ಕೋರ್ಟ್ ಕಲಾಪದ ನೇರ ಪ್ರಸಾರದ ದೃಶ್ಯ ಬಳಕೆಗೆ ತಡೆ

By Kannadaprabha News  |  First Published Sep 26, 2024, 6:56 AM IST

ಕೋರ್ಟ್ ಕಲಾಪದ ದೃಶ್ಯಾವಳಿಗಳ ದುರ್ಬಳಕೆ ತಡೆಗೆ ಕ್ರಮ ಜರುಗಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ (ಎಎಬಿ) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರ ಪೀಠ ಈ ಆದೇಶ ಮಾಡಿತು.


ಬೆಂಗಳೂರು(ಸೆ.26): ನ್ಯಾಯಾಲಯದ ಕಲಾಪದ ನೇರಪ್ರಸಾರದ ದೃಶ್ಯಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. 

ಕೋರ್ಟ್ ಕಲಾಪದ ದೃಶ್ಯಾವಳಿಗಳ ದುರ್ಬಳಕೆ ತಡೆಗೆ ಕ್ರಮ ಜರುಗಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ (ಎಎಬಿ) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರ ಪೀಠ ಈ ಆದೇಶ ಮಾಡಿತು.

Tap to resize

Latest Videos

2 ಸೈಟ್‌ ಬದಲು ಸಿಎಂ ಪತ್ನಿಗೆ 14 ಸೈಟ್‌, ಇಂಥಾ ಕೇಸ್‌ ಬಿಟ್ಟು ಇನ್ನಾವ ಕೇಸ್‌ ತನಿಖೆ ಸಾಧ್ಯ: ಜಡ್ಜ್‌

ಪ್ರಸಾರದ ವಿಡಿಯೋ ಬಳಸಕೂಡದು. 2022ರ ಜ.1ರಂದು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಖಾಸಗಿ ಡಿಜಿಟಲ್ ಯಾವುದೇ ಖಾಸಗಿ ವೇದಿಕೆಗಳು ಹೈಕೋರ್ಟ್‌ನ ನೇರ ರಾಜ್ಯ ಹೈಕೋರ್ಟ್ ಜಾರಿಗೊಳಿಸಿರುವ 'ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರಪ್ರಸಾರ (ಲೈವ್ ಸ್ಟೀಮ್) ಮತ್ತು ರೆಕಾರ್ಡಿಂಗ್ ನಿಯಮಗಳು 2021 ರ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. 

ವೇದಿಕೆಗಳಾದ ಕಹಳೆ ನ್ಯೂಸ್, ಫ್ಯಾನ್ಸ್ ಟ್ರೋಲ್, ಪ್ರತಿಧ್ವನಿ, ಅವನಿಯಾನ ಮತ್ತು ರವೀಂದ್ರ ಜೋಶಿ ಕ್ರಿಯೇಷನ್ಸ್ ನಲ್ಲಿ ಬಳಕೆ ಮಾಡಲಾಗಿರುವ ಹೈಕೋರ್ಟ್ ಕಲಾಪದ ವಿಡಿಯೊಗಳನ್ನು ತಕ್ಷಣ ತೆಗೆದು ಹಾಕುವಂತೆ ಯೂಟ್ಯೂಬ್, ಫೇಸ್‌ಬುಕ್ ಹಾಗೂ ಎಕ್ಸ್ ಕಾರ್ಪ್ ಸಂಸ್ಥೆಗೆ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ. ಹಾಗೆಯೇ, ಪ್ರತಿವಾದಿಗಳಾದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್, ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಕಾರ್ಪ್, ಕಹಳೆ ನ್ಯೂಸ್, ಫ್ಯಾನ್ಸ್ ಟ್ರೋಲ್, ಪ್ರತಿಧ್ವನಿ, ಅವನಿಯಾನ ಮತ್ತು ರವೀಂದ್ರ ಜೋಶಿ ಕ್ರಿಯೇಷನ್ಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. 

click me!