ಕೋವಿಡ್ 3ನೇ ಅಲೆ: ಉನ್ನತ ಮಟ್ಟದ ತಜ್ಞ ಸಮಿತಿ ಸಭೆಯ ಮುಖ್ಯಾಂಶಗಳು

By Suvarna NewsFirst Published Jun 22, 2021, 4:01 PM IST
Highlights

* ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆತಂಕ
* ಡಾ. ದೇವಿಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ ವರದಿ 
* ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ

ಬೆಂಗಳೂರು, (ಜೂನ್.22): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆತಂಕ ಶುರುವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಏನೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ಡಾ. ದೇವಿಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದೆ. 

ವರದಿ ಸಲ್ಲಿಕೆ ಬೆನ್ನಲ್ಲೇ ಶಾಲಾ ಪ್ರಾರಂಭದ ಬಗ್ಗೆ ಸಿಎಂ ಮಹತ್ವದ ಪ್ರತಿಕ್ರಿಯೆ

ಈ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಮಂಗಳವಾರ) ಕೋವಿಡ್-19 ಮೂರನೇ ಅಲೆ ತಡೆಗಟ್ಟಲು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು.  ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.

ಸಭೆಯ ಮುಖ್ಯಾಂಶಗಳು
1.ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿಯು ಕೋವಿಡ್ 3ನೇ ಅಲೆ ಸಿದ್ಧತೆ ಕುರಿತಂತೆ ಚರ್ಚಿಸಲಾಯಿತು

2.ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯು ಕೆಲವು ಶಿಫಾರಸುಗಳನ್ನು ಮಾಡಿದೆ.

3.ಜಿಲ್ಲೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮಕ್ಕಳ ಹೆಚ್.ಡಿ.ಯು ಘಟಕ, ಮಕ್ಕಳ ತೀವ್ರ ನಿಗಾ ಘಟಕ ಸ್ಥಾಪನೆ, ಮಕ್ಕಳ ಆಸ್ಪತ್ರೆ ಸ್ಥಾಪನೆ ಕುರಿತು ಸಲಹೆ ನೀಡಿದೆ.

4. 3ನೇ ಅಲೆ ತಡೆಗಟ್ಟಲು ಮಾನವ ಸಂಪನ್ಮೂಲ, ಆರ್ಥಿಕ ಸಂಪನ್ಮೂಲ ಹಾಗೂ ಪರಿಣತರ ನೆರವು ಪಡೆಯುವ ಕುರಿತು ಸಹ ಸಮಿತಿ ಸಲಹೆ ನೀಡಿದೆ. ವಿವಿಧ ವೈದ್ಯಕೀಯ ಸಂಘಟನೆಗಳ ಸಹಯೋಗದೊಂದಿಗೆ ವೈದ್ಯರು, ದಾದಿಯರ ಕೊರತೆ ನಿವಾರಣೆ, ರಾಜ್ಯದಲ್ಲಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯುವುದು, ಕಾರ್ಪೊರೇಟ್ ಸಂಸ್ಥೆಗಳ ಸಹಕಾರದಿಂದ ಸಂಪನ್ಮೂಲಗಳ ನೆರವು ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಸಾರ್ವಜನಿಕರ ಸಹಭಾಗಿತ್ವ ಪಡೆಯುವ ಬಗ್ಗೆ ಸಲಹೆ ನೀಡಿದೆ.

5. ಅಪೌಷ್ಟಿಕತೆ ನಿವಾರಣೆಗೆ ಆದ್ಯತೆ ನೀಡುವಂತೆಯೂ ತಜ್ಞರ ಸಮಿತಿ ಸಲಹೆ ನೀಡಿದೆ.

6.   ಕೋವಿಡ್ ಗೆ ತುತ್ತಾದ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸಲು ಪ್ರತಿ ಆಸ್ಪತ್ರೆಯಲ್ಲಿ ಮನೋವೈದ್ಯರ ಸೇವೆ ಒದಗಿಸುವುದು ಸೂಕ್ತ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

7.    ಆಮ್ಲಜನಕ ಕೊರತೆ ನಿವಾರಣೆ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಲಹೆ ನೀಡಿದೆ.

8.   ಕೋವಿಡ್ ನಂತರ ತಲೆದೋರುವ ಆರೋಗ್ಯ ಸಮಸ್ಯೆಗಳ ಕುರಿತು ಎಚ್ಚರ ವಹಿಸುವ ಕುರಿತು ಹಾಗೂ ಕೋವಿಡ್ ಅಲ್ಲದೆ ಇತರ ಆರೋಗ್ಯ ಸಮಸ್ಯೆಗಳಿಗೂ ಆದ್ಯತೆ ನೀಡುವ ಅಗತ್ಯವಿದೆ.

9.   ಮಕ್ಕಳಿಗೆ ಪರೀಕ್ಷೆ ನಡೆಸುವ ಬಗ್ಗೆ, ಕೋವಿಡ್ ಕೇರ್ ಸೆಂಟರುಗಳಲ್ಲಿರುವ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.

10.  ಕೋವಿಡ್‌  ನಿಯಂತ್ರಣಕ್ಕೆ ಲಸಿಕೆ ಅತ್ಯಂತ ಸೂಕ್ತ ಪರಿಹಾರವಾಗಿದ್ದು, ಲಸಿಕೆ ಅಭಿಯಾನ ಇನ್ನಷ್ಟು ತೀವ್ರಗೊಳಿಸಲು ಸಲಹೆ ನೀಡಿದೆ.

* ಶಾಲಾ ಕಾಲೇಜು ತೆರೆಯುವ ಬಗ್ಗೆ
11. ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದಕ್ಕೆ ಲಸಿಕೆ ನೀಡಲು  ಆದ್ಯತೆ ನೀಡುವಂತೆ ಸಲಹೆ ಮಾಡಲಾಗಿದೆ.

12. ಶಾಲಾ ಕಾಲೇಜುಗಳನ್ನು  ಹಂತ ಹಂತವಾಗಿ ತೆರೆಯುವ ಬಗ್ಗೆ ಚಿಂತನೆ ನಡೆಸಲು ಸಮಿತಿ ಸಲಹೆ ಮಾಡಿದೆ.

13. 18 ವಯಸ್ಸಿನ ಮೇಲಿನ ಮಕ್ಕಳಿಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಿ ಕಾಲೇಜುಗಳನ್ನು ಪ್ರಾರಂಭಿಸುವ ಚಿಂತನೆ ನಡೆಸಲಾಗಿದೆ.

click me!