ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು (ಬುಧವಾರ) ಸಚಿವ ಸಂಪುಟದ ಸಭೆಯಲ್ಲಿ ಹಲವು ನಿರ್ಣಯಗಳು ಆಗಿವೆ. ಅವು ಈ ಕೆಳಗಿಹಿನಂತಿವೆ.
ಬೆಂಗಳೂರು, (ಮಾ.03): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಿಲೀಸ್ ಮಧ್ಯೆ ಕರೆದ ಸಂಪುಟ ಸಭೆ ತೀವ್ರ ಕುತೂಹಲ ಮೂಡಿಸಿತ್ತು. ಸಂಪುಟ ಸಭೆ ಮುಗಿದಿದ್ದು, ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸಂಪುಟ ಸಭೆಯಲ್ಲಾದ ಮಹತ್ವದ ಚರ್ಚೆ ಬಗ್ಗೆ ಮಾಹಿತಿ ನೀಡಿದ ಬಸವರಾಜ ಬೊಮ್ಮಾಯಿ
ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು (ಬುಧವಾರ) ಸಚಿವ ಸಂಪುಟದ ಸಭೆಯಲ್ಲಿ ಹಲವು ನಿರ್ಣಯಗಳು ಆಗಿವೆ. ಸಭೆ ಬಳಿಕೆ ಪ್ರತಿಕ್ರಿಯಿಸಿದ ಗೃಹಮಂತ್ರಿ ಬಸವರಾಜ ಬೊಮ್ಮಾಯಿ, ಹಲವು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ. ಪಂಚಮಸಾಲಿ ಮೀಸಲಾತಿ ಬಗ್ಗೆ ಚರ್ಚೆಯಾಗಿದೆ ಎಂದು ಮಾಹಿತಿ ನೀಡಿದರು.
ಸಚಿವ ಸಂಪುಟದ ನಿರ್ಧಾರಗಳು
- ಕರ್ನಾಟಕ ನಾಗರಿಕ ಸೇವಾ ( ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ) ತಿದ್ದುಪಡಿ ನಿಯಮಗಳು 2021 ಅನುಮೋದನೆ
- ಸರ್ಕಾರಿ/ ಅನುದಾನಿತ ಆಯುಷ್ ಮಹಾವಿದ್ಯಾಲಯಗಳ ಬೋಧಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಅನುಮೋದನೆ
- ರಾಜ್ಯದ 774 ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವ ಸಿ.ಸಿ ಟಿವಿ ಕ್ಯಾಮರಾ ಮೇಲ್ದರ್ಜೆ 281 ಪೊಲೀಸ್ ಠಾಣೆಗಳಿಗೆ ಸಿಸಿ ಕ್ಯಾಮರಾ ಅಳವಡಿಸಲು 18.50 ಕೋಟಿ ಆಡಳಿತಾತ್ಮಕ ಅನುಮೋದನೆ
- ಕರ್ನಾಟಕ ಜಲಸಾರಿಗೆ ಮಂಡಳಿ ತಿದ್ದುಪಡಿ ವಿಧೇಯಕ 2021 ಕ್ಕೆ ಅನುಮೋದನೆ
- ಕರ್ನಾಟಕ ಜಲಸಾರಿಗೆ ಮಂಡಳಿ (ತಿದ್ದುಪಡಿ) ವಿಧೇಯಕ, 2021 ಕ್ಕೆ ಆನುಮೋದನೆ
- ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2020ಕ್ಕೆ ಅನುಮೋದನೆ
- ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ರಾಯಚೂರು ಜಿಲ್ಲೆಗಳ ಕೆಲ ತಾಲ್ಲೂಕಿನ ಕೆರೆಗಳಿಗೆ ಕುಡಿಯುವ ನೀರು ಹಾಗೂ ಅಂತರ್ಜಲ ಅಭಿವೃದ್ಧಿ ಸಲುವಾಗಿ ಕೃಷ್ಣಾ ನದಿಯಿಂದ ಬಶ ನೀರಾವರಿ ಮೂಲಕ ನೀರನ್ನು ತುಂಬಿರುವ ರೂ, 457.18 ಕೋಟಿಗಳ ಆಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.
- ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಅನುಕೂಲವಾಗುವ ದೃಷ್ಟಿಯಿಂದ ಬೆಂಗಳೂರಿನ ಹೆಚ್ ಎಸ್ ಆರ್ ಬಡಾವಣೆಯಲ್ಲಿ ಹಾಸ್ಟೆಲ್ 59.00 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಅನುಮೋದನೆ.
- ಕೋಲಾರ ಜಿಲ್ಲೆಯ, ಬಂಗಾರಪೇಟೆ ತಾಲ್ಲೂಕಿನಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ ರೂ. 18.48 ಕೋಟಿಗಳಿಗೆ ಅನುಮೋದನೆ
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಾವಣಗೆರೆ ಜಿಲ್ಲೆಯ, ಹೊನ್ನಾಳಿ ತಾಲ್ಲೂಕಿನ ಸಲವನಹಳ್ಳಿ ಹೊಸಕೊಪ್ಪ ಮತ್ತು ಇತರೆ 59 ಜನವಸತಿಗಳಿಗೆ ಜಲ ಜೀವನ್ ಯೋಜನೆಯಡಿ ಕುಡಿಯುವ ನೀರು ಯೋಜನೆ NABARD-RIDF ಅಡಿ 69.26 ಆಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ