covid19 Omicron: ಒಮಿಕ್ರಾನ್ ವೈರಸ್, ಕರ್ನಾಟಕದಲ್ಲಿ ಮತ್ತೆ ಕಠಿಣ ನಿಯಮ ಜಾರಿ

By Suvarna NewsFirst Published Nov 27, 2021, 8:11 PM IST
Highlights

* ವಿದೇಶಗಳಲ್ಲಿ ಹೊಸತಳಿಯ ಒಮಿಕ್ರಾನ್ ವೈರಸ್ ಪತ್ತೆ
* ಕರ್ನಾಟಕದಲ್ಲಿ ತುರ್ತು ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ
* ಸಭೆಯಲ್ಲಿ  ಕೈಗೊಂಡ ಪ್ರಮುಖ ತೀರ್ಮಾನಗಳು

ಬೆಂಗಳೂರು, (ನ.27): ಕೊರೋನಾ (Covid19) ಬೆನ್ನಲ್ಲೇ ವಿದೇಶಗಳಲ್ಲಿ ಹೊಸತಳಿಯ ಒಮಿಕ್ರಾನ್ ವೈರಸ್(Omicron Virus) ಪತ್ತೆ ಹಿನ್ನೆಲೆ ಕರ್ನಾಟಕದಲ್ಲಿ ಸರ್ಕಾರ ಅಲರ್ಟ್ ಆಗಿದೆ,

ಈ ಬಗ್ಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಅವರು ಇಂದು (ನ.27) ತುರ್ತು ಸಭೆ ನಡೆಸಿದ್ದು, ಕಳೆದ ಒಂದು ವಾರದ ಪಾಸಿಟಿವಿಟಿ ರೇಟ್  ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ವಿದೇಶಗಳಲ್ಲಿ ಹೊಸ ತಳಿಯ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಅಧಿಕಾರಿಗಳ ಜತೆ ಮಹತ್ವದ ಚರ್ಚೆ ನಡೆಸಿದ್ದು, ವಿದೇಶಗಳಲ್ಲಿ ಹೊಸತಳಿಯ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಗಡಿ ಭಾಗದಲ್ಲಿ ಬಿಗಿ ಕ್ರಮಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿವೆ.

Botswana variant: ಅತ್ಯಂತ ವೇಗವಾಗಿ ಹಬ್ಬುವ, ಲಸಿಕೆಗೂ ಬಗ್ಗದ ಕೋವಿಡ್‌ನ ಹೊಸ ರೂಪಾಂತರಿ ಪತ್ತೆ!

ಇನ್ನು ಈ ಸಭೆ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,  ಮಹಾರಾಷ್ಟ್ರ, ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. 

ರಾಜ್ಯದ ಗಡಿಯಲ್ಲಿ ದಿನದ 24 ಗಂಟೆ ಬಿಗಿ ಕ್ರಮಕ್ಕೆ ಸೂಚನೆ ಕೊಡಲಾಗಿದೆ. ಗಡಿಯಲ್ಲಿ ಸಿಬ್ಬಂದಿ ಶಿಫ್ಟ್ ವೈಸ್​ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ. ಲಸಿಕೆ ಪಡೆದಿದ್ದರೋ ಇಲ್ಲವೋ ಎಂದು ಪರಿಶೀಲಿಸಲು ಸೂಚನೆ ಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಕೇರಳದಿಂದ ಬರುವ ಪ್ರಯಾಣಿಕರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳ ಹಿನ್ನೆಲೆ ಟೆಸ್ಟ್​ ಕಡ್ಡಾಯ ಎಂದು ತಿಳಿಸಲಾಗಿದೆ. ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ ಆಗಿದೆ. 

Botswana variant: Sensexಗೂ ಹೊಸ ಸೋಂಕಿನ ಶಾಕ್‌ : ಜಗತ್ತಿನೆಲ್ಲೆಡೆ ಷೇರುಗಳ ಬೆಲೆ ಕುಸಿತ!

 ರೈಲು, ಬಸ್​ ನಿಲ್ದಾಣದಲ್ಲಿ ಕೇರಳ ಪ್ರಯಾಣಿಕರಿಗೆ ಟೆಸ್ಟ್​ ಕಡ್ಡಾಯ ಮಾಡಲಾಗಿದೆ. ಕಡ್ಡಾಯವಾಗಿ ಕೊವಿಡ್​ ಟೆಸ್ಟ್​ ನಡೆಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.

ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಚೆಕ್​ಪೋಸ್ಟ್​ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಸೂಚನೆ ಕೊಟ್ಟಿದ್ದೇವೆ. ಕೇರಳದಿಂದ ಬಂದವರಿಗೆ ಆರ್​ಟಿಪಿಸಿಆರ್ ಟೆಸ್ಟ್​ ಕಡ್ಡಾಯ ಇರಲಿದೆ. ಹಾಸ್ಟೆಲ್​​ನಲ್ಲಿದ್ದವರಿಗೆ ಎರಡನೇ ಬಾರಿಗೆ ಟೆಸ್ಟ್​ ಮಾಡಿಸಬೇಕು ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಆರ್. ಅಶೋಕ್​ ಹೇಳಿದ್ದಾರೆ.

 ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸಿ. ವಿದೇಶಿ ಪ್ರಜೆಗಳಿಗೆ ಕಡ್ಡಾಯವಾಗಿ RTPCR ಟೆಸ್ಟ್ ಮಾಡಿಸಿ. ಏರ್​ಪೋರ್ಟ್​ನಲ್ಲೇ RTPCR ಟೆಸ್ಟ್ ಮಾಡಿಸಿ ಎಂದು ಸೂಚನೆ ನೀಡಲಾಗಿದೆ ಎಂದರು.

ಕಚೇರಿ, ಹೋಟೆಲ್​, ಮಾಲ್​ಗಳಲ್ಲಿ ಸಿಬ್ಬಂದಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ​ ಪಡೆದಿರಲೇಬೇಕು. ಶಾಲಾ-ಕಾಲೇಜುಗಳಲ್ಲಿ ಕೊರೊನಾ ಕೇಸ್​ ಹೆಚ್ಚಾಗಿವೆ. ಕೇಸ್​ ಹೆಚ್ಚಾದ ಕಡೆ ನಿಗಾವಹಿಸಲು ಡಿಸಿಗಳಿಗೆ ಸೂಚನೆ ಕೊಡಲಾಗಿದೆ. ಜಿಲ್ಲಾಧಿಕಾರಿಗಳಿ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುತ್ತೆ. ಮದುವೆಗಳಲ್ಲಿ ಜನರು ಮಾಸ್ಕ್​​ ಧರಿಸುವುದು ಕಡ್ಡಾಯವಿರಲಿ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮುಂದೂಡಿ. ಮುಂದಿನ ದಿನಗಳಲ್ಲಿ ಕೊರೊನಾ ಸ್ಥಿತಿಗತಿ ನೋಡಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಕೇಸ್​ಗಳನ್ನ ನೋಡಿಕೊಂಡು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ವಿವರಿಸಿದರು.

ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು:
1. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ
2. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವೀಕ್ಷಣೆ ಕೈಗೊಳ್ಳುವುದು
3. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ
4. ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು
5. 16 ನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
6. ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು
7. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು
8. ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು
9. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು
10. ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
11. ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ
12. ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

click me!