ಜಾರಕಿಹೊಳಿ ವಿರುದ್ಧ ಮತ್ತೊಂದು ಕೇಸ್‌ : ಹೊಸದಾಗಿ ವಿಚಾರಣೆಗೆ ಹೈಕೋರ್ಟ್ ಸೂಚನೆ

Kannadaprabha News   | Asianet News
Published : Aug 11, 2021, 07:41 AM IST
ಜಾರಕಿಹೊಳಿ ವಿರುದ್ಧ ಮತ್ತೊಂದು ಕೇಸ್‌ :  ಹೊಸದಾಗಿ ವಿಚಾರಣೆಗೆ  ಹೈಕೋರ್ಟ್ ಸೂಚನೆ

ಸಾರಾಂಶ

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಹೊಸದಾಗಿ ವಿಚಾರಣೆ ನಡೆಸುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ಗೆ ಹೈಕೋರ್ಟ್‌ ಆದೇಶ

ಬೆಂಗಳೂರು (ಆ.11):  ಸಹಕಾರಿ ಬ್ಯಾಂಕಿನಿಂದ ಪಡೆದ ಸಾಲಕ್ಕೆ ಭದ್ರತೆಯಾಗಿ ನೀಡಿದ್ದ 5.02 ಕೋಟಿ ರು. ಮೊತ್ತದ ಚೆಕ್‌ ಬೌನ್ಸ್‌ ಆಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಪ್ರಕರಣ ಸಂಬಂಧ ಬೀರೇಶ್ವರ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರ ಏಕ ಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದ ಜಾರಕಿಹೊಳಿ-ಯೋಗೇಶ್ವರ್

ಏನಿದು ಪ್ರಕರಣ?:  ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಬೀರೇಶ್ವರ ಕ್ರಿಡಿಟ್‌ ಕೋ ಆಪರೇಟಿವ್‌ ಸೊಸೈಟಿಯಿಂದ ಸಾಲಪಡೆದಿದ್ದು, ಅದಕ್ಕೆ ಭದ್ರತೆಯಾಗಿ ನೀಡಿದ್ದ 5.02 ಕೋಟಿ ರು. ಮೊತ್ತದ ಚೆಕ್‌ ಬೌನ್ಸ್‌ ಆಗಿತ್ತು .ಇದರಿಂದ 2016ರ ಜ.28ರಂದು ರಮೇಶ್‌ ಜಾರಕಿಹೊಳಿ ವಿರುದ್ಧ ಸೊಸೈಟಿಯು ಖಾಸಗಿ ದೂರು ದಾಖಲಿಸಿತ್ತು. ದೂರು 2019ರ ನ.20ರಂದು ಚಿಕ್ಕೋಡಿಯ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ ಮುಂದೆ ವಿಚಾರಣೆಗೆ ಬಂದಿತ್ತು.

ಅಂದು ದೂರುದಾರರ ಪರ ವಕೀಲರು ಗೈರಾಗಿದ್ದರು. ಅದನ್ನು ಪರಿಗಣಿಸಿದ್ದ ಜೆಎಂಎಸ್‌ಫಿಸಿ ಕೋರ್ಟ್‌, ದೂರುದಾರರ ಪರ ವಕೀಲರು ವಿಚಾರಣೆಗೆ ಸರಿಯಾಗಿ ಹಾಜರಾಗುತ್ತಿಲ್ಲ. ನೋಟಿಸ್‌ ನೀಡಿದ ಹೊರತಾಗಿಯೂ ದೂರುದಾರರು ಕೋರ್ಟ್‌ ಶುಲ್ಕ ಪಾವತಿಸಿಲ್ಲ. ಇದರಿಂದ ದೂರನ್ನು ಮುಂದುವರಿಸಲು ದೂರುದಾರರಿಗೆ ಆಸಕ್ತಿ ಇಲ್ಲ ಎಂಬುದು ತಿಳಿಯುತ್ತದೆ ಎಂದು ಅಭಿಪ್ರಾಯಪಟ್ಟು ದೂರನ್ನು ವಜಾಗೊಳಿಸಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸೊಸೈಟಿ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿತ್ತು.

ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ಕಾನೂನಿಗೆ ಅನುಗುಣವಾಗಿಲ್ಲ ಎಂದು ಅಭಿಪ್ರಾಯಪಟ್ಟು ಸೊಸೈಟಿಯ ಖಾಸಗಿ ದೂರು ವಜಾಗೊಳಿಸಿದ ಜೆಎಂಎಫ್‌ಸಿ ಕೋರ್ಟ್‌ ಆದೇಶವನ್ನು ರದ್ದುಪಡಿಸಿತು. ಜತೆಗೆ, ದೂರನ್ನು ಹೊಸದಾಗಿ ವಿಚಾರಣೆ ನಡೆಸಿ ಕಾನೂನಿನ ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಜೆಂಎಂಎಫ್‌ಸಿ ಕೋರ್ಟ್‌ಗೆ ನಿರ್ದೇಶಿಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ