ಕಾವೇರಿ 2.0 ವ್ಯಾಪಕ ಪ್ರಚಾರಕ್ಕೆ ಹೈಕೋರ್ಟ್‌ ಸೂಚನೆ

Published : Jul 14, 2023, 03:00 AM IST
ಕಾವೇರಿ 2.0 ವ್ಯಾಪಕ ಪ್ರಚಾರಕ್ಕೆ ಹೈಕೋರ್ಟ್‌ ಸೂಚನೆ

ಸಾರಾಂಶ

ಹುದ್ದೆಗಳೇ ಇಲ್ಲದ ಕಡೆ ಕೆಲವು ಸಬ್‌ ರಿಜಿಸ್ಟ್ರಾರ್‌ ಕೆಲಸ ಮಾಡಿ ವೇತನ ಪಡೆದ ಆರೋಪ ಸಂಬಂಧ ನಗರದ ಹಲವು ಸಬ್‌ ರಿಜಿಸ್ಟ್ರಾರ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್‌ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ.  

ಬೆಂಗಳೂರು(ಜು.14):  ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ದಾಖಲೆಗಳ ನೋಂದಣಿಗಾಗಿ ಅಳವಡಿಸಲಾಗಿರುವ ಕಾವೇರಿ 2.0 ತಂತ್ರಾಂಶದ ಬಗ್ಗೆ ವ್ಯಾಪಕ ಪ್ರಚಾರ ಮಾಡುವ ಮೂಲಕ ಸಾಫ್ಟ್‌ವೇರ್‌ ಬಳಕೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಕಂದಾಯ ಇಲಾಖೆಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಹುದ್ದೆಗಳೇ ಇಲ್ಲದ ಕಡೆ ಕೆಲವು ಸಬ್‌ ರಿಜಿಸ್ಟ್ರಾರ್‌ ಕೆಲಸ ಮಾಡಿ ವೇತನ ಪಡೆದ ಆರೋಪ ಸಂಬಂಧ ನಗರದ ಹಲವು ಸಬ್‌ ರಿಜಿಸ್ಟ್ರಾರ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್‌ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ.

ವನ್ಯಜೀವಿ ಮಾನವ ಸಂಘರ್ಷ: ಕಂಟ್ರೋಲ್‌ ರೂಂ ಸ್ಥಾಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ವಿಚಾರಣೆ ವೇಳೆ ಖುದ್ದು ಹಾಜರಿದ್ದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ, ನ್ಯಾಯಾಲಯದ ಆದೇಶದಂತೆ ಕಾವೇರಿ ತಂತ್ರಾಂಶ ರೂಪಿಸಿ ಜಾರಿಗೆ ತಂದು ದಾಖಲೆಗಳ ನೋಂದಣಿಯಲ್ಲಿ ಮಾನವ ಹಸ್ತಕ್ಷೇಪ ನಿಯಂತ್ರಿಸಲಾಗಿದೆ. ದಾಖಲೆಗಳಿಗೆ ಸಹಿ ಹಾಕಲು ಹಾಗೂ ಬೆರಳಚ್ಚುಗಳನ್ನು ಒದಗಿಸಲು ಮಾತ್ರ ಜನ ಸಬ್‌ ರಿಜಿಸ್ಟ್ರಾರ್‌ಗಳ ಮುಂದೆ ಹಾಜರಾಗಬೇಕಾಗುತ್ತದೆ ಎಂದರು.

ಸಬ್‌ ರಿಜಿಸ್ಟ್ರಾರ್‌ ಕಚೇರಿ ಕಾರ್ಯ ನಿರ್ವಹಣೆಯಲ್ಲಿ ನ್ಯಾಯಾಲಯವು ಗುರುತಿಸಿದ್ದ ಲೋಪಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಎಚ್ಚರವಹಿಸಲಾಗಿದೆ. ನೋಂದಣಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿದೆ ಎಂದು ವಿವರಿಸಿದರು.

ಎರಡನೇ ಮದುವೆ ಕಾನೂನು ಬಾಹಿರವಾಗಿದ್ರೂ ಜೀವನಾಂಶ ಪಡೆಯಲು ಪತ್ನಿ, ಮಕ್ಕಳು ಅರ್ಹ: ಹೈಕೋರ್ಟ್ ಮಹತ್ವದ ಆದೇಶ

ಅಲ್ಲದೆ, ವ್ಯವಸ್ಥೆಯಲ್ಲಿರುವ ದೊಡ್ಡ ಸಮಸ್ಯೆಗಳನ್ನು ಸರಿಪಡಿಸಲು ಎರಡು ತಿಂಗಳ ಕಾಲಾವಕಾಶಬೇಕಿದೆ. ಈ ಪ್ರಕರಣದಲ್ಲಿ ಅರ್ಜಿದಾರರ ಸಮಸ್ಯೆಯನ್ನು ಪ್ರತ್ಯೇಕವಾಗಿ ಪರಿಗಣಿಸಿ ಶೀಘ್ರ ಬಗೆಹರಿಸಲಾಗುವುದು. ಸದ್ಯ ನಡೆಯುತ್ತಿರುವ ಬಜೆಟ್‌ ಅಧಿವೇಶನದ ಮುಗಿದ ನಂತರ ಎಲ್ಲ ಸಮಸ್ಯೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವ್ಯವಸ್ಥೆ ಜಾರಿಗೆ ತಂದಿದ್ದರೂ, ಅದರ ಬಗ್ಗೆ ವ್ಯಾಪಕ ಪ್ರಚಾರ ನೀಡಿಲ್ಲ ಎಂಬುದು ಕೋರ್ಟ್‌  ಗಮನಕ್ಕೆ ಬಂದಿದೆ. ಪ್ರಚಾರ ಇಲ್ಲದಿದ್ದರೂ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ನಿರೀಕ್ಷಿತ ಮಟ್ಟದ ಫಲಿತಾಂಶ ನೀಡುತ್ತಿದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಕಾವೇರಿ 2.0 ತಂತ್ರಾಂಶದ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ತಂತ್ರಾಂಶವನ್ನು ಹೇಗೆ ಬಳಕೆ ಮಾಡಬೇಕೆಂಬ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಜು.19ಕ್ಕೆ ಮುಂದೂಡಿತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!