ವೈದ್ಯಕೀಯ ಪರಿಷತ್‌ಗೆ ಹೈಕೋರ್ಟ್‌ ನೋಟಿಸ್: ಕೊರೋನಾಗೆ ಚಿಕಿತ್ಸೆ ನೀಡದಿದ್ರೆ ವೈದ್ಯರ ವಿರುದ್ಧ ಕ್ರಮ

Kannadaprabha News   | Asianet News
Published : Jul 10, 2020, 10:53 AM IST
ವೈದ್ಯಕೀಯ ಪರಿಷತ್‌ಗೆ ಹೈಕೋರ್ಟ್‌ ನೋಟಿಸ್: ಕೊರೋನಾಗೆ ಚಿಕಿತ್ಸೆ ನೀಡದಿದ್ರೆ ವೈದ್ಯರ ವಿರುದ್ಧ ಕ್ರಮ

ಸಾರಾಂಶ

ಕೋವಿಡ್‌-19 ರಹಿತ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ವೈದ್ಯಕೀಯ ಪರಿಷತ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರು(ಜು.10): ಕೋವಿಡ್‌-19 ರಹಿತ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ವೈದ್ಯಕೀಯ ಪರಿಷತ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಈ ಕುರಿತು ವಕೀಲ ರಮೇಶ್‌ ನಾಯಕ್‌ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಆದೇಶ ಮಾಡಿತು.

ಭಾರತದ ನ್ಯೂಸ್‌ ಚಾನಲ್‌ಗಳಿಗೆ ನೇಪಾಳ ನಿಷೇಧ!

ಅಲ್ಲದೆ, ಕೋವಿಡ್‌-19 ರಹಿತ ರೋಗಿಗಳಿಗೆ ಚಿಕಿತ್ಸೆ ಅಥವಾ ವೈದ್ಯಕೀಯ ಸೇವೆಗಳನ್ನು ನಿರಾಕರಿಸುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತ ವಿವರಗಳನ್ನು ಸಲ್ಲಿಸಬೇಕು.

ಚಿಕಿತ್ಸೆಗಾಗಿ ಕೊರೋನಾ ಸೋಂಕಿತ ತಾಯಿ -ಮಗು ಅಲೆದಾಟ

ಈ ಕುರಿತು ದೂರುಗಳೇನಾದರೂ ಬಂದಿದ್ದರೆ, ಆ ಬಗ್ಗೆ ಕ್ರಮವೇನಾದರೂ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆಯೂ ಜು.17ರ ಒಳಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ವೈದ್ಯಕೀಯ ಪರಿಷತ್‌ಗೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!
ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!