ಶಶಿಕಲಾಗೆ ವಿಶೇಷ ಸೌಲಭ್ಯ ಕೇಸ್‌: ನಿವೃತ್ತ ಡಿಜಿಪಿ ಸತ್ಯನಾರಾಯಣ ಪಾರು

By Kannadaprabha News  |  First Published Mar 24, 2023, 8:03 AM IST

ಸತ್ಯನಾರಾಯಣರಾವ್‌ 2018ರಲ್ಲಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ ಪೀಠ, ಪ್ರಕರಣ ಸಂಬಂಧ ರಾಜ್ಯ ಸರ್ಕಾರ 2021ರ ಡಿ.30ರಂದು ಹೊರಡಿಸಿದ ಆದೇಶದಲ್ಲಿ ಅರ್ಜಿದಾರರನ್ನು ನಿರಪರಾಧಿ ಎಂಬುದಾಗಿ ಹೇಳಲಾಗಿದೆ. 
 


ಬೆಂಗಳೂರು (ಮಾ.24): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಅವರಿಗೆ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಎರಡು ಕೋಟಿ ರು. ಲಂಚ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿದ್ದ ಎಫ್‌ಐಆರ್‌ ರದ್ದು ಕೋರಿ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್‌ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇತ್ಯರ್ಥಪಡಿಸಿದೆ. 

ಸತ್ಯನಾರಾಯಣರಾವ್‌ 2018ರಲ್ಲಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ ಪೀಠ, ಪ್ರಕರಣ ಸಂಬಂಧ ರಾಜ್ಯ ಸರ್ಕಾರ 2021ರ ಡಿ.30ರಂದು ಹೊರಡಿಸಿದ ಆದೇಶದಲ್ಲಿ ಅರ್ಜಿದಾರರನ್ನು ನಿರಪರಾಧಿ ಎಂಬುದಾಗಿ ಹೇಳಲಾಗಿದೆ. ತನಿಖಾಧಿಕಾರಿಗಳು ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಅರ್ಜಿದಾರರ ಹೆಸರಿಲ್ಲ. 

Tap to resize

Latest Videos

ಆರ್‌ಬಿಐ ಹೆಸರಿನಲ್ಲಿ ವಂಚಿಸುತ್ತಿದ್ದ 11 ಮಂದಿಯ ಖತರ್ನಾಕ್‌ ಗ್ಯಾಂಗ್‌ ಬಂಧನ

ಇತರೆ ಇಬ್ಬರ ವಿರುದ್ಧ ಮಾತ್ರ ದೋಷಾರೋಪ ಪಟ್ಟಿಸಲ್ಲಿಕೆಯಾಗಿದೆ. ಹಾಗಾಗಿ, ಈ ತಕರಾರು ಅರ್ಜಿಯನ್ನು ಬಾಕಿಯಿಟ್ಟುಕೊಳ್ಳುವ ಅಗತ್ಯವಿಲ್ಲ. ಅದರಂತೆ ಅರ್ಜಿ ಇತ್ಯರ್ಥಪಡಿಸಲಾಗುವುದು ಎಂದು ನ್ಯಾಯಪೀಠ ತಿಳಿಸಿತು. ಅಲ್ಲದೆ, ತಮ್ಮ ವಿರುದ್ಧ ಸರ್ಕಾರ ಯಾವುದಾದರೂ ಕ್ರಮ ಜರುಗಿಸಿದ ಪಕ್ಷದಲ್ಲಿ ಅರ್ಜಿದಾರರು ಸೂಕ್ತ ನ್ಯಾಯಾಲಯದ ಮೊರೆ ಹೋಗಲು ಸ್ವತಂತ್ರರಿದ್ದಾರೆ ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ವಿವರ: ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಸೌಲಭ್ಯ ಒದಗಿಸಲು ಎರಡು ಕೋಟಿ ಲಂಚ ಪಡೆಯಲಾಗಿದೆ ಎಂದು 2017ರಲ್ಲಿ ಅಂದಿನ ರಾಜ್ಯ ಬಂಧೀಖಾನೆ ಇಲಾಖೆ ಡಿಐಜಿಯಾಗಿದ್ದ ಡಾ.ಡಿ.ರೂಪಾ ಆರೋಪಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಲು ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ಕುಮಾರ್‌ ಅವರನ್ನು ಸರ್ಕಾರ ನೇಮಿಸಿತ್ತು. ವಿಚಾರಣೆ ಪೂರ್ಣಗೊಳಿಸಿದ್ದ ವಿನಯ್‌ ಕುಮಾರ್‌, 2017ರ ಅ.21ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು.

2000 ಎಕರೆ ನಾಲೆಡ್ಜ್‌ ಸಿಟಿ ನನ್ನ ಕನಸು: ಸಿಎಂ ಬೊಮ್ಮಾಯಿ

ಆ ವರದಿಯನ್ನು 2018ರ ಫೆ.26ರಂದು ಸಮ್ಮತಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಕರಣ ಕುರಿತು ತನಿಖೆ ನಡೆಸುವಂತೆ ಎಸಿಬಿಗೆ ನಿರ್ದೇಶಿಸಿದ್ದರು. ಅದರಂತೆ ಎಸಿಬಿ ಪೊಲೀಸರು ಮಾ.3ರಂದು ಎಫ್‌ಐಆರ್‌ ದಾಖಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ 2018ರಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಸತ್ಯನಾರಾಯಣ ರಾವ್‌, ಶಶಿಕಲಾಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ತಾವು ಯಾವುದೇ ಲಂಚ ಪಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

click me!