
ಬೆಂಗಳೂರು (ಆ.24): ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರ, ನಗರ ಪೊಲೀಸ್ ಆಯುಕ್ತರು ಮತ್ತು ಸಿಸಿಬಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಗೂಂಡಾ ಕಾಯ್ದೆಯಡಿ ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ(Puneeth kerehalli) ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ(Habeas Corpus Petition) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಪುನೀತ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್(Arun shyam) ವಾದ ಮಂಡಿಸಿ, ಅರ್ಜಿದಾರರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅರ್ಜಿದಾರರು ‘ರಾಷ್ಟ್ರ ರಕ್ಷಣಾ ಪಡೆ’ ಸಂಘಟನೆ ಕಟ್ಟಿದೇಶಕ್ಕಾಗಿ ಹೋರಾಡುವ ಸಮಾನ ಮನಸ್ಕರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ದುರುದ್ದೇಶಪೂರ್ವಕವಾಗಿ ಹಲವು ಪ್ರಕರಣ ಹೂಡಿ ಮತ್ತು ರಾಜಕೀಯ ದ್ವೇಷದ ಕಾರಣಕ್ಕೆ ಅರ್ಜಿದಾರರನ್ನು ಆ.11ರಂದು ಗೂಂಡಾ ಕಾಯ್ದೆಯಡಿ ಅಕ್ರಮವಾಗಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ಯಾವುದೇ ವಿವೇಚನೆ ಬಳಸದೆ ಏಕಾಏಕಿ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಇದು ಏಕಪಕ್ಷೀಯ ನಡೆಯಾಗಿದ್ದು, ಆ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.
ಇದ್ರೀಶ್ ಪಾಷಾ ಸಾವು ಪ್ರಕರಣ: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಜಾಮೀನು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ