ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆ.30ರ ತನಕ ಯಡಿಯೂರಪ್ಪ ನಿರಾಳ

By Kannadaprabha News  |  First Published Aug 23, 2024, 7:39 AM IST

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.


ಬೆಂಗಳೂರು(ಆ.23):  ‘ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಪೊಲೀಸರಿಗೆ ನಿರ್ದೇಶಿಸಿ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್‌ , ಆ.30ರವರೆಗೆ ವಿಸ್ತರಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

Tap to resize

Latest Videos

ಸಿದ್ದರಾಮಯ್ಯ ಅವರೇ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ವಿರಮಿಸುವುದಿಲ್ಲ: ಯಡಿಯೂರಪ್ಪ ಸವಾಲು

ಇದಕ್ಕೂ ಮುನ್ನ ದಿನದ ಪ್ರಕರಣಗಳ ವಿಚಾರಣಾ ಪಟ್ಟಿಯಲ್ಲಿ (ಕಾಸ್‌ ಲಿಸ್ಟ್‌) ಅರ್ಜಿಗಳು ನಮೂದಾಗಿರಲಿಲ್ಲ. ಹೀಗಾಗಿ ಸಿಐಡಿ ಪರ ವಿಶೇಷ ಪ್ರಾಸಿಕ್ಯೂಟರ್‌ ಅಶೋಕ್‌ ಎನ್‌.ನಾಯಕ್‌ ಬೆಳಗಿನ ಕಲಾಪದ ವೇಳೆ ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಕೋರಿದರು. ಜೊತೆಗೆ, ಅರ್ಜಿಗಳಿಗೆ ಆಕ್ಷೇಪಣೆ ಸಹ ಸಲ್ಲಿಸಿದರು.

ಈ ಮನವಿ ಮೇರೆಗೆ ನ್ಯಾಯಪೀಠ, ದಿನದ ಕಲಾಪದ ಕೊನೆಯಲ್ಲಿ ಅರ್ಜಿಗಳನ್ನು ಕೈಗೆತ್ತಿಕೊಂಡಿತು. ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.
ಇದರಿಂದ ಅರ್ಜಿಗಳ ವಿಚಾರಣೆಯನ್ನು ಆ.30ಕ್ಕೆ ಮುಂದೂಡಿದ ನ್ಯಾಯಪೀಠ, ಅಲ್ಲಿಯವರೆಗೆ ಅರ್ಜಿಗಳ ಸಂಬಂಧ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿತು. 

click me!