
ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು
ಮಂಗಳೂರು (ಡಿ.17): ವಿವಾಹ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚನೆ ಸಂಬಂಧ ದಾಖಲಾದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ನ್ಯಾ. ನಾಗಪ್ರಸನ್ನ ಅವರ ಪೀಠ ಈ ತೀರ್ಪು ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಆಲಂತಾಯ ಗ್ರಾಮದ ಶಿವಪ್ರಸಾದ್ ಅವರು ತಮ್ಮ ಮದುವೆಯ ಆಹ್ವಾನ ಪತ್ರಿಕೆಯಲ್ಲಿ, "ನಿಮ್ಮ ಉಡುಗೊರೆಯಾಗಿ ಮೋದಿಗೆ ಮತ ನೀಡಿ" ಎಂಬ ಸಂದೇಶವನ್ನು ಮುದ್ರಿಸಿದ್ದರು. 2024ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಸುಳ್ಯ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಕೆ.ಎನ್. ಸಂದೇಶ್ ಅವರು ದೂರು ದಾಖಲಿಸಿದ್ದರು.
ಪ್ರಜಾಪ್ರತಿನಿಧಿ ಕಾಯಿದೆ 127ಎ ಪ್ರಕಾರ, ಈ ವಿಚಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ ಶಿವಪ್ರಸಾದ್ ಪರ ವಕೀಲರಾದ ಎಂ. ವಿನೋದ್ ಕುಮಾರ್, ಈ ಆಹ್ವಾನ ಪತ್ರಿಕೆ 2024ರ ಚುನಾವಣೆ ಘೋಷಣೆಯಾಗುವು ದಕ್ಕೂ ಮುಂಚೆ ಅಂದರೆ ಮಾರ್ಚ್ 1ರಂದು ಮುದ್ರಣಗೊಂಡಿರುವುದರಿಂದ ಇದು ಯಾವ ನಿಯಮವನ್ನು ಉಲ್ಲಂಘಿಸುತ್ತಿಲ್ಲ ಎಂದು ವಾದಿಸಿದ್ದರು.
ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 127ಎ ಚುನಾವಣಾ ಸಮಯದಲ್ಲಿ ಮಾಡಲಾದ ಪ್ರಚಾರಕ್ಕೆ ಅನ್ವಯವಾಗುತ್ತದೆ. ಆದರೆ ಚುನಾವಣೆಗೆ ಮುಂಚೆ ಇದನ್ನು ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಿದ್ದರು.
ಜೈ ಶ್ರೀರಾಮ್ ಅಂದ್ರೆ ಅಪರಾಧ ಹೇಗಾದೀತು?: ಸುಪ್ರೀಂ ಪ್ರಶ್ನೆ
ಈ ವಾದವನ್ನು ಸ್ವೀಕರಿಸಿದ ಹೈಕೋರ್ಟ್, 'ಚುನಾವಣೆ ಘೋಷಣೆಯ ಮುಂಚಿನ ಸಮಯದಲ್ಲಿ ಇಂತಹ ಸಂದೇಶ ಮುದ್ರಿಸುವುದು ಅಪರಾಧವಲ್ಲ' ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಪುತ್ತೂರು ನ್ಯಾಯಾಲಯದಲ್ಲಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ