ವಾಹನ ಸವಾರರೇ ಗಮನಿಸಿ: HSRP ನಂಬರ್ ಪ್ಲೇಟ್ ಗಡುವು ವಿಸ್ತರಣೆ!

By Sathish Kumar KH  |  First Published Sep 18, 2024, 1:23 PM IST

ಹೈಕೋರ್ಟ್‌ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ನವೆಂಬರ್ 20 ರವರೆಗೆ ವಿಸ್ತರಿಸಿದೆ. ಸೆಪ್ಟೆಂಬರ್ 14 ರಂದು ಮುಕ್ತಾಯಗೊಳ್ಳಬೇಕಿದ್ದ ಗಡುವನ್ನು ವಕೀಲರ ಮನವಿಯ ಮೇರೆಗೆ ವಿಸ್ತರಣೆ ಮಾಡಲಾಗಿದೆ.


ಬೆಂಗಳೂರು (ಸೆ.18): ನಿಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇನ್ನೂ ಅಳವಡಿಕೆ ಮಾಡಿಲ್ಲವೇ ಹಾಗಾದರೆ ನಿಮಗಿದೋ ಗುಡ್ ನ್ಯೂಸ್. ಹೈಕೋರ್ಟ್‌ನಿಂದ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವುನ್ನು ನ.20ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲ ಮೋಟಾರು ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (High Security Registration Plate- HSRP)  ಅಳವಡಿಕೆ ಮಾಡಿಸಿಕೊಳ್ಳಲು ನಾಲ್ಕು ಬಾರಿ ಗಡುವು ನೀಡಿತ್ತು. ಕೊನೆಯ ಬಾರಿ ಸೆ.14ರಂದು ಈ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿ ಗಡುವು ನೀಡಿತ್ತು. ಆದರೆ, ಈ ಬಗ್ಗೆ ಸೆ.18ರಂದು ವಿಚಾರಣೆ ಇದ್ದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಯಾವುದೇ ದಂಡವನ್ನು ವಿಧಿಸಿರಲಿಲ್ಲ. ಇಂದು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ ವಕೀಲರ ಮನವಿ ಮೇರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿಯನ್ನು 2024ರ ನವೆಂಬರ್ 20ರ ವರೆಗೆ ಅವಧಿ ವಿಸ್ತಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಈವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಆತಂಕದಲ್ಲಿದ್ದ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ.

Tap to resize

Latest Videos

undefined

ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿದ ವಕೀಲರು:
ರಾಜ್ಯದಲ್ಲಿ ಇನ್ನೂ ಅರ್ಧದಷ್ಟು ವಾಹನ ಸವಾರರು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೆಟ್ ಅಳವಡಿಕೆ ಮಾಡಿಸಿಕೊಳ್ಳುವುದು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ನೀಡಬೇಕೆಂದು ಹಿರಿಯ ವಕೀಲ ದೇವದತ್ ಕಾಮತ್ ಅವರು ವಾಹನ ಮಾಲೀಕರ ಪರವಾಗಿ ನ್ಯಾಯಾಲಯದ ಮುಂದೆ ಮನವಿ ಮಾಡಿದ್ದಾರೆ. ಈ ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ನ.20ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದ್ದರಿಂದ, HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕವೂ ವಿಸ್ತರಣೆಗೊಂಡಿದೆ.

HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?
https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು.
ಇಲ್ಲಿ Book HSRP ಕ್ಲಿಕ್ ಮಾಡಿ.
ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿ.
ನಿಮ್ಮ ವಾಹನದ ವಿವರವನ್ನು ಅಲ್ಲಿ ನಮೂದಿಸಿ.
ನಿಮ್ಮ ಹತ್ತಿರದ ಅಥವಾ ನಿಮ್ಮ  ಡೀಲರ್ ಶೋ ರೂಂ ಆಯ್ಕೆ ಮಾಡಿ
HSRP ನಂಬರ್ ಪ್ಲೇಟ್‌ಗೆ ಅಲ್ಲಿ ನಮೂದಿಸಿದ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡಿ
ಮೊಬೈಲ್ ನಂಬರ್‌ಗೆ ಬರುವ ಒಟಿಪಿಯನ್ನು ನಮೂದಿಸಿ
HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ಪಡೆದುಕೊಳ್ಳಿ.

click me!