
ಬೆಂಗಳೂರು(ಜೂ.04): ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಔಷಧದ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಕೋವಿಡ್-19 ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದವು. ಚಿಕಿತ್ಸೆಗೆ ಬಳಸುವ ‘ಲೈಪೊಸೋಮಲ್ ಆ್ಯಂಪೊಟೆರಿಸಿನ್ ಬಿ’ ಚುಚ್ಚುಮದ್ದು ಕೊರತೆಯಾಗಿದೆ ಎಂದು ತಿಳಿಸಿ ವಕೀಲ ಪಿ.ರವೀಂದ್ರ ಎಂಬುವರು ಸಲ್ಲಿಸಿದ ಪತ್ರವನ್ನು ಉಲ್ಲೇಖಿಸಿದ ನ್ಯಾಯಪೀಠ, ಕೊರತೆ ಬಗ್ಗೆ ಸರ್ಕಾರಿ ವಕೀಲರಲ್ಲಿ ವಿವರಣೆ ಕೇಳಿತು.
ಬ್ಲ್ಯಾಕ್ ಫಂಗಸ್ ಔಷಧದ 10 ವಯಲ್ಸ್ ಕಳುವು, ಆಸ್ಪತ್ರೆ ಸಿಬ್ಬಂದಿ ಮೇಲೆಯೇ ಶಂಕೆ.?
ರಾಜ್ಯ ಸರ್ಕಾರಿ ವಕೀಲರು ಉತ್ತರಿಸಿ, ಚಿಕಿತ್ಸೆಗೆ ಬಳಸುವ ಔಷಧವನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳಬೇಕಿದೆ. ಔಷಧ ಲಭ್ಯವಾಗಿಸಲು ಪ್ರಯತ್ನ ನಡೆದಿದೆ ಎಂದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಔಷಧ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿತು.
ರಾಜ್ಯದಲ್ಲಿ ಹಲವು ಕಪ್ಪು ಶಿಲೀಂಧ್ರ ಪ್ರಕರಣಗಳಿವೆ.
ಅದನ್ನು ಪರಿಗಣಿಸಿದ ನ್ಯಾಯಪೀಠ, ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬಳಸುವ ಔಷಧ ಕೊರತೆಯಾಗದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಅದಕ್ಕಾಗಿ ಅಗತ್ಯ ಕ್ರಮ ಜರುಗಿಸಬೇಕು. ಜತೆಗೆ, ಔಷಧ ಹಂಚಿಕೆ ಕುರಿತು ಮಾಹಿತಿ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ