ಹುದ್ದೆಯೇ ಇಲ್ಲದೆಡೆ 5 ಸಬ್‌ ರಿಜಿಸ್ಟ್ರಾರ್‌ಗಳ ಕೆಲಸ: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Published : Jun 27, 2023, 07:02 AM IST
ಹುದ್ದೆಯೇ ಇಲ್ಲದೆಡೆ 5 ಸಬ್‌ ರಿಜಿಸ್ಟ್ರಾರ್‌ಗಳ ಕೆಲಸ: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಸಾರಾಂಶ

ಹುದ್ದೆ ಇಲ್ಲದ ಸ್ಥಳಕ್ಕೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹಿರಿಯ ಸಬ್‌ ರಿಜಿಸ್ಟ್ರಾರ್‌ ಹುದ್ದೆಗಳನ್ನು ಕಿರಿಯ ಸಬ್‌ ರಿಜಿಸ್ಟ್ರಾರ್‌ಗಳು ಅಲಂಕರಿಸಿದ್ದಾರೆ. ಈ ವ್ಯವಸ್ಥೆ ಸರಿಪಡಿಸಲು ಅಗತ್ಯ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದ ಹೈಕೋರ್ಟ್‌. 

ಬೆಂಗಳೂರು(ಜೂ.27):  ಹುದ್ದೆಗಳೇ ಇಲ್ಲದ ಕಡೆ ಕೆಲವು ಸಬ್‌ ರಿಜಿಸ್ಟ್ರಾರ್‌ ಅಧಿಕಾರಿಗಳನ್ನು ನಿಯೋಜಿಸಿ, ಅವರು ವರ್ಷಾನುಗಟ್ಟಲೇ ವೇತನ ಪಡೆದಿರುವ ಪ್ರಕರಣ ಹಿನ್ನೆಲೆಯಲ್ಲಿ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳ ವ್ಯವಸ್ಥೆ ಸರಿಪಡಿಸಲು ಸಂಬಂಧಪಟ್ಟ ಸಚಿವರು ಹಾಗೂ ಕಂದಾಯ ಇಲಾಖೆ ಕಾರ್ಯದರ್ಶಿ ಜತೆ ಚರ್ಚಿಸಿ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಭರವಸೆ ನೀಡಿದೆ.

ಹುದ್ದೆಯಿಲ್ಲದ ಕಡೆ ಕೆಲಸ ಮಾಡಿ ವೇತನ ಪಡೆದ ಆರೋಪ ಸಂಬಂಧ ನಗರದ ಹಲವು ಸಬ್‌ ರಿಜಿಸ್ಟ್ರಾರ್‌ಗಳ ವಿರುದ್ಧ ಪ್ರಕರಣ ದಾಖಲಿಸಿರುವುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್‌ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಭರವಸೆ ನೀಡಿದೆ.

ವೃಷಣ ಹಿಸುಕಿ ಗಾಯಗೊಳಿಸಿದವಗೆ 3 ವರ್ಷ ಜೈಲು: ಹೈಕೋರ್ಟ್‌ ಆದೇಶ

ಪ್ರಕರಣ ಸಂಬಂಧ ರಾಜ್ಯ ಅಡ್ವೋಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಸದ್ಯ ಸರ್ಕಾರ ಬದಲಾಗಿದ್ದು, ಕಂದಾಯ ಇಲಾಖೆಗೆ ನೂತನ ಕಾರ್ಯದರ್ಶಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ವ್ಯವಸ್ಥೆಯನ್ನು ಬಾಧಿಸುತ್ತಿರುವ ಸಮಸ್ಯೆಗಳನ್ನು ತೊಡೆದು ಹಾಕಲು ಸೂಕ್ತ ಯೋಜನೆ ರೂಪಿಸಿ ನ್ಯಾಯಾಲಯದ ಮುಂದಿಡಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ನಿಷಿದ್ಧ: ಹೈಕೋರ್ಟ್‌ ಆದೇಶ

ಅಲ್ಲದೆ, ಪ್ರಕರಣ ಸಂಬಂಧ ಹೈಕೋರ್ಟ್‌ ಹೊರಡಿಸಿರುವ ಆದೇಶವನ್ನು ಸೂಕ್ತ ರೀತಿಯಲ್ಲಿ ಕಂದಾಯ ಇಲಾಖೆಯ ಕಾರ್ಯದರ್ಶಿ ಸ್ವೀಕರಿಸಿದ್ದಾರೆ. ಯೋಜನೆಯ ಜಾರಿಪಡಿಸುವ ಹಿನ್ನೆಲೆಯಲ್ಲಿ ಎಲ್ಲ ವಿಚಾರಗಳನ್ನು ಸಂಬಂಧಿಸಿದ ಸಚಿವರ ಮುಂದೆ ಇಟ್ಟು ಚರ್ಚಿಸಲಾಗುವುದು. ಸಬ್‌ ರಿಜಿಸ್ಟ್ರಾರ್‌ ಕಚೇರಿನಲ್ಲಿ ಅವ್ಯವಸ್ಥೆ ಸರಿಪಡಿಸಲು ಅನುಸರಿಸಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದು ನ್ಯಾಯಪೀಠಕ್ಕೆ ಅಡ್ವೋಕೇಟ್‌ ಜನರಲ್‌ ಅವರು ಭರವಸೆ ನೀಡಿದರು.
ಅಡ್ವೊಕೇಟ್‌ ಜನರಲ್‌ ಅವರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಹುದ್ದೆಯೇ ಇಲ್ಲದ ಕಡೆಯಲ್ಲಿ ಕೆಲಸ ಮಾಡಿ, ಸಂಬಳ ಪಡೆದ ಆರೋಪದ ಮೇಲೆ ಐವರ ಸಬ್‌ ರಿಜಿಸ್ಟ್ರಾರ್‌ಗಳ ವಿರುದ್ಧ ಕಂದಾಯ ಇಲಾಖೆ (ಮುದ್ರಾಂಕ ಮತ್ತು ನೋಂದಣಿ) ಪ್ರತ್ಯೇಕ ಪ್ರಕರಣ ದಾಖಲಿಸಿತ್ತು. ಇದರಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಅಧಿಕಾರಿಗಳು, ತಮಗೆ ವರ್ಗಾವಣೆ ಮಾಡಿದರೂ ಹುದ್ದೆ ತೋರಿಸಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಹಿರಿಯ ಸಬ್‌ ರಿಜಿಸ್ಟ್ರಾರ್‌ಗೆ ಮೀಸಲಾಗಿರುವ ಹುದ್ದೆಗಳಿಗೆ ಕಿರಿಯ ಸಬ್‌ ರಿಜಿಸ್ಟ್ರಾರ್‌ ನೇಮಕವಾಗಿದ್ದಾರೆ. ಹಿರಿಯ ಅಧಿಕಾರ ಸ್ಥಾನಕ್ಕೆ ಕಿರಿಯ ಅಧಿಕಾರಿ ನೇಮಕವಾದರೆ ಅವರು ಸಹಿ ಮಾಡುವ ದಾಖಲೆಗೆ ಮಾನ್ಯತೆ ಇರುವುದಿಲ್ಲ. ಒಂದೇ ಕಚೇರಿಯಲ್ಲಿ ಎರಡೆರಡು ಹುದ್ದೆ ಸೃಷ್ಟಿಸಲಾಗಿದೆ. ಇದಕ್ಕೆ ಅನುಮತಿ ಇಲ್ಲವಾಗಿದೆ ಎಂದು ಆಕ್ಷೇಪಿಸಿದ್ದರು.
ಅದನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್‌, ಹುದ್ದೆ ಇಲ್ಲದ ಸ್ಥಳಕ್ಕೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹಿರಿಯ ಸಬ್‌ ರಿಜಿಸ್ಟ್ರಾರ್‌ ಹುದ್ದೆಗಳನ್ನು ಕಿರಿಯ ಸಬ್‌ ರಿಜಿಸ್ಟ್ರಾರ್‌ಗಳು ಅಲಂಕರಿಸಿದ್ದಾರೆ. ಈ ವ್ಯವಸ್ಥೆ ಸರಿಪಡಿಸಲು ಅಗತ್ಯ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್