ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌, ಇದರಲ್ಲಿ ನಿಮ್ಮ ಜಿಲ್ಲೆ ಇದೆಯಾ?

Published : Jul 29, 2025, 08:54 AM ISTUpdated : Jul 29, 2025, 10:08 AM IST
karnataka rains today

ಸಾರಾಂಶ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿರಲಿದ್ದು, 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು (ಜು.29): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸಾಧ್ಯತೆಯಿದ್ದು, 15ಕ್ಕೂ ಹೆಚ್ಚಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜು. 31ರವರೆಗೆ ಮುಂದುವರಿಯಲಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಬ್ಬರ ಹೆಚ್ಚಿರಲಿದೆ.

ಹಾಸನ, ಮಂಡ್ಯ, ಮೈಸೂರು, ಹಾವೇರಿ, ಧಾರವಾಡ ಸೇರಿ ಇತರೆ ಜಿಲ್ಲೆಗಳಲ್ಲೂ ಮಳೆ ಕಾಣಿಸಿಕೊಳ್ಳಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಜತೆಗೆ ಭಾರೀ ಗಾಳಿಯೂ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳ್ತಂಗಡಿ ಬಾಲಕ ಸುಮಂತ್ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್ : ಶವ ಪತ್ತೆಯಾದ ಕೆರೆಯಲ್ಲಿ ಕತ್ತಿ ಟಾರ್ಚ್ ಪತ್ತೆ
ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ