ಜನತಾ ಕರ್ಫ್ಯೂ: ಮನೆ ಬಾಗಿಲಿಗೆ ಪಡಿತರ ವಿತರಣೆ?

Published : May 06, 2021, 03:59 PM IST
ಜನತಾ ಕರ್ಫ್ಯೂ: ಮನೆ ಬಾಗಿಲಿಗೆ ಪಡಿತರ ವಿತರಣೆ?

ಸಾರಾಂಶ

 ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್‌ ಕುಟುಂಬಗಳಿಗೆ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರು (ಮೇ.06):  ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಬಿಪಿಎಲ್‌ ಕುಟುಂಬಗಳಿಗೆ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತು ವಕೀಲ ಎಲ್‌. ರಮೇಶ್‌ ನಾಯಕ್‌ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌. ಆರ್‌. ಕೃಷ್ಣಕುಮಾರ್‌ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು. ಅಲ್ಲದೇ ಈ ಅರ್ಜಿಯನ್ನು ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ವರ್ಗಾಯಿಸಿತು.

ಜನತಾ ಕರ್ಫ್ಯೂ ವಿಫಲ, ಪೂರ್ಣ ಲಾಕ್‌ಡೌನ್‌ಗೆ ಚಿಂತನೆ: ಡಾ.ಸುಧಾಕರ್

ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸಂದಣಿ ಸೇರುವುದನ್ನು ತಪ್ಪಿಸಲು ರಾಜ್ಯದ 1.47 ಕೋಟಿ ಬಿಪಿಎಲ್‌ ಕುಟುಂಬಗಳಿಗೆ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Dk Shivakumar: ಕನ್ನಡ ಕೇವಲ ಭಾಷೆಯಲ್ಲ, ನಮ್ಮ ಬದುಕಿನ ಅಸ್ಮಿತೆ; ಅಕ್ಕ ಸಮ್ಮೇಳನದಲ್ಲಿ ಡಿಕೆಶಿ ಭಾವಪೂರ್ಣ ಸಂದೇಶ!
ಕನ್ನಡದ ಕಂಪು ಹೊತ್ತ ಫಿಲಡೆಲ್ಫಿಯಾ ರಸ್ತೆ, ಅದ್ಧೂರಿಯಾಗಿ ಅಕ್ಕ ರಜತ ಮಹೋತ್ಸವಕ್ಕೆ ಚಾಲನೆ