
ಬೆಂಗಳೂರು: ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಪ್ರತಾಪ್ ಸಿಂಹ ಮತ್ತಿತರರು ಸಲ್ಲಿಸಿದ್ದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ,ಈ ಅರ್ಜಿ ಇತ್ಯರ್ಥ ಆಗುವವರೆಗೆ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದರು.
ಕನ್ನಡಪ್ರಭ ವಾರ್ತೆ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರ ಪೀಠ, ದೂರಿನಲ್ಲಿರುವ ಅಂಶಗಳು ಮತ್ತು ಪ್ರತಾಪ ಸಿಂಹ ಅವರ ಭಾಷಣದ ನಿರ್ದಿಷ್ಟ ಅಂಶಗಳನ್ನು ಗಮನಿಸಿದರೆ ತನಿಖೆ ನಡೆಸುವ ಅಗತ್ಯವನ್ನು ಪ್ರಕರಣ ಸೂಚಿಸುತ್ತದೆ. ಹಾಗಾಗಿ, ಪ್ರತಾಪ್ ಸಿಂಹ ವಿರುದ್ಧದ ತನಿಖೆ ಮುಂದುವರಿಯಲಿ ಎಂದು ತಿಳಿಸಿದೆ. ಆದರೆ, ಇದೇ ಪ್ರಕರಣದ ಇತರ ಆರೋಪಿಗಳಾದ ಕರಣ್ ಸಿ.ಸುಬೇದಾರ್, ಶಿವಕುಮಾರ್ ಮತ್ತು ಗುರುರಾಜ ವಿರುದ್ಧದ ತನಿಖೆ ರದ್ದುಪಡಿಸಿ ಆದೇಶಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 12 ಕೋಟಿ ರು. ಮೌಲ್ಯದ ಡ್ರಗ್ಸ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 4 ದಿನಗಳ ಅವಧಿಯಲ್ಲಿ ಕಸ್ಟಮ್ಸ್ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಕಳ್ಳ ಸಾಗಾಣಿಕೆ ಮೂಲಕ ರಾಜ್ಯಕ್ಕೆ ಬರುತ್ತಿದ್ದ ಡ್ರಗ್ಸ್ ಪತ್ತೆ ಹಚ್ಚಿ ಪ್ರತ್ಯೇಕವಾಗಿ ನಾಲ್ವರನ್ನು ಬಂಧಿಸಿ 12 ಕೋಟಿ ರು.ಬೆಲೆಯ 35 ಕೆಜಿ ಹೈಡ್ರೋ ಗಾಂಜಾ ಜಪ್ತಿ ಮಾಡಿದೆ.
ನ.19 ರಂದು ಕೆಐಎಗೆ ಬ್ಯಾಂಕಾಕ್‌ನಿಂದ ಬಂದಿಳಿದ ಪೆಡ್ಲರ್‌ನಿಂದ 3.92 ಕೋಟಿ ರು.ಬೆಲೆಯ 11.2 ಕೆಜಿ, ನ.18 ರಂದು ಬಂದ ಬ್ಯಾಂಕಾಕ್ ಪ್ರವಾಸಿಗನಿಂದ 2.94 ಕೋಟಿ ರು.ಮೌಲ್ಯದ 8.4 ಕೆಜಿ, ಮರುದಿನ ಅಲ್ಲಿಂದಲೇ ಆಗಮಿಸಿದವನಿಂದ 5.7 ಕೋಟಿ ರು.ಮೌಲ್ಯದ 16.3 ಕೆಜಿ ಹಾಗೂ ನ.16 ರಂದು ಬ್ಯಾಂಕಾಕ್‌ನ ಪ್ರವಾಸಿಗನಿಂದ 14.73 ಲಕ್ಷ ರು. ಮೌಲ್ಯದ 421 ಗ್ರಾಂ ಸೇರಿದಂತೆ ಒಟ್ಟು 12 ಕೋಟಿ ರು. ಮೌಲ್ಯದ 35 ಕೆಜಿ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದು ಕಾರ್ಯಾಚರಣೆಯಲ್ಲಿ ನ.18 ರಂದು ಮಲೇಷಿಯಾದ ಕೌಲಾಲಂಪುರದಿಂದ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿ ಪ್ರವಾಸಿಗ ಕಸ್ಟಮ್ಸ್ ಬಲೆಗೆ ಬಿದ್ದಿದ್ದಾನೆ. ಈತನಿಂದ 71.9 ಲಕ್ಷ ರು ಬೆಲೆಯ 518 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ