
ಬೆಂಗಳೂರು, (ಮೇ.10): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಸೋಮವಾರ) ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್ -19 ನಿಯಂತ್ರಣದ ಕುರಿತು ಚರ್ಚೆ ನಡೆಸಿದರು.
ಈ ವೇಳೆ ಕೋವಿಡ್ -19 ನಿಯಂತ್ರಿಸಲು ಸಚಿವರುಗಳಿಗೆ ನೀಡಿರುವ ಜವಾಬ್ದಾರಿಯ ಅನುಸಾರ ಎಲ್ಲಿಯೂ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಕೊಂಚ ಬದಲಾವಣೆ: ವಾಹನ ಬಳಕೆಗೆ ಷರತ್ತುಬದ್ಧ ಅನುಮತಿ
ಸಿಎಂ ಸಭೆಯ ಹೈಲೈಟ್ಸ್..
* ಪ್ರಮುಖವಾಗಿ ಕಟ್ಟುನಿಟ್ಟಿನ ರೂಲ್ಸ್ ಗಳನ್ನು ಜಾರಿಗೆ ತಂದಿದ್ದು ಜನರು ಅನಗತ್ಯವಾಗಿ ಓಡಾಡುವುದನ್ನು ತಪ್ಪಿಸಬೇಕು.
*ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸುವುದು ಮತ್ತು ರೆಮಿಡಿಸಿವಿರ್ ಡ್ರಗ್ ಪೂರೈಕೆಯನ್ನು ಅಗತ್ಯತೆಗನುಸಾರವಾಗಿ ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಲು ಎಂದರು.
*ಖಾಸಗಿ ಆಸ್ಪತ್ರೆ ಗಳ ಬೆಡ್ ಗಳ ಬಗ್ಗೆ ನಿಗಾ ಇಡಬೇಕು ಅಲ್ಲದೆ ಆಕ್ಸಿಜನ್, ರೆಮಿಡಿಸಿವಿರ್ ಹಾಗು ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಬೇಕು.
* ವಾರ್ ರೂಮ್ ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು.
* ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳಿಗೆ ಮತ್ತು ಆಸ್ಪತ್ರೆ ಗಳಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಹಾಕಲು ಈಗಿನಿಂದಾನೆ ಕೆಲಸ ಶುರು ಮಾಡಲು ಸೂಚಿಸಲಾಯಿತು.
* 3 ನೇ ಅಲೆಗೆ ಈಗಿನಿಂದಾನೆ ಸಿದ್ದರಾಗಬೇಕಿದ್ದು ಅದಕ್ಕೊಂದು ಟಾಸ್ಕ್ ಫೋರ್ಸ್ ಕಮಿಟಿ ಮಾಡಲು ಸೂಚಿಸಲಾಯಿತು.
ಶಾಸಕರು ಹಾಗು ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿ ಜಿಲ್ಲೆಗಳ ಕರೋನ ಪರಿಸ್ಥಿತಿ ಹತೋಟಿಗೆ ತರಲು ಶ್ರಮಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ