ತಿಮರೋಡಿ ವಿರುದ್ಧ ಗಡೀಪಾರು ಆದೇಶ ಹೈಕೋರ್ಟ್‌ಲ್ಲಿ ವಜಾ

Kannadaprabha News   | Kannada Prabha
Published : Nov 18, 2025, 06:20 AM IST
Mahesh Shetty Thimarody

ಸಾರಾಂಶ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಬೆಂಗಳೂರು : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿರುವ ನ್ಯಾಯಾಲಯ, ಮುಂದಿನ 15 ದಿನಗಳಲ್ಲಿ ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಬೇಕು. ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿದೆ.

ಹೈಕೋರ್ಟ್‌ಗೆ ತಕರಾರು ಅರ್ಜಿ

ತಮ್ಮನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಮಾಡಿ 2025ರ ಸೆ.18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್‌ ಹೊರಡಿಸಿದ್ದ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಸೋಮವಾರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದ ರಾಜ್‌ ಅವರ ಪೀಠದ ಈ ಆದೇಶ ಮಾಡಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಪ್ರಕ್ರಿಯೆ ಪಾಲಿಸಬೇಕಾಗುತ್ತದೆ

ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ತಾರಾನಾಥ್‌ ಪೂಜಾರಿ, ಯಾವುದೇ ವ್ಯಕ್ತಿ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ವೇಳೆ ಕರ್ನಾಟಕ ಪೊಲೀಸ್‌ ಕಾಯ್ದೆ ನಿಗದಿಪಡಿಸಿರುವ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ಗಡಿಪಾರು ಮಾಡಲು ಉದ್ದೇಶಿಸಿರುವ ವ್ಯಕ್ತಿ ಮೇಲಿನ ಆರೋಪಗಳು, ಅವರ ನಡವಳಿಕೆಗಳ ಕುರಿತು ಸಂಪೂರ್ಣ ವಿವರ, ಮಾಹಿತಿ ನೀಡಬೇಕು. ನಂತರ ಅವರ ವಾದ/ಅಹವಾಲು ಆಲಿಸಿ ಆದೇಶ ಹೊರಡಿಸಬೇಕು. ಪ್ರಕರಣದಲ್ಲಿ ಗಡಿಪಾರು ಆದೇಶ ಹೊರಡಿಸುವ ಮುನ್ನ ತಮ್ಮ ವಿವರಣೆ ನೀಡಲು ಅರ್ಜಿದಾರರಿಗೆ ಉಪ ವಿಭಾಗಾಧಿಕಾರಿಗಳು ಸೂಕ್ತ ಅವಕಾಶ ಕಲ್ಪಿಸಿಲ್ಲ. ಆದ್ದರಿಂದ ಗಡಿಪಾರು ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

ಸರ್ಕಾರಿ ವಕೀಲರು, ಉಪ ವಿಭಾಗಾಧಿಕಾರಿಯ ಆದೇಶವನ್ನು ಸಮರ್ಥಿಸಿಕೊಂಡಿದ್ದರು.

ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಮುನ್ನ ಅವರಿಗೆ ವಿವರಣೆ ಹಾಗೂ ಮನವಿ ಸಲ್ಲಿಸಲು ಸೂಕ್ತ ಅವಕಾಶ ನೀಡದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇದರಿಂದ ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ. ಪ್ರಕರಣದ ಕುರಿತು ಹೊಸದಾಗಿ ವಿಚಾರಣೆ ನಡೆಸಿ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!