ಪಿಎಫ್‌ಐ ಕಾರ್ಯಕರ್ತನ ಹಣ ಬಿಡುಗಡೆಗೆ ಹೈಕೋರ್ಟ್‌ ನಕಾರ

By Kannadaprabha News  |  First Published Nov 5, 2024, 10:56 AM IST

ಪೊಲೀಸರು ಜಪ್ತಿ ಮಾಡಿರುವ ಹಣ ಹೂ-ಹಣ್ಣು ಮಾರಾಟ ಮಾಡಿದ ಹಣ ಎಂದು ಆರೋಪಿ ತಂದೆ, ಕೆಲ ಪ್ರಮಾಣ ಪತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆದರೆ, ಅದರಲ್ಲಿ ಹಣ ಸಂಪಾದಿಸಿರುವ ಸಮಯ ಹಾಗೂ ದಿನಾಂಕದ ವಿವರ ಒದಗಿಸಿಲ್ಲ. ಹೂ- ಹಣ್ಣು ಮಾರಾಟ ಮಾಡಿ ಇಷ್ಟು ಹಣ ಸಂಪಾದಿಸಿರುವುದನ್ನು ಸಾಬೀತುಪಡಿಸಲು ಸೂಕ್ತ ದಾಖಲೆಗಳನ್ನು ಅರ್ಜಿದಾರರು ಸಲ್ಲಿಸಿಲ್ಲ. 


ಬೆಂಗಳೂರು(ನ.05):  ಭಯೋತ್ಪಾದನೆ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ನಿಷೇಧಿತ ಪಿಎಫ್ ಐ ಸಂಘಟನೆ ಕಾರ್ಯಕರ್ತ ಎನ್ನಲಾದ ವ್ಯಕ್ತಿಯ ಮನೆಯಿಂದ ನಗರದ ಕೆ.ಜಿ.ಹಳ್ಳಿ ಠಾಣಾ ಪೊಲೀಸರು ವಶಪಡಿಸಿಕೊಂಡಿರುವ ಒಟ್ಟು ₹143 7600 ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಆರೋಪಿ ತಂದೆ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಅರ್ಜಿದಾರಗೆ ₹10 ಸಾವಿರ ದಂಡ ವಿಧಿಸಿದೆ. 

ಕೇಸ್‌ಲ್ಲಿ 3ನೇ ಆರೋಪಿಯಾಗಿರುವ ಶೇಕ್ ಇಜಾಜ್ ಅಲಿ ಅವರ ತಂದೆ ಕಲಬು ರಗಿಯ ಶೇಕ್ ಸಾದಿಕ್ ಅಲಿ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಸ್. ಮುದ ಗಲ್, ವಿಜಯಕುಮಾರ ಎ.ಪಾಟೀಲ ಅವರಿದ್ದ ಪೀಠ ಈ ಆದೇಶ ಮಾಡಿದೆ. 

Latest Videos

undefined

ವಿಚಾರಣೆ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಪೊಲೀಸರ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನಕುಮಾ‌ರ್, ಆರೋಪಿ ಶೇಕ್ ಇಜಾಜ್ ಅಲಿ ಭಯೋತ್ಪಾದನೆ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಉಗ್ರ ಚಟುವಟಿಕೆಗೆ ಬಳಸಲು ವಿವಿಧ ಮೂಲದಿಂದ 143760 ಹಣ ಸಂಗ್ರಹಿಸಿದ್ದಾನೆ. ಈ ಅಂಶ ಸಾಬೀತುಪಡಿಸಲು ತನಿಖಾಧಿಕಾರಿಗಳ ಬಳಿ ಸಾಕ್ಷ್ಯವಿದೆ. ಒಂದೊ ಮೈ ಆರೋಪಿಯ ತಂದೆಯ ಅರ್ಜಿ ಯನ್ನು ಹೈಕೋರ್ಟ್ ಪುರಸ್ಕರಿ ಸಿದರೆ, ಆರೋಪಿಯ ಕೃತ್ಯಕ್ಕೆ ಸಂಬಂಧಿಸಿದ ಸಾಕ್ಷ್ಯಧಾರ ಗಳನ್ನು ವಿಚಾರಣಾ ನ್ಯಾಯಾ ಲಯದ ಮುಂದೆ ಪ್ರಸ್ತುಪಡಿಸಲು ಅಡ್ಡಿ ಉಂಟು ಮಾಡಿದಂತಾಗುತ್ತದೆ ಎಂದು ವಾದಿಸಿದ್ದರು. 

ಹಾಗೆಯೇ, ವಿಚಾರಣಾ ನ್ಯಾಯಾಲಯ ಪ್ರಕರಣವನ್ನು ತೀರ್ಮಾನ ಮಾಡುವ ಮುನ್ನವೇ ಇಡೀ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿಲ್ಲ ಎಂಬುದನ್ನೂ ಹೈಕೋರ್ಟ್ ಈಗಲೇ ನಿರ್ಧರಿಸಿದಂತಾಗುತ್ತದೆ. ಪೊಲೀಸರು ಜಪ್ತಿ ಮಾಡಿರುವ ಹಣ ಹೂ-ಹಣ್ಣು ಮಾರಾಟ ಮಾಡಿದ ಹಣ ಎಂದು ಆರೋಪಿ ತಂದೆ, ಕೆಲ ಪ್ರಮಾಣ ಪತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆದರೆ, ಅದರಲ್ಲಿ ಹಣ ಸಂಪಾದಿಸಿರುವ ಸಮಯ ಹಾಗೂ ದಿನಾಂಕದ ವಿವರ ಒದಗಿಸಿಲ್ಲ. ಹೂ- ಹಣ್ಣು ಮಾರಾಟ ಮಾಡಿ ಇಷ್ಟು ಹಣ ಸಂಪಾದಿಸಿರುವುದನ್ನು ಸಾಬೀತುಪಡಿಸಲು ಸೂಕ್ತ ದಾಖಲೆಗಳನ್ನು ಅರ್ಜಿದಾರರು ಸಲ್ಲಿಸಿಲ್ಲ. ಆರೋಪಿ ಕೃತ್ಯವ ವಿಚಾರಣಾ ಸಾಬೀತುಪಡಿಸಲಿದ್ದು, ಅರ್ಜಿ ವಜಾಗೊ ಳಿಸಬೇಕು ಎಂದು ಕೋರಿದ್ದರು.

click me!