ಎಸ್ಟಿ ಒಳಮೀಸಲು: ಆಕ್ಷೇಪಣೆಗೆ ಸರ್ಕಾರಕ್ಕೆ 2 ವಾರದ ಗಡುವು, ಹೈಕೋರ್ಟ್‌

Published : May 25, 2023, 01:00 AM IST
ಎಸ್ಟಿ ಒಳಮೀಸಲು: ಆಕ್ಷೇಪಣೆಗೆ ಸರ್ಕಾರಕ್ಕೆ 2 ವಾರದ ಗಡುವು, ಹೈಕೋರ್ಟ್‌

ಸಾರಾಂಶ

ಸರ್ಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂಬ ಕೋರಿಕೆ ಪುರಸ್ಕರಿಸಿದ ನ್ಯಾಯಪೀಠ, ಎರಡು ವಾರ ಕಾಲಾವಕಾಶ ನೀಡಿ ಅರ್ಜಿ ವಿಚಾರಣೆ ಮುಂದೂಡಿತು.

ಬೆಂಗಳೂರು(ಮೇ.25): ಪರಿಶಿಷ್ಟ ಜಾತಿಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ, ಒಳ ಮೀಸಲಾತಿ ಹಂಚಿಕೆ ಮಾಡಿ ಬಿಜೆಪಿ ಸರ್ಕಾರ ಮಾಡಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಎರಡು ವಾರ ಕಾಲಾವಕಾಶ ನೀಡಿದೆ. ಬೆಂಗಳೂರಿನ ಎಚ್‌.ರವಿ ಅವರು ಸಲ್ಲಿಸಿದ್ದ ಅರ್ಜಿ ಬುಧವಾರ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಸರ್ಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂಬ ಕೋರಿಕೆ ಪುರಸ್ಕರಿಸಿದ ನ್ಯಾಯಪೀಠ, ಎರಡು ವಾರ ಕಾಲಾವಕಾಶ ನೀಡಿ ಅರ್ಜಿ ವಿಚಾರಣೆ ಮುಂದೂಡಿತು. ಸಂಪುಟ ಉಪ ಸಮಿತಿಯ ಶಿಫಾರಸ್ಸು ಆಧರಿಸಿ 2023ರ ಮಾ.27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮೀಸಲಾತಿ ವರ್ಗೀಕರಿಸಿ ಆದೇಶ ಮಾಡಿದೆ. ಈ ವರ್ಗೀಕರಣವನ್ನು ರಾಜ್ಯಪಾಲರ ಒಪ್ಪಿಗೆಯ ಬಳಿಕ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ.

'ಖುಲಾಸೆಗೊಂಡಿದ್ದ' ರೇಪಿಸ್ಟ್‌ಗೆ ಬಿಸಿಮುಟ್ಟಿಸಿದ ಹೈಕೋರ್ಟ್‌: ಮಹತ್ವದ ಆದೇಶ!

ನಿಕಟಪೂರ್ವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರ ನೇತೃತ್ವದ ಸಂಪುಟ ಉಪ ಸಮಿತಿಯು 101 ಪರಿಶಿಷ್ಟಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.17 ಮೀಸಲಾತಿಯನ್ನು ನಾಲ್ಕು ವರ್ಗಗಳನ್ನಾಗಿ ಪ್ರತ್ಯೇಕಿಸಿ ಮೀಸಲಾತಿ ಹಂಚಿಕೆ ಮಾಡಿದೆ. ಯಾವುದೇ ತತ್ವ ಹಾಗೂ ಹಿಂದುಳಿದಿರುವಿಕೆ ಆಧಾರ ಇಲ್ಲದೆ ಮತ್ತು ಪೂರಕವಾದ ದತ್ತಾಂಶ ಸಂಗ್ರಹಿಸದೆ 101 ಪರಿಶಿಷ್ಟಜಾತಿಗಳನ್ನು ನಾಲ್ಕು ವರ್ಗಗಳಾಗಿ ವಿಂಗಡಿಸಲಾಗಿದೆ. ಇದು ಅತಾರ್ಕಿಕ, ಅವೈಜ್ಞಾನಿಕ ಮತ್ತು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್