ಮಹಾಕುಂಭಮೇಳ: ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ

Published : Jan 30, 2025, 10:50 AM IST
ಮಹಾಕುಂಭಮೇಳ: ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ

ಸಾರಾಂಶ

ದುರಂತದ ಸಂಬಂಧ ಸಹಾಯವಾಣಿ ತೆರೆದಿದ್ದು, ಕುಂಭಮೇಳಕ್ಕೆ ಹೊರಟು ಕುಟುಂ ಬಸ್ಟರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಕೋರಲಾಗಿದೆ. ಸಹಾಯವಾಣಿ 080-22340676ಗೆ ಬಹುದಾಗಿದೆ ಎಂದು ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ

ಬೆಂಗಳೂರು(ಜ.30):  ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ ದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತ ಪಟ್ಟಿದ್ದಾರೆ. ಕರ್ನಾಟಕದ ಭಕ್ತರ ಮಾಹಿತಿ ಪಡೆಯುವ ಸಂಬಂಧ ಕಂದಾಯ ಇಲಾಖೆ ಕಾವ್ಯದರ್ಶಿ ರಶ್ಮಿ ಅವರು ಈಗಾಗಲೇ ಉತ್ತರ ಪ್ರದೇಶ ಅಧಿಕಾರಿಗಳ ಜತೆ ಸಂಪ ರ್ಕದಲ್ಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಮಾತನಾಡಿ, ಪ್ರಯಾಗರಾಜ್ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ವರು ಮೃತಪಟ್ಟಿದ್ದಾರೆ. ಬೆಳಗಾವಿಯ ವಡಗಾವಿಯ ಜ್ಯೋತಿ ದೀಪಕ ಹತ್ತರವಾತ್ (44), ಅವರ ಪುತ್ರಿ ಮೇಘಾ ದೀಪಕ ಹತ್ತರವಾತ್ (24), ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ (61) ಹಾಗೂ ಶಿವಾಜಿ ನಗರದ ಮಹಾದೇವಿ ಹನಮಂತ ಭವನೂರ (48) ಮೃತಪಟ್ಟವರು ಎಂದು ತಿಳಿಸಿದರು.

ಮಹಾಕುಂಭ ಮೇಳದ ಬಗ್ಗೆ ನುಡಿದಿದ್ದ ಭವಿಷ್ಯ ನಿಜವಾಯ್ತು; ಅವಘಡಕ್ಕೆ ಇದೇ ಕಾರಣ..?!

ನೊಡೆಲ್ ಅಧಿಕಾರಿಗಳ ನಿಯೋಜನೆ: 

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ದಲ್ಲಿ ಮೃತಪಟ್ಟಿದ್ದಾರೆನ್ನಲಾದ ರಾಜ್ಯದ ನಾಲ್ವರ ಮೃತದೇಹಗಳನ್ನು ವಾಪಸ್‌ ತರುವ ಸಂಬಂಧ ರಾಜ್ಯ ಸರ್ಕಾರ ನೊಡೆಲ್ ಅಧಿಕಾರಿಗಳ ತಂಡ ನಿಯೋಜಿಸಿದೆ.

ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾ ಧಿಕಾರಿ ಎನ್.ಎಸ್.ಶೃತಿ ಮತ್ತು ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ ಅವರನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ದುರಂತದಲ್ಲಿ ಸಾವನ್ನಪಿ ದ್ದಾರೆ ಎನ್ನಲಾದವರ ಮೃತದೇಹಗಳನ್ನು ವಾಪಸ್ ತರಲು ಸಹಕರಿಸುವಂತೆ ಅವರ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಪ್ರಯಾಗ್‌ ರಾಜ್‌ಗೆ ತೆರಳಿ ಉತರ ಪ್ರದೇಶ ಸರ್ಕಾ ರದೊಂದಿಗೆ ಸಮಾಲೋಚನೆ ನಡೆಸಿ ಮೃತದೇಹ ಗಳನ್ನು ವಾಪಸ್ ತರುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.    

ಚಾ.ನಗರದ ಏಳು ಜನ ಯಾತ್ರಿಗಳು ಪಾರು

ಚಾಮರಾಜನಗರ: ಉತ್ತರ ಪ್ರದೇಶದ ಪ್ರಯಾಗದ ಮಹಾಕುಂಭದಲ್ಲಿ ಬುಧವಾರ ಸಂಭವಿಸಿರುವ ಕಾಲ್ತುಳಿತ ಪ್ರಕರಣದಲ್ಲಿ ಚಾಮರಾಜನಗರದ ಏಳು ಜನ ಯಾತ್ರಿಗಳು ಸುರಕ್ಷಿತವಾಗಿ ವಾಪಸಾಗಿದ್ದಾರೆ. ಇಲ್ಲಿನ ನಗರಸಭೆ ಮಾಜಿ ಅಧ್ಯಕ ಸುರೇಶ್ ನಾಯಕ್, ಮಾಜಿ ಸದಸ್ಯ ಹುಲ್ಲಿನ ಶಿವಣ್ಣ ಮಹಾಕುಂಭಮೇಳಕ್ಕೆ ತೆರಳಿದ್ದಾರೆ. ಬುಧವಾರ ಬೆಳಗ್ಗೆ ಮೌನಿ ಅಮಾವಾಸ್ಯೆಯ ನಿಮಿತ್ತ ಪವಿತ್ರ ಸ್ನಾನದಲ್ಲಿ ಭಾಗಿಯಾಗಿದ್ದಾರೆ.ಅವಘಡ ಸ್ವಲ್ಪದರಲ್ಲೇ ಪಾರಾಗಿದ್ದಾರೆ. 

ಮಹಾಕುಂಭ ಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ 25 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಆದೇಶಿಸಿದ ಯೋಗಿ!

ಜನರನ್ನು ಸುರಕ್ಷಿತವಾಗಿ ಕರೆ ತರಲು ಕ್ರಮ: ಸರ್ಕಾರ

ಕನ್ನಡಪ್ರಭ ವಾರ್ತೆ ಬೆಂಗಳೂರು ಪ್ರಯಾಗದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ರಾಜ್ಯದ ನಾಲ್ವರು ಯಾತ್ರಾರ್ಥಿಗಳು ಸಾವಿಗೀಡಾಗಿ, ಹಲವರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರ ಸುರಕಿತವಾಗಿ ಕರೆತರಲು ಕ್ರಮ ಕೈಗೊಂಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾ ಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸಾವಿಗೀಡಾಗಿರುವುದಕ್ಕೆ ತೀವ್ರ ದುಃಖ ವ್ಯಕ್ತ ಪಡಿಸಿದ್ದಾರೆ. ರಾಜ್ಯದವರನ್ನು ಸುರಕ್ಷಿತವಾಗಿ ರಕ್ಷೆ ಸಲು ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಈ ಸಂಖ್ಯೆ ಸಂಪರ್ಕಿಸಿ

ದುರಂತದ ಸಂಬಂಧ ಸಹಾಯವಾಣಿ ತೆರೆದಿದ್ದು, ಕುಂಭಮೇಳಕ್ಕೆ ಹೊರಟು ಕುಟುಂ ಬಸ್ಟರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಕೋರಲಾಗಿದೆ. ಸಹಾಯವಾಣಿ 080-22340676ಗೆ ಬಹುದಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ