Vrushabhavathi Revival: 2 ವಾರದಲ್ಲಿ ವರದಿ ನೀಡಲು ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ!

Published : Jan 18, 2022, 07:00 AM ISTUpdated : Jan 18, 2022, 07:52 AM IST
Vrushabhavathi Revival: 2 ವಾರದಲ್ಲಿ ವರದಿ ನೀಡಲು ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ!

ಸಾರಾಂಶ

*ವೃಷಭಾವತಿ ಪುನಶ್ಚೇತನಕ್ಕೆ ಶಿಫಾರಸು ಅನುಷ್ಠಾನ ವರದಿಗೆ ಕೋರ್ಟ್ ಸೂಚನೆ! *2 ವಾರದಲ್ಲಿ ವರದಿ ನೀಡಲು ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ  

ಬೆಂಗಳೂರು (ಜ. 18): ವೃಷಭಾವತಿ ನದಿ ಪುನಶ್ಚೇತನಕ್ಕೆ (Vrushabhavathi Revival) ಕೈಗೊಳ್ಳಬಹುದಾದ ಅಲ್ಪಾವಧಿ ಕ್ರಮಗಳ ಬಗ್ಗೆ ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್‌ ಸಂಶೋಧನಾ ಸಂಸ್ಥೆ (ನೀರಿ) ಮಾಡಿರುವ ಶಿಫಾರಸುಗಳ ಅನುಷ್ಠಾನ ಸಂಬಂಧ ಆಗಿರುವ ಪ್ರಗತಿ ಕುರಿತು ಮಾಹಿತಿ ನೀಡುವಂತೆ ಬಿಬಿಎಂಪಿಗೆ (BBMP) ಹೈಕೋರ್ಟ್‌ ಎರಡು ವಾರ ಕಾಲಾವಕಾಶ ನೀಡಿದೆ. ಮಲಿನಗೊಂಡಿರುವ ವೃಷಭಾವತಿ ನದಿ ಸಂರಕ್ಷಣೆಗೆ ಕ್ರಮ ಕೈಗೊಳ್ಳಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಪಾಲಿಕೆ ಪರ ವಕೀಲರು, ‘ನೀರಿ’ಯ ಅಂತಿಮ ವರದಿ ಇನ್ನೂ ಪಾಲಿಕೆ ಕೈಸೇರಿಲ್ಲ. ಆದ್ದರಿಂದ, ಪ್ರಮಾಣಪತ್ರ ಸಲ್ಲಿಸಲು ಮತ್ತಷ್ಟುಕಾಲಾವಕಾಶ ನೀಡಬೇಕು ಎಂದು ಕೋರಿದರು.ಅರ್ಜಿದಾರರ ಪರ ವಕೀಲ ಜಿ.ಆರ್‌.ಮೋಹನ್‌, ‘ನೀರಿ’ ಶಿಫಾರಸು ಮಾಡಿರುವ ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳನ್ನು ಜಾರಿಗೆ ತರಲು ಕಳೆದ ವರ್ಷ ಜೂ.21ರಂದು ಸಭೆ ನಡೆಸಲಾಗಿದೆ. 

ಇದನ್ನೂ ಓದಿ: ಮಾಲಿನ್ಯ ನಿಯಂತ್ರಣ ಮಂಡಳಿ ಕಣ್ಮುಚ್ಚಿಕೊಂಡಿದೆ : ತೇಜಸ್ವಿ ಸೂರ್ಯ

ಅಲ್ಪಾವಧಿ ಶಿಫಾರಸುಗಳನ್ನು ತುರ್ತಾಗಿ ಜಾರಿಗೆ ತರಲು ಸಂಬಂಧಪಟ್ಟಪ್ರಾಧಿಕಾರಗಳಿಗೆ ಜವಾಬ್ದಾರಿ ಹಂಚಲಾಗಿದೆ. ಅದರಂತೆ ಅಲ್ಪಾವಧಿ ಕ್ರಮಗಳ ಜಾರಿಯ ಪ್ರಗತಿ ಬಗ್ಗೆ ಸಮಗ್ರ ಪ್ರಮಾಣಪತ್ರ ಸಲ್ಲಿಸುವಂತೆ 2021ರ ಜು.19ರಂದು ಕೋರ್ಟ್‌ ಸೂಚಿಸಿತ್ತು. ಪಾಲಿಕೆ ಹೊರತುಪಡಿಸಿ ಉಳಿದ ಪ್ರಾಧಿಕಾರಗಳು ಪ್ರಮಾಣಪತ್ರ ಸಲ್ಲಿಸಿವೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಈ ವಾದ ಪರಿಗಣಿಸಿದ ನ್ಯಾಯಪೀಠ, ‘ನೀರಿ’ ಶಿಫಾರಸು ಜಾರಿ ವಿಚಾರದಲ್ಲಾಗಿರುವ ಪ್ರಗತಿ ಕುರಿತು ಎರಡು ವಾರದೊಳಗೆ ಪ್ರಮಾಣಪತ್ರ ಸಲ್ಲಿಸುವಂತೆ ಪಾಲಿಗೆ ಸೂಚಿಸಿ ವಿಚಾರಣೆಯನ್ನು ಫೆ.3ಕ್ಕೆ ಮುಂದೂಡಿತು.

'ಕೊಪ್ಪಳ ಏತ ನೀರಾವರಿ ಯೋಜನೆ ಸಿದ್ದರಾಮಯ್ಯ ಕೊಡುಗೆ': ಕೊಪ್ಪಳ ಏತ ನೀರಾವರಿ ಯೋಜನೆ(Koppal Lift Irrigation Project)ಮತ್ತು ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯ 78 ಕೆರೆ ತುಂಬಿಸುವ ಯೋಜನೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಕೊಡುಗೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ(Basavaraj Rayareddy) ಹೇಳಿದ್ದಾರೆ. 

ನಗರದಲ್ಲಿ ಶುಕ್ರವಾರ (ಜ. 7) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಹಾಲಪ್ಪ ಆಚಾರ್‌(Halappa Achar) ಈ ಯೋಜನೆಯನ್ನು ತಾವು ಮಾಡಿದ್ದಾಗಿ ಹೇಳುವ ಜತೆಗೆ ಸಿದ್ದರಾಮಯ್ಯನವರು ನಯಾಪೈಸೆ ಅನುದಾನ(Grants) ನೀಡಿಲ್ಲ ಎಂದು ಹೇಳಿದ್ದಾರೆ. ಇಂಥ ಯೋಜನೆಯನ್ನು ಯಾರೋ ಒಬ್ಬರು ಮಾಡಿದ್ದಾರೆ ಎಂದರೆ ಮೂರ್ಖತನವಾಗುತ್ತದೆ. ಇದನ್ನು ಸರ್ಕಾರ ಮಾತ್ರ ಮಾಡಲು ಸಾಧ್ಯ. ನಾನೊಬ್ಬನೇ ಇದನ್ನು ಮಾಡಿದ್ದೇನೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ ಎಂದರು.

ಇದನ್ನೂ ಓದಿ: 'ಕಾಂಗ್ರೆಸ್‌ನಿಂದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ'

ಇದೇ ವೇಳೆ ಮಾಹಿತಿ ಹಕ್ಕು ಕಾಯ್ದೆ ಅಡಿ ಕೃಷ್ಣಾ ಭಾಗ್ಯ ಜಲನಿಗಮದಿಂದ(Krishna Bhagya Water Board) ಪಡೆದಿರುವ ದಾಖಲೆ ಬಿಡುಗಡೆ ಮಾಡಿದರು. ಈ ಯೋಜನೆ ಅನುಷ್ಠಾನಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದ ಎಚ್‌.ಡಿ. ಕುಮಾರಸ್ವಾಮಿ(HD Kumaraswamy) ಹಾಗೂ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ. ಶಿವಕುಮಾರ(DK Shivakumar) ಕಾರಣ ಎಂದು ಅವರು ಬರೆದಿರುವ ಪತ್ರಗಳ ಪ್ರತಿ ಸಹ ಬಿಡುಗಡೆ ಮಾಡಿದರು.

ಕೃಷ್ಣಾ ಭಾಗ್ಯಜಲನಿಗಮದ ಮೂಲಕ ಪಡೆದಿರುವ ದಾಖಲೆ ತೋರಿಸಿ, 23.1. 2013ರಲ್ಲಿ ಆಗಿನ ಮುಖ್ಯಮಂತ್ರಿ ಮೊದಲ ಹೆಡ್‌ವರ್ಕ್‌ಗೆ ಶಿಲಾನ್ಯಾಸ ಮಾಡಿದ್ದಾರೆ. 4.1. 2012ರಂದು ಮೊದಲ ಕಾಮಗಾರಿಗೆ ಹಾಗೂ 13.2.2014 ಎರಡೇ ಕಾಮಗಾರಿಗೆ ಟೆಂಡರ್‌ ಕರೆಯಲಾಗಿದೆ. 13.9. 2013ರಂದು ಕರಾರು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ರಾಯರಡ್ಡಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌