ಇಷ್ಟು ದಿನದ ಬಿಸಿಯೂಟವನ್ನು ಮಕ್ಕಳಿಗೆ ಹೇಗೆ ತಲುಪಿಸುತ್ತೀರಿ?: ಹೈಕೋರ್ಟ್‌

Kannadaprabha News   | Asianet News
Published : Nov 20, 2020, 07:25 AM IST
ಇಷ್ಟು ದಿನದ ಬಿಸಿಯೂಟವನ್ನು ಮಕ್ಕಳಿಗೆ ಹೇಗೆ ತಲುಪಿಸುತ್ತೀರಿ?: ಹೈಕೋರ್ಟ್‌

ಸಾರಾಂಶ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಅರ್ಹ ಮಕ್ಕಳಿಗೆ ಆಹಾರ ಪದಾರ್ಥ ತಲುಪಿಸುವ ಸೂಕ್ತ ಯೋಜನೆ ರೂಪಿಸಲಾಗುತ್ತದೆ ಎಂದು ಪ್ರಮಾಣಪತ್ರ ಸಲ್ಲಿಸಿದ ಈ ವೇಳೆ ಸರ್ಕಾರಿ ವಕೀಲರು| ಆಹಾರ ತಲುಪಿಸುವ ವಿಚಾರ ಮಕ್ಕಳು ಹಾಗೂ ಪೋಷಕರಿಗೆ ಹೇಗೆ ತಿಳಿಯುತ್ತದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌| 

ಬೆಂಗಳೂರು(ನ.20): ಲಾಕ್‌ಡೌನ್‌ ವೇಳೆ ರಾಜ್ಯದಲ್ಲಿ ಸರ್ಕಾರಿ ಶಾಲೆ ಮತ್ತು ಅಂಗನವಾಡಿಗಳ ಬಿಸಿಯೂಟ ಸ್ಥಗಿತ ಮಾಡಲಾದ ಇಷ್ಟು ದಿನಗಳ ಆಹಾರವನ್ನು ಒಟ್ಟಿಗೆ ಮಕ್ಕಳಿಗೆ ಹೇಗೆ ತಲುಪಿಸುತ್ತೀರಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನಿಸಿದೆ. ಲಾಕ್‌ಡೌನ್‌ ವೇಳೆ ಜನ ಸಾಮಾನ್ಯರಿಗೆ ಎದುರಾದ ಸಮಸ್ಯೆಗಳ ಪರಿಹರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌ ಓಕ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರಿ ವಕೀಲರು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಅರ್ಹ ಮಕ್ಕಳಿಗೆ ಆಹಾರ ಪದಾರ್ಥ ತಲುಪಿಸುವ ಸೂಕ್ತ ಯೋಜನೆ ರೂಪಿಸಲಾಗುತ್ತದೆ ಎಂದು ಪ್ರಮಾಣಪತ್ರ ಸಲ್ಲಿಸಿದರು. ಇದಕ್ಕೆ ಸರ್ಕಾರದ ಯೋಜನೆ ಏನೆಂಬುದು ಪ್ರಮಾಣ ಪತ್ರದಲ್ಲಿ ಸಮರ್ಪಕವಾಗಿ ತಿಳಿಸಲಾಗಿಲ್ಲ. ಇಷ್ಟು ದಿನ ನೀಡದ ಆಹಾರ ಪದಾರ್ಥಗಳನ್ನು ಒಟ್ಟಿಗೆ ಮಕ್ಕಳಿಗೆ ಹೇಗೆ ತಲುಪಿಸುತ್ತೀರಿ? ಆಹಾರ ತಲುಪಿಸುವ ವಿಚಾರ ಮಕ್ಕಳು ಹಾಗೂ ಪೋಷಕರಿಗೆ ಹೇಗೆ ತಿಳಿಯುತ್ತದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

ಬಿಸಿಯೂಟ ಸ್ಥಗಿತಕ್ಕೆ ಹೈಕೋರ್ಟ್‌ ಗರಂ: ಸರ್ಕಾರದ ನಡೆಗೆ ನ್ಯಾಯಪೀಠ ಅಸಮಾಧಾನ

ಶಾಲೆಗಳು ಹಾಗೂ ಅಂಗನವಾಡಿಯಲ್ಲಿ ಹಾಲು-ಮೊಟ್ಟೆ ಪೂರೈಸುವ ವಿಚಾರದಲ್ಲಿ ಸರಿಯಾದ ಮಾಹಿತಿಯನ್ನು ಪ್ರಮಾಣ ಪತ್ರದಲ್ಲಿ ತಿಳಿಸಿಲ್ಲ ಎಂದು ನುಡಿಯಿತು. ಅಲ್ಲದೆ, ಆಹಾರ ಪದಾರ್ಥ ಹಂಚಿಕೆಯಲ್ಲಿ ಜಿಲ್ಲೆಗಳ ಮಧ್ಯೆ ಯಾವುದೇ ತಾರತಮ್ಯ ಮಾಡಬಾರದು. ಎಲ್ಲ ಜಿಲ್ಲೆಗಳಲ್ಲಿಯೂ ಅರ್ಹರಿಗೂ ಸಮಾನವಾಗಿ ಆಹಾರ ಪದಾರ್ಥವನ್ನು ಹಂಚಿಕೆ ಮಾಡಬೇಕು. ಈ ಎಲ್ಲ ವಿಚಾರಗಳ ಕುರಿತು ಸ್ಪಷ್ಟ ಮಾಹಿತಿಯೊಂದಿಗೆ ಹೊಸದಾಗಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ನ.23ಕ್ಕೆ ಮುಂದೂಡಿತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್