ಇಂದಿನಿಂದ 5 ದಿನಗಳ ಕಾಲ ಹೆಬ್ಬಾಳ ಮೆಲ್ಸೇತುವೆ ಬಂದ್; ಸಂಚಾರ ಮಾರ್ಗ ಬದಲಾವಣೆ

Published : May 17, 2025, 08:45 AM IST
ಇಂದಿನಿಂದ  5 ದಿನಗಳ ಕಾಲ ಹೆಬ್ಬಾಳ ಮೆಲ್ಸೇತುವೆ ಬಂದ್; ಸಂಚಾರ ಮಾರ್ಗ ಬದಲಾವಣೆ

ಸಾರಾಂಶ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಎಸ್ಟೀಮ್ ಮಾಲ್‌ನಿಂದ ಮೇಖ್ರಿ ವೃತ್ತದ ಕಡೆಗೆ ಮೇ.17ರಿಂದ 21ರವರೆಗೆ ಪ್ರತಿ ದಿನ ರಾತ್ರಿ 12 ಗಂಟೆಯಿಂದ ಮುಂಜಾನೆ 3 ಗಂಟೆವರೆಗೆ ಎಲ್ಲಾ ಮಾದರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು (ಮೇ.17): ಹೆಬ್ಬಾಳ ಮೇಲ್ಸೇತುವೆಯಲ್ಲಿ ಎಸ್ಟೀಮ್ ಮಾಲ್‌ನಿಂದ ಮೇಖ್ರಿ ವೃತ್ತದ ಕಡೆಗೆ ಮೇ.17ರಿಂದ 21ರವರೆಗೆ ಪ್ರತಿ ದಿನ ರಾತ್ರಿ 12 ಗಂಟೆಯಿಂದ ಮುಂಜಾನೆ 3 ಗಂಟೆವರೆಗೆ ಎಲ್ಲಾ ಮಾದರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಕೈಗೆತ್ತಿಕೊಂಡಿರುವ ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿ ರಾಂಪ್‌ ನಿರ್ಮಾಣ ಕಾಮಗಾರಿ ಭಾಗವಾಗಿ ರೈಲ್ವೆ ಹಳಿಗಳ ಮೇಲೆ 33.5 ಮೀ ಉದ್ದದ 7 ಉಕ್ಕಿನ ಗರ್ಡರ್‌ಗಳ ಅಳವಡಿಸುವ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಮೂರೂ ದಿನ ಮೂರು ತಾಸು ಹೆಬ್ಬಾಳ ಮೇಲ್ಸೇತುವೆಯಲ್ಲಿ ಎಸ್ಟೀಮ್ ಮಾಲ್ ನಿಂದ ಮೇಖಿ ವೃತ್ತದ ಕಡೆಗೆ ಎಲ್ಲಾ ಮಾದರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ಪರ್ಯಾಯ ಮಾರ್ಗ:

ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಕಾಮಗಾರಿ ನಡೆಯುವ ಸಮಯದಲ್ಲಿ ಕೆಲ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತದ ಕಡೆಗೆ ಚಲಿಸುವ ವಾಹನಗಳು ಎಸ್ಟೀಮ್‌ ಮಾಲ್‌ನ ಸಮೀಪದ ಸರ್ವಿಸ್‌ ರಸ್ತೆಯನ್ನು ಪ್ರವೇಶಿಸಿ, ಹೆಬ್ಬಾಳ ವೃತ್ತದಲ್ಲಿ ಹೊರ ವರ್ತುಲ ರಸ್ತೆಗೆ ಬಲ ತಿರುವು ಪಡೆದು ತುಮಕೂರು ಮಾರ್ಗವಾಗಿ ಮುಂದಕ್ಕೆ ಚಲಿಸಿ ಬಳಿಕ ಕುವೆಂಪು ವೃತ್ತದಲ್ಲಿ ಎಡ ತಿರುವು ಪಡೆದು ನ್ಯೂ ಬಿಇಎಲ್ ರಸ್ತೆ ಮುಖಾಂತರ ಮೇಖ್ರಿ ವೃತ್ತ ತಲುಪಬಹುದಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್