
ಬೆಂಗಳೂರು(ಡಿ.23): ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್‌ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ನಡೆದಿರುವ ಲೋಕಾಯುಕ್ತ ಕೋರ್ಟ್ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ತಮ್ಮ ವಿರುದ್ಧದ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ಈ ಸಂಬಂಧ ನಡೆದಿರುವ ಲೋಕಾಯುಕ್ತ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು 2019ರಲ್ಲಿ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.
ಬಿಎಸ್‌ವೈ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ ಸ್ವಾಮೀಜಿ
ಈ ಅರ್ಜಿಯನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಮಂಗಳವಾರ ವಜಾಗೊಳಿಸಿ, ತನಿಖೆ ಮುಂದುವರೆಸುವ ನಿರ್ದೇಶನವಿದ್ದರೂ ಈ ದಿಸೆಯಲ್ಲಿ ಕಾರ್ಯನಿರ್ವಹಿಸದ ಲೋಕಾಯುಕ್ತ ಪೊಲೀಸರ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ