Defamation Case: ಕೇಂದ್ರ ಸಚಿವ ಆರ್‌ಸಿ ವಿರುದ್ಧದ ಮಾನನಷ್ಟ ಕೇಸ್‌ ವಜಾ

By Kannadaprabha News  |  First Published Mar 1, 2022, 6:10 AM IST

*  ವಕೀಲರು- ಮಾಧ್ಯಮ ಪ್ರತಿನಿಧಿಗಳ ಗಲಭೆ ಪ್ರಕರಣ
*  ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ 
*  ಮೊಕದ್ದಮೆಯಲ್ಲಿ ಅರ್ಜಿದಾರರು ಪ್ರತಿನಿಧಿಸುವ ಸಂಸ್ಥೆಯನ್ನು ಹೆಸರಿಸಿಲ್ಲ


ಬೆಂಗಳೂರು(ಮಾ.01):  ದಶಕದ ಹಿಂದೆ ನಗರದ ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿ ನಡೆದಿದ್ದ ವಕೀಲರು ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವಿನ ಗಲಭೆ ಪ್ರಕರಣ ಸಂಬಂಧ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌(Rajeev Chandrasekhar) ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ. ಪ್ರಕರಣ ರದ್ದು ಕೋರಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.

2012ರ ಮಾ.14ರಂದು ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಬಳ್ಳಾರಿಯ ಕೋರ್ಟ್‌ನಲ್ಲಿ ಬಿ.ಕೋಟೇಶ್ವರರಾವ್‌ ಅವರು ರಾಜೀವ್‌ ಚಂದ್ರಶೇಖರ್‌ ವಿರುದ್ಧ ಮಾನನಷ್ಟಮೊಕದ್ದಮೆ ಹೂಡಿದ್ದರು. ರಾಜೀವ್‌ ಚಂದ್ರಶೇಖರ್‌ ಅವರು ಪ್ರತಿನಿಧಿಸುವ ಸುದ್ದಿ ವಾಹಿನಿಯು ವಕೀಲರ ಮಾನಹಾನಿ ಮಾಡಿ ಸುದ್ದಿ ಪ್ರಸಾರ ಮಾಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಆ ಬಗ್ಗೆ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಿದ್ದರು. ಆ ಪ್ರಕರಣ ರದ್ದು ಕೋರಿ ರಾಜೀವ್‌ ಚಂದ್ರಶೇಖರ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

Latest Videos

undefined

Cyber Crime: ಸೈಬರ್‌ ದಾಳಿ ಸರ್ಕಾರದ ಗಮನಕ್ಕೆ ತನ್ನಿ: ರಾಜೀವ್‌ ಚಂದ್ರಶೇಖರ್‌

ಪ್ರಕರಣ ಸಂಬಂಧ ವಕೀಲರ ವಿರುದ್ಧ ಅರ್ಜಿದಾರರು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸುದ್ದಿ ವಾಹಿನಿ ಸುದ್ದಿ ಪ್ರಸಾರ ಮಾಡಿತ್ತು. ಅವರು ಪ್ರತಿನಿಧಿಸುವ ಸಂಸ್ಥೆ ಮತ್ತು ಸಿಬ್ಬಂದಿ ಮಾಡಿದ ಕೃತ್ಯಗಳಿಗೆ ಅರ್ಜಿದಾರರನ್ನು ಹೊಣೆಗಾರರಾಗಿ ಮಾಡಲಾಗದು. ಜತೆಗೆ, ಮೊಕದ್ದಮೆಯಲ್ಲಿ ಅರ್ಜಿದಾರರು ಪ್ರತಿನಿಧಿಸುವ ಸಂಸ್ಥೆಯನ್ನು ಹೆಸರಿಸಿಲ್ಲ. ಅರ್ಜಿದಾರರನ್ನು ಮಾತ್ರ ಆರೋಪಿಯನ್ನಾಗಿ ಮಾಡಿರುವುದು ನಿಯಮಬಾಹಿರವಾಗಿದೆ ಎಂದು ಅಭಿಪ್ರಾಯಪಟ್ಟಹೈಕೋರ್ಟ್‌ ಮೊಕದ್ದಮೆ ರದ್ದುಪಡಿಸಿ ಆದೇಶಿಸಿದೆ.

ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಯತ್ನ

ನವದೆಹಲಿ: ರಷ್ಯಾದ(Russia) ದಾಳಿಗೆ ಸಿಲುಕಿರುವ ಉಕ್ರೇನ್‌ನಲ್ಲಿ(Ukraine) ಪ್ರಾಣ ಭೀತಿ ಎದುರಿಸುತ್ತಿರುವ ಕನ್ನಡಿಗ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ನಿಟ್ಟಿನಲ್ಲಿ ಕರ್ನಾಟಕದ ಸಂಸದ ರಾಜೀವ್‌ ಚಂದ್ರಶೇಖರ್‌ ಅವರು ಕಾರ್ಯಪ್ರವೃತ್ತರಾಗಿದ್ದಾರೆ.

ಫೆ.25 ರಂದು  ವಿದೇಶಾಂಗ ಸಚಿವ ಎಸ್‌. ಜೈಶಂಕರ್‌(S Jaishankar) ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ರಾಜೀವ್‌ ಚಂದ್ರಶೇಖರ್‌ ಅವರು, ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕ(Karnataka) ವಿದ್ಯಾರ್ಥಿಗಳನ್ನು(Students) ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಬೇಕು ಎಂದು ಮನವಿ ಮಾಡಿದರು. ಈ ವೇಳೆ ಉಕ್ರೇನ್‌ನಲ್ಲಿ ಇರುವ ಕರ್ನಾಟಕದ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದರು. 

ಕನ್ನಡಿಗರ ವಾಪಸ್‌ ಬಗ್ಗೆ ವಿದೇಶಾಂಗ ಸಚಿವರ ಜತೆ ಚರ್ಚೆ: ಸಿಎಂ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ ದೇಶದಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ವಿದೇಶಾಂಗ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದರು.

Education in India: ಕೌಶಲ್ಯಾಧಾರಿತ ಶಿಕ್ಷಣವೇ ದೇಶದ ಭವಿಷ್ಯ: ಕೇಂದ್ರ ಸಚಿವ ಆರ್‌ಸಿ

ವಿದೇಶಾಂಗ ಸಚಿವರ ಜತೆ ಚರ್ಚಿಸಲಾಗಿದ್ದು, ಕೇಂದ್ರ ಸರ್ಕಾರ(Central Government) ಭಾರತೀಯರ(Indians) ವಾಪಸಾತಿಗೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ವಿಮಾನಯಾನ ಸ್ಥಗಿತಗೊಂಡಿರುವ ಕಾರಣ ಭೂ ಸಾರಿಗೆ ಮೂಲಕ ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ಸಾಧ್ಯತೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದರು. 

ಉಕ್ರೇನ್‌ನ ಪಶ್ಚಿಮ ಭಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡಬಹುದಾಗಿದೆ ಎಂಬ ಮಾಹಿತಿ ಇದೆ. ಭಾರತೀಯ ರಾಯಭಾರ ಕಚೇರಿ(Indian Embassy) ಎಲ್ಲ ವಿದ್ಯಾರ್ಥಿಗಳ ಸಂಪರ್ಕದಲ್ಲಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಊಟೋಪಚಾರದ ವ್ಯವಸ್ಥೆಗೂ ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸಹಾಯವಾಣಿ(Helpline) ಪ್ರಾರಂಭಿಸಲಾಗಿದೆ. ಯುದ್ಧದ(War) ಪರಿಸ್ಥಿತಿ ತಿಳಿಗೊಳ್ಳುವವರೆಗೆ ಎಲ್ಲ ವಿದ್ಯಾರ್ಥಿಗಳು ಎಚ್ಚರಿಕೆಯಿಂದಿರಲು ವಿದೇಶಾಂಗ ಸಚಿವರು ಸೂಚನೆ ನೀಡಿದ್ದಾರೆ ಎಂದರು.
 

click me!