ಮೈಸೂರು ದಸರಾ-2021:ಯಾವಾಗ ಏನೇನು ನಡೆಯುತ್ತೆ? ಇಲ್ಲಿದೆ ಕಾರ್ಯಕ್ರಮಗಳ ಪಟ್ಟಿ

By Suvarna NewsFirst Published Sep 8, 2021, 8:21 PM IST
Highlights

* ವಿಶ್ವವಿಖ್ಯಾತ ಮೈಸೂರು ದಸರಾ
* ಮೈಸೂರು ದಸರಾ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ
* ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ

ಮೈಸೂರು, (ಸೆ.08): ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಮೈಸೂರು ದಸರಾ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸುದ್ದಿಗೋಷ್ಠಿ ನಡೆಸಿ ದಸರಾ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ನೀಡಿದರು.

ಅದಕ್ಕಿಂತಲೂ ಮೊದಲು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆ ಹೇಗೆ? ಸಭೆಯಲ್ಲಿ ಮಹತ್ವದ ತೀರ್ಮಾನ

ಮೈಸೂರು ದಸರಾವನ್ನು ಎಷ್ಟೇ ಸರಳವಾಗಿ ಆಚರಿಸಿದರೂ ಅದರ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಹೀಗಾಗಿ ಈ ಬಾರಿಯ ದಸರಾ ಸಂಬಂಧಿತ ಸಭೆಯಲ್ಲಿ ಜಂಬೂ ಸವಾರಿ ಸೇರಿದಂತೆ ಕೆಲ ವಿಚಾರಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದ್ದು, ದಸರಾ ಆನೆಗಳ ಪಟ್ಟಿಯನ್ನು ಬಿಡುಗಡೆ‌ ಮಾಡಲಾಗಿದೆ. ಇನ್ನು ಯಾವಾಗ-ಯಾವ ಕಾರ್ಯಕ್ರಮ ನಡೆಯಲಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ..

ಮೈಸೂರು ದಸರಾ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

* ಸೆಪ್ಟೆಂಬರ್ 13 ರಂದು ಬೆಳಿಗ್ಗೆ 9.30ಕ್ಕೆ ಗಜಪಡೆ ಪೂಜೆ ಮಾಡಿ, ವೀರನಹೊಸಹಳ್ಳಿಯಿಂದ ಎಂಟು ಆನೆಗಳನ್ನು ಕರೆ ತರಲಾಗುತ್ತದೆ.

* ಸೆಪ್ಟೆಂಬರ್ 16 ರಂದು ಮೈಸೂರು ಅರಮನೆ ಬಳಿ ಗಜಪಡೆಯನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುವುದು

* ಅಕ್ಟೋಬರ್ 7ರಿಂದ 15 ರವರೆಗೆ ದಸರಾ ಮಹೋತ್ಸವದಲ್ಲಿ ದೀಪಾಲಂಕಾರವಿರುತ್ತದೆ.

* ಅಕ್ಟೋಬರ್ 1ರಿಂದ 9 ದಿನ ಅರಮನೆ ಆವರಣದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ.

* ಅಕ್ಟೋಬರ್ 7ರಂದು ಚಾಮುಂಡಿ ಬೆಟ್ಟದಲ್ಲಿ ಅಧಿಕೃತ ಮೈಸೂರು ದಸರಾ ಉದ್ಘಾಟನೆ

* ಅಕ್ಟೋಬರ್ 15ರ ಸಂಜೆ 4.36ಕ್ಕೆ ಮೈಸೂರು ಅರಮನೆ ಆವರಣದಲ್ಲಿ ನಂದಿ ಪೂಜೆ

* ಅಕ್ಟೋಬರ್ 15ರ ಸಂಜೆ 5ಕ್ಕೆ ಅರಮನೆ ಆವರಣದಲ್ಲಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಜಂಬೂಸವಾರಿ

* ಅಕ್ಟೋಬರ್ 16ರಂದು ಗಜಪಡೆಗೆ ಬೀಳ್ಕೊಡುಗೆ

click me!