4 ವರ್ಷಗಳಿಂದ ಜಿಪಂ, ತಾಪಂ ಎಲೆಕ್ಷನ್‌ ನಡೆಸದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ..!

By Kannadaprabha News  |  First Published Aug 13, 2024, 7:04 AM IST

ನಾಲ್ಕು ವರ್ಷಗಳಿಂದ ಚುನಾವಣೆಯೇ ನಡೆದಿಲ್ಲವೇ ಎಂದು ಪ್ರಶ್ನಿಸಿ, ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73 ಮತ್ತು 74ನೇ ಪರಿಚ್ಛೇದಕ್ಕೆ ತಂದಿರುವ ತಿದ್ದುಪಡಿ ಯಿಂದ ಕರ್ನಾಟಕ ವಿನಾಯಿತಿ ಪಡೆದಿದೆಯೇ ಎಂದು ಸರ್ಕಾರಿ ವಕೀಲರನ್ನು ಕಟುವಾಗಿ ಪ್ರಶ್ನಿಸಿದ ಮುಖ್ಯ ನ್ಯಾಯಮೂರ್ತಿಗಳು


ಬೆಂಗಳೂರು(ಆ.13):  4 ವರ್ಷಗಳಿಂದ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ನಡೆಸದ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಹೈಕೋರ್ಟ್, ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73 ಮತ್ತು 74ನೇ ವಿಧಿಗೆ ತಂದಿರುವ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.

ಹೈಕೋರ್ಟ್‌ಗೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾ ಗಿರುವ ಸರ್ಕಾರದ ಕ್ರಮ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ, ಮತ್ತಿತರರು 3 ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

Tap to resize

Latest Videos

ಚಾಮುಂಡೇಶ್ವರಿ ಪ್ರಾಧಿಕಾರ ಕಾಯ್ದೆಯಿಂದ ರಾಜಮನೆತನ ಕಡೆಗಣನೆ: ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಣಿ ಪ್ರಮೋದಾ ದೇವಿ!

ಈ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹಿರ್, ಕಾನೂನಿನ ಪ್ರಕಾರ ಜಿ.ಪಂ. ಹಾಗೂ ತಾ.ಪಂ. ಅವಧಿ ಮುಗಿದ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕು. ಆದರೆ ಅವಧಿ ಮುಗಿದು ು ನಾಲ್ಕು ವರ್ಷ ಕಳೆದಿದ್ದರೂ ಚುನಾವಣೆ ನಡೆಸಿಲ್ಲ. ಅವುಗಳು ಸದ್ಯ ರಾಜ್ಯ ಸರ್ಕಾರದ ಆಡಳಿತಾಧಿಕಾರಿಗಳ ಅಧೀನದಲ್ಲಿವೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಅಚ್ಚರಿಗೊಂಡ ಮುಖ್ಯ ನ್ಯಾಯಮೂರ್ತಿಗಳು, ಅಂದರೆ ನಾಲ್ಕು ವರ್ಷಗಳಿಂದ ಚುನಾವಣೆಯೇ ನಡೆದಿಲ್ಲವೇ ಎಂದು ಪ್ರಶ್ನಿಸಿ, ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73 ಮತ್ತು 74ನೇ ಪರಿಚ್ಛೇದಕ್ಕೆ ತಂದಿರುವ ತಿದ್ದುಪಡಿ ಯಿಂದ ಕರ್ನಾಟಕ ವಿನಾಯಿತಿ ಪಡೆದಿದೆಯೇ ಎಂದು ಸರ್ಕಾರಿ ವಕೀಲರನ್ನು ಕಟುವಾಗಿ ಪ್ರಶ್ನಿಸಿದರು.

ರಾಜ್ಯ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಲೋಕಸಭೆ ಚುನಾವಣೆ ಹಾಗೂ ಇನ್ನಿತರ ಕಾರಣಗಳಿಗೆ ಚುನಾವಣೆ ವಿಳಂಬವಾಗಿದೆ. ರಾಜ್ಯದ ಎಲ್ಲಾ 31 ಜಿ.ಪಂ.ಗಳ ಕ್ಷೇತ್ರ ಪುನರ್ ವಿಂಗಡಣೆ ಕಾರ್ಯ ಈಗಾ
ಗಲೇ ಪೂರ್ಣಗೊಂಡಿದೆ. ಮೀಸಲು ನಿಗದಿಪಡಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅದನ್ನು ಪೂರ್ಣಗೊಳಿಸಲು ನಾಲ್ಕು ವಾರ ಕಾಲಾವಕಾಶ ಬೇಕಿದೆ ಎಂದರು.

ಈ ಮಧ್ಯೆ ನ್ಯಾಯಪೀಠ, ಕ್ಷೇತ್ರ ಮರು ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಕಾರ್ಯ ಚುನಾವಣಾ ಆಯೋಗದ್ದಲ್ಲವೇ ಎಂದು ಕೇಳಿತು.

ಸಹಕಾರ ಸಂಘ ಸಿಬ್ಬಂದಿ ಜುಟ್ಟು ಸರ್ಕಾರದ ಕೈಗಿಲ್ಲ: ಹೈಕೋರ್ಟ್

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಉತ್ತರಿಸಿ, ಈ ಮೊದಲು ಆ ಅಧಿಕಾರ ಆಯೋಗದ ಬಳಿಯೇ ಇತ್ತು. ಅದರಂತೆ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮುಗಿಸಿತ್ತು. ಆದರೆ, ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು ಪುನರ್ ವಿಂಗಡಣೆ ಹಾಗೂ ಮೀಸಲು ನಿಗದಿ ಅಧಿಕಾರವನ್ನು ಆಯೋಗದಿಂದ ಹಿಂಪಡೆದಿದೆ. ಇದರಿಂದ ಚುನಾವಣೆ ವಿಳಂಬವಾಗಿದೆ. ಸರ್ಕಾರದ ಈ ಕ್ರಮವನ್ನೂ ಆಯೋಗ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ. ಇನ್ನು 12 ವಾರಗಳಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲು ನಿಗದಿ ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರವೇ ಈ ಹಿಂದೆ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ವರ್ಷ ಉರುಳಿದ್ದರೂ ಸರ್ಕಾರ ತನ್ನ ಮಾತಿನಂತೆ ನಡೆದುಕೊಂಡಿಲ್ಲ. ಅದಕ್ಕಾಗಿಯೇನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ಅರ್ಜಿಗಳ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.

click me!