ಕಲ್ಯಾಣ ಕರ್ನಾಟಕ ಶಿಕ್ಷಕರ ನೇಮಕಾತಿ: ಹಳೆ ಪಟ್ಟಿ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

Sathish Kumar KH   | Kannada Prabha
Published : Sep 21, 2026, 05:30 AM IST
Karnataka Teacher Recruitment

ಸಾರಾಂಶ

ಕಲ್ಯಾಣ ಕರ್ನಾಟಕ ಭಾಗದ 6 ರಿಂದ 8ನೇ ತರಗತಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗೊಂದಲಕ್ಕೆ ಕಾರಣವಾಗಿದ್ದ ಹಳೆಯ ಆಯ್ಕೆ ಪಟ್ಟಿಗಳನ್ನು ರದ್ದುಗೊಳಿಸಿರುವ ನ್ಯಾಯಾಲಯ, ಮೂರು ತಿಂಗಳೊಳಗೆ ಹೊಸದಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆದೇಶಿಸಿದೆ.

ಬೆಂಗಳೂರು/ಕಲಬುರಗಿ (ಸೆ.21): ಕಲ್ಯಾಣ ಕರ್ನಾಟಕ ಭಾಗದ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ಹೈಕೋರ್ಟ್‍ನ ಕಲಬುರಗಿ ಪೀಠವು ಮಹತ್ವದ ತೀರ್ಪು ನೀಡಿದೆ.

ಕಲ್ಯಾಣ ಕರ್ನಾಟಕ ಮತ್ತು ಉಳಿದ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿನ ಗೊಂದಲಗಳಿಗೆ ಕಾರಣವಾಗಿದ್ದ ಹಳೇ ತಾತ್ಕಾಲಿಕ ಹಾಗೂ ಅಂತಿಮ ಆಯ್ಕೆ ಪಟ್ಟಿಗಳನ್ನು ನ್ಯಾಯಾಲಯವು ಸಂಪೂರ್ಣವಾಗಿ ರದ್ದುಗೊಳಿಸಿದೆ. ಅಲ್ಲದೆ, ನಿಯಮಾನುಸಾರ ಎಲ್ಲ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ, ಮೂರು ತಿಂಗಳೊಳಗೆ ಹೊಸದಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಏನಿದು ವಿವಾದ?: 

ರಾಜ್ಯ ಸರ್ಕಾರವು 15,000 ಜಿಪಿಎಸ್‌ಟಿಆರ್ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ, ಸಂವಿಧಾನದ 371(ಎ) ವಿಧಿಯ ಅನ್ವಯ ಕಲ್ಯಾಣ ಕರ್ನಾಟಕ ಮತ್ತು ಉಳಿದ ಕರ್ನಾಟಕ ವೃಂದದ ಹುದ್ದೆಗಳ ಹಂಚಿಕೆ ಮತ್ತು ಮೀಸಲಾತಿ ನಿಗದಿಯಲ್ಲಿ ಗೊಂದಲ ಉಂಟಾಗಿತ್ತು. 2023ರ ಫೆ 01ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿದ್ದ ಸುತ್ತೋಲೆಯು ಈ ಗೊಂದಲ ಮತ್ತಷ್ಟು ಹೆಚ್ಚಿಸಿತ್ತು. ಈ ನಿಯಮಗಳ ಅನ್ವಯ ಬಿಡುಗಡೆಯಾಗಿದ್ದ ಆಯ್ಕೆ ಪಟ್ಟಿ ಪ್ರಶ್ನಿಸಿ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.

ಆಯ್ಕೆಪಟ್ಟಿಗಳ ರದ್ದು:

2023ರ ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ಬಿಡುಗಡೆಯಾಗಿದ್ದ ಎಲ್ಲ ತಾತ್ಕಾಲಿಕ ಮತ್ತು ಅಂತಿಮ ಆಯ್ಕೆ ಪಟ್ಟಿಗಳನ್ನು ಅಧಿಕೃತವಾಗಿ ವಜಾಗೊಳಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಸಿದ್ದ 2024 ಜ.31ರ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಆದೇಶ ಹಾಗೂ ಡಿಪಿಎಆರ್ ಸುತ್ತೋಲೆಯನ್ನು ನ್ಯಾಯಾಲಯ ರದ್ದುಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎಂಎಲ್‌ಸಿ ಸೂರಜ್ ರೇವಣ್ಣ ಪ್ರಕರಣ: ಸಾಕ್ಷ್ಯಗಳ ಕೊರತೆ ಹಿನ್ನೆಲೆ ಎರಡನೇ ಬಾರಿಗೆ 'ಬಿ ರಿಪೋರ್ಟ್' ಸಲ್ಲಿಸಿದ ಸಿಐಡಿ
ಮಂಗಳೂರು ರೈಲ್ವೆಯನ್ನ ರಾಜ್ಯಕ್ಕೆ ತಂದ್ರೂ ಥ್ಯಾಂಕ್ಸ್‌ ಹೇಳಲಿಲ್ಲ; ಕರಾವಳಿ ಸಂಪುಟ ಸಭೆ ಬೂಟಾಟಿಕೆ-ವಿ.ಸೋಮಣ್ಣ