PSI Recruitment Scam: ದಿವ್ಯಾ ಹಾಗರಗಿ, ಡಿವೈಎಸ್ಪಿಗೆ ಜಾಮೀನಿಲ್ಲ

By Kannadaprabha NewsFirst Published Dec 8, 2022, 12:01 AM IST
Highlights

ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ದಿವ್ಯಾ ಮತ್ತು ವೈಜನಾಥ್‌ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಏಕಸದಸ್ಯ ಪೀಠ 

ಬೆಂಗಳೂರು(ಡಿ.08): ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಾಗಿರುವ ಬಿಜೆಪಿಯ ನಾಯಕಿ ಹಾಗೂ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಮತ್ತು ರಾಜ್ಯ ಮೀಸಲು ಪೊಲೀಸ್‌ ಪಡೆಯ (ಕೆಎಸ್‌ಆರ್‌ಪಿ) ಸಹಾಯಕ ಕಮಾಡೆಂಟ್‌ (ಡಿವೈಎಸ್ಪಿ) ವೈಜನಾಥ್‌ ಕಲ್ಯಾಣಿ ರೇವೂರ ಅವರಿಗೆ ಜಾಮೀನು ನೀಡಲು ಹೈಕೋರ್ಟ್‌ ಕಲಬುರಗಿ ಪೀಠ ನಿರಾಕರಿಸಿದೆ. 

ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ದಿವ್ಯಾ ಮತ್ತು ವೈಜನಾಥ್‌ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ಜಿ. ಉಮಾ ಏಕಸದಸ್ಯ ಪೀಠ ಇತ್ತೀಚೆಗೆ ಆದೇಶಿಸಿದೆ.

PSI Recruitment Scam: 12 ಜನ ಆರೋಪಿಗಳಿಗೆ ಜಾಮೀನು ಮಂಜೂರು‌

ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಅಕ್ರಮ ಎಸಗಲು ನೆರವಾದ ಆರೋಪದ ಮೇಲೆ ದಿವ್ಯಾ ಹಾಗರಗಿ ಅವರನ್ನು ಏ.29ರಂದು ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದರು. ವೈಜನಾಥ್‌ ಅವರನ್ನು ಮೇ 6ರಂದು ಬಂಧಿಸಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ದಿವ್ಯಾ ಹಾಗರಗಿ ಪತಿ ರಾಜೇಶ್‌ ಅವರನ್ನು ಏ.7ರಂದು ಪೊಲೀಸರು ಬಂಧಿಸಿದ್ದು, ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್‌ ಜಾಮೀನು ನೀಡಿದೆ.
 

click me!