಲ್ಲಿ ಮೂರು ಅಡಿಯಷ್ಟು ನೀರಿನ ಪ್ರಮಾಣ ಹೆಚ್ಚಾಗಿದೆ.

click me!