ಲೈಂಗಿಕ ಸಂಪರ್ಕಕ್ಕೆ ನಿರಾಸಕ್ತಿ ಎಂದು ಗಂಡನ ವಿರುದ್ಧ ಸುಳ್ಳು ಮಾಹಿತಿ: ಪತ್ನಿ ಮೇಲೆ ಕ್ರಮಕ್ಕೆ ಹೈಕೋರ್ಟ್‌ ಅಸ್ತು..!

By Kannadaprabha News  |  First Published Jul 2, 2024, 9:49 AM IST

ಪತ್ನಿ ತನ್ನ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸುವಂತೆ ಕೋರಿ ಅಮೆರಿಕದ ಪ್ರಸಿದ್ಧ ಕಂಪನಿಯೊಂದರಲ್ಲಿ ಎಂಜಿನಿಯರ್‌ ಆಗಿರುವ ಕಾರ್ಯ ನಿರ್ವಹಿಸುತ್ತಿರುವ ಪತಿ ಸಲ್ಲಿಸಿದ್ದ  ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. 
 


ಬೆಂಗಳೂರು(ಜು.02):  ಪತಿಯ ಜನನಾಂಗಕ್ಕೆ ಗುಪ್ತರೋಗವಿದ್ದು, ಲೈಂಗಿಕ ಸಂಪರ್ಕ ಹೊಂದಲು ನಿರಾಸಕ್ತಿ ವಹಿಸುತ್ತಿದ್ದಾರೆ, ವರದಕ್ಷಿಣೆ ಕಿರುಕುಳ ಸಹ ನೀಡಿ ಮಾನಸಿಕ ಆಘಾತ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಗಂಡನ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. 

ಸುಳ್ಳು ಮಾಹಿತಿ ನೀಡಿದ ಪತ್ನಿ ವಿರುದ್ಧ ನ್ಯಾಯಪಡೆಯಲು ಪತಿ ಅರ್ಹರಿದ್ದಾರೆ. ಪತಿ ಬಯಸಿದಲ್ಲಿ ಪತ್ನಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬಹುದು ಎಂದು ನ್ಯಾಯಪೀಠ ತಿಳಿಸಿದೆ. ಪತ್ನಿ ತನ್ನ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸುವಂತೆ ಕೋರಿ ಅಮೆರಿಕದ ಪ್ರಸಿದ್ಧ ಕಂಪನಿಯೊಂದರಲ್ಲಿ ಎಂಜಿನಿಯರ್‌ ಆಗಿರುವ ಕಾರ್ಯ ನಿರ್ವಹಿಸುತ್ತಿರುವ ಪತಿ ಸಲ್ಲಿಸಿದ್ದ  ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. 

Latest Videos

undefined

ಹೆಸರು ತಿರುಚಿ ವೈದ್ಯಕೀಯ ವೀಸಾದಿಂದ ಭಾರತದಲ್ಲಿ ನೆಲೆಸುವ ಇರಾಕ್‌ ಪ್ರಜೆಯ ಯತ್ನಕ್ಕೆ ಕರ್ನಾಟಕ ಕೋರ್ಟ್‌ ಕೊಕ್ಕೆ!

ಕ್ಷುಲ್ಲಕ, ಕೌಟುಂಬಿಕ ಕಾರಣಗಳಿಗೆ ರೋಗದ ಲೇಪನ ಹಚ್ಚಿ ದೂರು ದಾಖಲಿ ಸುವ ಮೂಲಕ ಅರ್ಜಿದಾರರ ಪತ್ನಿ ನ್ಯಾಯಾ ಲಯದ ಅಮೂಲ್ಯ ಸಮಯ ಹಾಳು ಮಾಡಿದ್ದಾರೆ. ಕಾನೂನಿನ ದುರ್ಬಳಕೆ ಮಾಡಿ ಕೊಂಡು ಪತಿಯನ್ನು ಪೊಲೀಸ್ ಠಾಣೆ, ಕೋರ್ಟ್‌ಗೆ ಅಲೆಯುವಂತೆ ಮಾಡಿದ್ದಾರೆ. ಇದರಲ್ಲಿ ಪತಿಯ ದೋಷ, ಕೌಟುಂಬಿಕ ಕ್ರೌರ್ಯ ಆರೋಪಗಳು ನಿರಾಧಾರ ಎಂಬುದು ಸ್ಪಷ್ಟವಾಗಿದೆ. ಸುಳ್ಳು ಮಾಹಿತಿ ನೀಡಿದ ಪತ್ನಿ ವಿರುದ್ಧ ಐಪಿಸಿ ಸೆಕ್ಷನ್ 211ರ ಅಡಿಯಲ್ಲಿ ಕ್ರಿಮಿನಲ್ ದೂರು ದಾಖಲಿಸಿ ತಮ ಗಾದ ಅನ್ಯಾಯದ ವಿರುದ್ಧ ನ್ಯಾಯಪಡೆಯಲು ಪತಿ ಅರ್ಹರಿದ್ದಾರೆ. ರೆ ಎಂದು ನ್ಯಾಯಪೀಠ ಆದೇಶಿಸಿದೆ.

ವರದಕ್ಷಿಣೆ ಕಿರುಕುಳ

ಅರ್ಜಿದಾರ ಪತಿ ಮತ್ತವರ ಪತ್ನಿ 2020ರಲ್ಲಿ ಸ್ವಜಾತಿ ವಧುವರರ ಮಾಹಿತಿ ಜಾಲತಾಣದ ಮುಖೇನ ಪರಿಚಯವಾಗಿ ಮದುವೆಯಾಗಿದ್ದ ರು. ನಂತರ ಪತಿ ವಿರುದ್ದ ಪತ್ನಿ ಪೊಲೀಸರಿಗೆ ದೂರು ದಾಖಲಿಸಿದ್ದರು. ಮೊದಲ ರಾತ್ರಿಯೇ ಪತಿ ದೈಹಿಕ ಸಂಪರ್ಕದಿಂದ ದೂರವಿದ್ದರು. ಪತಿ ಮದುವೆಯಾದ 40ನೇ ದಿನಕ್ಕೆ ಅಮೆರಿಕಕ್ಕೆ ತೆರಳಿ ದ್ದರು. ಈ 40 ದಿನಗಳಲ್ಲಿ ನನ್ನೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಪತಿ ನಿರಾಕರಿಸಿದ್ದಾರೆ. ಅವರ ಜನನಾಂಗಕ್ಕೆ ಗುಪ್ತರೋಗವಿದೆ, ನನಗೆ ವರದಕ್ಷಿಣೆ ಕಿರುಕುಳ ನೀಡಿ ಮಾನಸಿಕ ಆಘಾತ ಮಾಡಿದ್ದಾರೆಂದು ದೂರಿನಲ್ಲಿ ಆರೋಪಿಸಿದರು.

click me!