ಜೀತ ಪದ್ಧತಿ ಕಾಯ್ದೆ ಜಾರಿ ಸಂಬಂಧ ಎನ್ನೆಚ್ಚಾರ್ಸಿಗೆ ಹೈಕೋರ್ಟ್‌ ನೋಟಿಸ್‌

By Kannadaprabha NewsFirst Published Dec 13, 2023, 1:00 AM IST
Highlights

‘ಜೀತ ವಿಮುಕ್ತಿ-ಕರ್ನಾಟಕ’ ಸಂಘಟನೆಯ ಸಂಯೋಜಕ ಡಾ। ಕಿರಣ ಕಮಲ ಪ್ರಸಾದ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ಬೆಂಗಳೂರು(ಡಿ.13):  ಜೀತ ಪದ್ಧತಿ (ನಿರ್ಮೂಲನೆ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ. ಈ ಕುರಿತಂತೆ ‘ಜೀತ ವಿಮುಕ್ತಿ-ಕರ್ನಾಟಕ’ ಸಂಘಟನೆಯ ಸಂಯೋಜಕ ಡಾ। ಕಿರಣ ಕಮಲ ಪ್ರಸಾದ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ಅರ್ಜಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ, ಅವುಗಳ ವಿವಿಧ ಪ್ರಾಧಿಕಾರಗಳು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು ಪ್ರತಿವಾದಿ ಮಾಡಲಾಗಿತ್ತು. ಅರ್ಜಿಯ ಹಿಂದಿನ ವಿಚಾರಣೆ ವೇಳೆ ಎಲ್ಲಾ ಪ್ರತಿವಾದಿಗಳಿಗೂ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿತ್ತು. ಆದರೆ, ಈವರೆಗೂ ಆಯೋಗಕ್ಕೆ ನೋಟಿಸ್ ತಲುಪಿಲ್ಲ. ಇದರಿಂದ ಸೋಮವಾರ ಮತ್ತೆ ಆಯೋಗಕ್ಕೆ ತುರ್ತು ನೋಟಿಸ್‌ ಜಾರಿಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

Latest Videos

ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆ್ಯಪ್ ಹ್ಯಾಕ್: ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ ಸೈಬರ್ ಕಳ್ಳರು

ದೇಶದಲ್ಲಿ ಜೀತ ಪದ್ಧತಿ ನಿರ್ಮೂಲನೆ ಮಾಡಲು ಕೇಂದ್ರ ಸರ್ಕಾರವು 1976ರಲ್ಲಿ ‘ಜೀತ ಪದ್ಧತಿ (ನಿರ್ಮೂಲನೆ) ಕಾಯ್ದೆೆ’ಯನ್ನು ಜಾರಿಗೆ ತಂದಿತ್ತು. ಆದರೆ, ಈ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ. ಅದ್ದರಿಂದ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಕೇಂದ್ರ-ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಜತೆಗೆ, ಜೀತ ಪದ್ದತಿಯಿಂದ ಬಿಡುಗಡೆ ಹೊಂದಿದವರಿಗೆ ಪರಿಹಾರ ಹಣದ ಮೊತ್ತ ಬಿಡುಗಡೆ ಮಾಡಬೇಕಾದರೆ, ಜೀತದಾಳುಗಳ ಬಿಡುಗಡೆ ಪತ್ರ ಹಾಗೂ ಪ್ರಕರಣದ ಸಂಕ್ಷಿಪ್ತ ವಿಚಾರಣೆ ನಡೆಸಿದ ದಾಖಲೆ ಒದಗಿಸಬೇಕು. ರಾಜ್ಯ ಸರ್ಕಾರವು ಜೀತದಾಳುಗಳ ಪುನರ್ವಸತಿ ಯೋಜನೆ ಸಲ್ಲಿಸಬೇಕು ಎಂಬುದಾಗಿ 2016ರಲ್ಲಿ ಕೇಂದ್ರ ಸರ್ಕಾರವು ಷರತ್ತು ವಿಧಿಸಿದೆ, ಈ ಷರತ್ತುಗಳಿಂದ ಜೀತದಾಳುಗಳ ಹಿರತಕ್ಷಣೆ ಮಾಡಲು ಕಷ್ಟಸಾಧ್ಯವಾಗಲಿದೆ. ಹಾಗಾಗಿ, ಈ ಷರತ್ತುಗಳನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

click me!